ಚುನಾವಣೆಗೆ ಮುಹೂರ್ತ ಫಿಕ್ಸ್ : ಚಿತ್ರದುರ್ಗಕ್ಕೆ ಎಷ್ಟನೆ ಹಂತದಲ್ಲಿ ನಡೆಯಲಿದೆ ಚುನಾವಣೆ

ರಾಜ್ಯ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಕಲ ಸಿದ್ಧತೆ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

ಮಾ. 28 ರಂದು ಅಧಿಸೂಚನೆ, ಏ. 26 ರಂದು ಮತದಾನ, ಜೂ. 04 ಕ್ಕೆ ಮತ ಎಣಿಕೆ

 

 

 

ಮುಕ್ತ ನ್ಯಾಯ ಸಮ್ಮತ ಚುನಾವಣೆ : ಅಕ್ರಮಗಳಿಗೆ ಕಡಿವಾಣ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ 2ನೇ ಹಂತದಲ್ಲಿ ನಡೆಯಲಿದೆ. ತಕ್ಷಣದಿಂದಲೇ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ.  ಚುನಾವಣೆಗೆ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಘೋಷಣೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಂತೆ ಇದೇ ಮಾರ್ಚ್ 28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗುವುದು. ಏಪ್ರಿಲ್ 04 ರಂದು  ಗುರುವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಏಪ್ರಿಲ್ 05 ರಂದು ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಏಪ್ರಿಲ್ 08 ರಂದು ಸೋಮವಾರ ನಾಮಪತ್ರ ಹಿಂಪಡೆಯುಲು ಕೊನೆಯ ದಿನ. ಏಪ್ರಿಲ್ 26 ರಂದು  ಶುಕ್ರವಾರ ಮತದಾನ ನಡೆಯಲಿದೆ. ಜೂನ್ 04 ರಂದು ಮಂಗಳವಾರ ಮತಗಳ ಎಣಿಕೆ ನಡೆಯಲಿದೆ. ಜೂನ್ 6ರಂದು ಗುರುವಾರ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.
ಚಿತ್ರದುರ್ಗ (ಪರಿಶಿಷ್ಟ ಜಾತಿ) ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ಹಾಗೂ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ಸೇರಿದಂತೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಇರುತ್ತವೆ ಎಂದರು

Leave a Reply

Your email address will not be published. Required fields are marked *