Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ : ಭಕ್ತಿ ಸಾಗರದಲ್ಲಿ ಮಿಂದೆದ್ದ ಭಕ್ತಾದಿಗಳು
ರಾಜ್ಯ

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ : ಭಕ್ತಿ ಸಾಗರದಲ್ಲಿ ಮಿಂದೆದ್ದ ಭಕ್ತಾದಿಗಳು

D KumaraswamyBy D KumaraswamyMarch 10, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ : ಭಕ್ತಿ ಸಾಗರದಲ್ಲಿ ಮಿಂದೆದ್ದ ಭಕ್ತಾದಿಗಳು

 

 

ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿದ ಈ ಭಾಗದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.  ಲಕ್ಷಾಂತರ ಭಕ್ತರು ಭಕ್ತಿ ಭಾವ ಸಮರ್ಪಿಸಿ ಪುನೀತರಾದರು.

ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.   ಸುಡುವ ಬಿಸಿಲು ಲೆಕ್ಕಿಸದೆ ಹಟ್ಟಿ ತಿಪ್ಪೇಶನ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು.  ನಾಯಕನಹಟ್ಟಿಯ ದೊಡ್ಡ ಕೆರೆ ಕಟ್ಟಿಸಿದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ಮಧ್ಯ ಕರ್ನಾಟಕದ ಜನಮನದಲ್ಲಿ ನೆಲೆ ನಿಂತಿದ್ದಾರೆ.  ಪರಿಣಾಮ ಪಕ್ಕದ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಲಕ್ಷಾಂತರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದ್ದರು.
ಗುರು ತಿಪ್ಪೇರುದ್ರಸ್ವಾಮಿಯ  ಹೊರಮಠ ಹಾಗೂ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಭಕ್ತಿ ಭಾವ ಮೆರೆದರು.
ಶುಕ್ರವಾರ ಮಧ್ಯಾಹ್ನ 3.45ರ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ಅಸಂಖ್ಯ ಭಕ್ತರು ತಿಪ್ಪೇರುದ್ರಸ್ವಾಮಿ ರಥವನ್ನು ರಥ ಬೀದಿಯಿಂದ ಹೊರಮಠದವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.  ರಥವು ತೇರು ಬೀದಿಯಿಂದ ಪಾದಗಟ್ಟೆಯವರೆಗೆ ಚಲಿಸುವಾಗ ಭಕ್ತರು ರಥಕ್ಕೆ ಬಾಳೆಹಣ್ಣು, ಕಾಳುಮೆಣಸು, ಧವನ, ಹೂವು, ಚೂರು ಬೆಲ್ಲವನ್ನು ಸಮರ್ಪಿಸಿ ತಮ್ಮ ಇಷ್ಟಾರ್ಥ ಈಡೇರಿಸುವಂತೆ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತಾ ‘ತಿಪ್ಪೇರುದ್ರಸ್ವಾಮಿಗೆ ಜಯವಾಗಲಿ’, ‘ಕಾಯಕ ಯೋಗಿಗೆ ಜಯವಾಗಲಿ’ ಎನ್ನುವ ಜಯಘೋಷ ಕೂಗುತ್ತಾ ರಥದ ದೊಡ್ಡ ಗಾತ್ರದ ಹಗ್ಗ ಎಳೆದು ಧನ್ಯರಾದರು

Share. Facebook Twitter Pinterest LinkedIn Tumblr WhatsApp Email
Previous Article5 ಮತ್ತು8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ
Next Article 55 ಲಕ್ಷ ರೂ.ಗೆ ಮುಕ್ತಿಭಾವುಟ ಹರಾಜು: ಮಾಜಿ ಶಾಸಕ ಸುಧಾಕರ್ ಪಾಲಾದ ಮುಕ್ತಿ ಬಾವುಟ
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.