Breaking | ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ

ಜಿಲ್ಲಾ ಸುದ್ದಿ ದೇಶ ರಾಜಕೀಯ ರಾಜ್ಯ
Spread the love

 

ಚಿತ್ರದುರ್ಗ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹಿರಿಯೂರು ಶಾಸಕ ಡಿ. ಸುಧಾಕರ್ ಅವರು ಇಂದು ಮುಂಜಾನೆ 3.15ಕ್ಕೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

 

 

ಕಳೆದ ಕೆಲವು ತಿಂಗಳಿನಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೊಣಕಾಲು ಶಸ್ತ್ರಚಿಕಿತ್ಸೆಯ ನಂತರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಹಿರಿಯೂರಿಗೆ ತರಲಾಗುವುದು. ಸಾರ್ವಜನಿಕರ ದರ್ಶನದ ನಂತರ ಚಳ್ಳಕೆರೆಯ ಸ್ವಂತ ನಿವಾಸದ ಬಳಿ ಸಂಜೆ 4 ಗಂಟೆಗೆ ತರಲಾಗುತ್ತದೆ. ಅಲ್ಲಿ ಸಾರ್ವಜನಿಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಪ್ತ ಸಹಾಯಕ ಪ್ರಕಾಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *