Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಆಯೋಗಕ್ಕೆ ನಾಳೆಯೇ ನ್ಯಾಯಮೂರ್ತಿ ನೇಮಕ ಮಾದಿಗ ಸಮುದಾಯಕ್ಕೆ ಬೇಕಿಲ್ಲ ಆತಂಕ:ಚಿಂತೆ ಪಡೆದಂತೆ ಸಿಎಂ ಭರವಸೆ
ರಾಜ್ಯ

ಆಯೋಗಕ್ಕೆ ನಾಳೆಯೇ ನ್ಯಾಯಮೂರ್ತಿ ನೇಮಕ ಮಾದಿಗ ಸಮುದಾಯಕ್ಕೆ ಬೇಕಿಲ್ಲ ಆತಂಕ:ಚಿಂತೆ ಪಡೆದಂತೆ ಸಿಎಂ ಭರವಸೆ

D KumaraswamyBy D KumaraswamyNovember 7, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಆಯೋಗಕ್ಕೆ ನಾಳೆಯೇ ನ್ಯಾಯಮೂರ್ತಿ ನೇಮಕ ಮಾದಿಗ ಸಮುದಾಯಕ್ಕೆ ಬೇಕಿಲ್ಲ ಆತಂಕ:ಚಿಂತೆ ಪಡೆದಂತೆ ಸಿಎಂ ಭರವಸೆ

ಆಂಜನೇಯ ನಿನ್ಯಾಕೆ ಚಿಂತೆ ಮಾಡ್ತಿಯಾ, ನನ್ನ ಮೇಲೆ ನಂಬಿಕೆ ಇಲ್ವಾ, ನನಗೆ ರಾಜಕಾರಣಕ್ಕಿಂತಲೂ ಸಾಮಾಜಿಕ ನ್ಯಾಯ ಮುಖ್ಯ. ನಿನಗೆ ಗೊತ್ತು ತಾನೇ? ಒಳಮೀಸಲಾತಿ ಜಾರಿಗೊಳಿಸಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಚೋರನೂರು ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂದರ್ಭ ಸಿಎಂ ಸಿದ್ದರಾಮಯ್ಯ ನನ್ನೊಂದಿಗೆ ಚರ್ಚೆ ನಡೆಸಿದ ವೇಳೆ ಈ ಭರವಸೆ ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

 

ಆದಿಜಾಂಬ ಸಮುದಾಯಕ್ಕೆ ಆತಂಕ ಬೇಕಿಲ್ಲ. ನಿನಗೂ ಅಷ್ಟೇ. ಒಳಮೀಸಲಾತಿ ಜಾರಿಗೊಳಿಸುವುದು ನನ್ನ ಬದ್ಧತೆ ಆಗಿದೆ. ಆದ್ದರಿಂದಲೇ ಒಳಮೀಸಲಾತಿ ಜಾರಿಗೊಳಿಸಿದ ಸಂದರ್ಭ ಯಾವುದೇ ರೀತಿ ಕಾನೂನು ತೊಡಕು ಆಗದ ರೀತಿ ಎಚ್ಚರಿಕೆ ಹೆಜ್ಜೆ ಇಡಲು ದಿಟ್ಟ ಕ್ರಮಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.
ಆದ್ದರಿಂದಲೇ ದತ್ತಾಂಶ ಪಡೆಯಲು ಆಯೋಗ ರಚಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗಿದೆ. ಆಯೋಗಕ್ಕೆ ನ್ಯಾಯಮೂರ್ತಿ ನೇಮಕ ವಿಳಂಬ ಆಗಿಲ್ಲ. ನಾಳೆಯೇ ನ್ಯಾಯಮೂರ್ತಿಯೊಬ್ಬರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡುವೆ. ಈ ವಿಷಯದಲ್ಲಿ ಯಾಕಪ್ಪ ನಿನಗೆ ಆತಂಕ ಎಂದು ಪ್ರಶ್ನೀಸಿದರು ಎಂದು ಆಂಜನೇಯ ತಿಳಿಸಿದ್ದಾರೆ.

