Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕಾಂಗ್ರೆಸ್ ಸರ್ಕಾರದ ವಿರುದ್ಧ ಆ. 1 ರಂದು ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
ರಾಜ್ಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಆ. 1 ರಂದು ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

D KumaraswamyBy D KumaraswamyJuly 30, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ ,ಜು30: ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿ ಆ.1 ಕ್ಕೆ ಒಂದು ವರ್ಷ ಪೂರೈಸುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಷ್ಟಾನಕ್ಕೆ ತರಲು ಮೀನಾಮೇಷ ಎಣಿಸುತ್ತಿರುವುದರಿಂದ ಆ. 1 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ದಲಿತ ಮುಖಂಡ ಚಳ್ಳಕೆರೆ ಸೂರನಹಳ್ಳಿ ಶ್ರೀನಿವಾಸ್ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿ, ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಸಂಸದ ಎ.ನಾರಾಯಣಸ್ವಾಮಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, 4 ರಿಂದ 5 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಪ್ರತಿ ತಾಲ್ಲೂಕಿನಿಂದಲೂ ಮಾದಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಒಳ ಮೀಸಲಾತಿ ಜಾರಿಗಾಗಿ ಕಳೆದ 35 ವರ್ಷಗಳಿಂದಲೂ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಮಾದಿಗರನ್ನು ವಂಚಿಸುತ್ತ ಬರುತ್ತಿರುವುದರಿಂದ ಈ ಬಾರಿ ಒಳ ಮೀಸಲಾತಿ ಜಾರಿಯಾಗುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.
ಜಿ.ಹೆಚ್.ಮೋಹನ್‍ಕುಮಾರ್ ಮಾತನಾಡಿ, ಮೂರವರೆ ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಅರೆ ಬೆತ್ತಲೆ ಮೆರವಣಿಗೆ, ಹೋರಾಟ, ಚಳುವಳಿಗಳನ್ನು ಮಾಡಿದ್ದೇವೆ. ಮಾದಿಗರ ಮತಗಳನ್ನು ಪಡೆದಿರುವ ಕಾಂಗ್ರೆಸ್ ಪಕ್ಷ ನಮ್ಮನ್ನು ನಡು ಬೀದಿಯಲ್ಲಿ ನಿಲ್ಲಿಸಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವಂತೆ ತೀರ್ಪು ನೀಡಿ ಆ.1 ಕ್ಕೆ ಒಂದು ವರ್ಷವಾಗುತ್ತದೆ. ಹಾಗಾಗಿ ಅಂದೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆಂದರು.
2008 ರಲ್ಲಿ ಸದಾಶಿವ ಆಯೋಗವನ್ನು ರಚಿಸಲಾಯಿತು. ಈಗ ದತ್ತಾಂಶ ಸಂಗ್ರಹಕ್ಕಾಗಿ ನಾಗಮೋಹನ್‍ದಾಸ್ ಆಯೋಗವನ್ನು ರಚಿಸಿದೆ. ಇದು ಮಾದಿಗರ ಬೇಡಿಕೆಯಲ್ಲ.
ಆದ್ದರಿಂದ ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸಲು ಆ.1 ರಂದು ಬೆಳಿಗ್ಗೆ 10-30 ಕ್ಕೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಆ.11 ರಿಂದ ಆರಂಭಗೊಳ್ಳುವ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ವರದಿ ಮಂಡನೆ ಚರ್ಚೆಯಾಗಬೇಕು. ಮುಂದೂಡುವ ಪ್ರಯತ್ನ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಹೇಳಿದರು.
ಚನ್ನಗಾನಹಳ್ಳಿ ಮಲ್ಲೇಶ್ ಮಾತನಾಡಿ ಮಾದಿಗರ ಮತಗಳನ್ನು ಪಡೆದು ಅಧಿಕಾರದಲ್ಲಿ ಕುಳಿತಿರುವ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದಿರುವುದನ್ನು ವಿರೋಧಿಸಿ ಆ.1 ರಂದು ಪ್ರತಿಭಟನೆಗೆ ಮುಂದಾಗಿದ್ದೇವೆ. ನಮ್ಮ ಸಮುದಾಯ ಇನ್ನಾದರೂ ಎಚ್ಚೆತ್ತುಕೊಂಡು ಹೋರಾಟಕ್ಕೆ ಬರಬೇಕೆಂದು ವಿನಂತಿಸಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಯಣ್ಣ ಮಾತನಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಗಿರೀಶ್, ಪರಶುರಾಂ, ಪ್ರಹ್ಲಾದ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಕೋಟೆ ನಾಡಿನಲ್ಲಿ‌ ನಡೀತು ವಿಶೇಷ ಮಂತ್ರ ಮಾಂಗಲ್ಯ ವಿವಾಹ
Next Article ಒಳ ಮೀಸಲಾತಿಗೆ ಆಗ್ರಹಿಸಿ ಸ್ವಾಭಿಮಾನಿ ಮಾದಿಗ ಮಹಾಸಭಾ ಪ್ರತಿಭಟನೆ : ಜಿಲ್ಲಾಧಿಕಾರಿ‌ಕಚೇರಿ ಮುತ್ತಿದ ಪ್ರತಿಭಟನಾಕಾರರು
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.