ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರೇರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ

ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರೇರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.

 

 

 

ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು. ಜಡಗಟ್ಟಿದ ಸಮಾಜವನ್ನು ಸಕ್ರಿಯಗೊಳಿಸಿ, ಮಾನವೀಯತೆಯುಳ್ಳ ಹೊಸ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು ಎಂದರು ತಿಳಿಸಿದರು.

ನುಡಿದಂತೆ ನಡೆಯಲು ಪ್ರಾಮಾಣಿಕ ಪ್ರಯತ್ನ :

ನಾವೆಲ್ಲರೂ ನುಡಿದಂತೆ ನಡೆಯಬೇಕು ಎಂಬ ವಿಚಾರವನ್ನು ಬಸವಾದಿ ಶರಣರು ನಮ್ಮ ಸಮಾಜಕ್ಕೆ ನೀಡಿದರು. ಈ ವಿಚಾರದಲ್ಲಿ ನಂಬಿಕೆಯಿರುವ ನಮ್ಮ ಸರ್ಕಾರ ನುಡಿದಂತೆ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಗೃಹಜ್ಯೋತಿ, , ಶಕ್ತಿ, ಅನ್ನಭಾಗ್ಯ, ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಸುಮಾರು 30 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದರು.

Leave a Reply

Your email address will not be published. Required fields are marked *