ಎಸ್‍ಸಿಎಸ್‍ಪಿ, ಟಿಎಸ್‍ಪಿ ಕಾಯ್ದೆ ಜಾರಿಗೆ ತಂದಿದ್ದು, ಕಾಮಗಾರಿ ಗುತ್ತಿಗೆಯಲ್ಲಿ ಎಸ್ಸಿ, ಎಸ್ಟಿಗೆ ಮೀಸಲಾತಿ ಜಾರಿಗೊಳಿಸಿದ್ದು ಯಾರೂ? ನಾನೇ ತಾನೇ. ಅದೇ ರೀತಿ ಒಳಮೀಸಲಾತಿಯನ್ನು ನಾನೇ ಜಾರಿಗೊಳಿಸುವೇ ಎಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಎಲ್ಲ ವರ್ಗದ ಬಡವರ ಪರ ಆಡಳಿತ ನಡೆಸುತ್ತದೆ. ಅದರಲ್ಲೂ ನಾವೇ ಪ್ರಾಣಾಳಿಕೆಯಲ್ಲಿ ಹೇಳಿದ ಭರವಸೆ ಈಡೇರಿಸುವುದು ನಮ್ಮ ಪ್ರಥಮ ಆದ್ಯತೆ, ಬದ್ಧತೆ ಆಗಿದೆ. ಆದ್ದರಿಂದ ಆದಿಜಾಂಬವ ಸಮುದಾಯ ಯಾವುದೇ ರೀತಿ ಸಂಶಯ ಪಡುವುದು ಬೇಡ ಎಂದಿದ್ದಾರೆ ಎಂದು ಹೇಳಿದ್ದಾರೆ.

ರಾಜಕೀಯ ಕಾರಣಕ್ಕೆ, ಚುನಾವಣೆಯಲ್ಲಿ ಮತಗಳಿಕೆಗಾಗಿ ವಿಪಕ್ಷದವರು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಾರೆ. ಅದಕ್ಕೆಲ್ಲ ಗಮನ ಕೊಡುವುದು ಬೇಡ. ನನ್ನ ಮತ್ತು ಕಾಂಗ್ರೆಸ್ ಆಡಳಿತದಲ್ಲಿ ಅಹಿಂದ ವರ್ಗಕ್ಕೆ ಸದಾ ಒಳಿತನ್ನೇ ಮಾಡಲಾಗಿದೆ. ಮುಂದೆಯೂ ಮಾಡುತ್ತೇವೆ. ಎಂತಹ ಷಡ್ಯಂತ್ರ ನಡೆಸಿದರೂ ನಾನು ಹಾಗೂ ನನ್ನ ಕಾಂಗ್ರೆಸ್ ಪಕ್ಷ ನೊಂದ ಜನರ ಪರ ಕಾನೂನು, ಯೋಜನೆ ರೂಪಿಸುವಲ್ಲಿ ಹೆಜ್ಜೆ ಹಿಂದಿಡುವುದಿಲ್ಲ. ಈಗಾಗಲೇ ಉದ್ಯೋಗ ನೇಮಕಾತಿಗೆ ತಡೆ ಹಾಕಿದ್ದೇವೆ. ಅದರರ್ಥ ನಾವು ಒಳಮೀಸಲಾತಿಯನ್ನು ಶೀಘ್ರ ಜಾರಿಗೊಳಿಸುವ ಬದ್ಧತೆ ಹೊಂದಿದ್ದೇವೆ ಎಂದರ್ಥ ಎಂದು ಸಿದ್ದರಾಮಯ್ಯ ಚರ್ಚೆ ವೇಳೆ ಸಿದ್ದರಾಮಯ್ಯ ಅಭಯ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಶ್ರದ್ಧೆಯಿಂದ ಕಲಿತು‌ ಭವಿಷ್ಯ ರೂಪಿಸಿಕೊಳ್ಳಿ: ಶಾಸಕ ಎಂ. ಚಂದ್ರಪ್ಪ
Next Article ಅನನ್ಯ ವಿದ್ಯಾ ದೇಗುಲ ಪ್ರಶಸ್ತಿಗೆ ಭಾಜನವಾದ ನೂತನ್ ಎಜುಕೇಷನ್ ಸೊಸೈಟಿ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.