Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಜಾತಿಗಣತಿ ಸರ್ವೇ ವಿಸ್ತರಣೆ ಬೇಡ ಒಳಮೀಸಲಾತಿ ಜಾರಿಗೆ ಶೀಘ್ರ ಕ್ರಮ ಅಗತ್ಯಮಾಜಿ ಸಚಿವ ಎಚ್.ಆಂಜನೇಯ ಒತ್ತಾಯ
ರಾಜ್ಯ

ಜಾತಿಗಣತಿ ಸರ್ವೇ ವಿಸ್ತರಣೆ ಬೇಡ ಒಳಮೀಸಲಾತಿ ಜಾರಿಗೆ ಶೀಘ್ರ ಕ್ರಮ ಅಗತ್ಯಮಾಜಿ ಸಚಿವ ಎಚ್.ಆಂಜನೇಯ ಒತ್ತಾಯ

D KumaraswamyBy D KumaraswamyJune 18, 2025No Comments3 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

*ಪತ್ರಿಕಾ ಪ್ರಕಟಣೆ ಕೃಪೆಗಾಗಿ*

ಜಾತಿಗಣತಿ ಸರ್ವೇ ವಿಸ್ತರಣೆ ಬೇಡ ಒಳಮೀಸಲಾತಿ ಜಾರಿಗೆ ಶೀಘ್ರ ಕ್ರಮ ಅಗತ್ಯಮಾಜಿ ಸಚಿವ ಎಚ್.ಆಂಜನೇಯ ಒತ್ತಾಯ

ಬೆಂಗಳೂರು, ಜೂ.18: ಜಾತಿಗಣತಿ ಸಮೀಕ್ಷೆ ಕಾರ್ಯವು ಆಮೆನಡಿಗೆಯಲ್ಲಿ ಆರಂಭಗೊಂಡು, ಈಗ ಅತ್ಯಂತ ಚುರುಕು ಪಡೆದುಕೊಂಡಿದೆ. ಜೊತೆಗೆ ಬಹಳಷ್ಟು ಅವಕಾಶವನ್ನು ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಆಯೋಗವು ನೀಡಿದೆ. ಆದ್ದರಿಂದ ಜೂ.22 ಅಂತಿಮ ದಿನ ಆಗಬೇಕು. ಮತ್ತೊಮ್ಮೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದರು.

ಜಾತಿಗಣತಿ ಸರ್ವೇ ಕಾರ್ಯದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿಸಲು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿ ವ್ಯಾಪ್ತಿಯ ಪರಿಶಿಷ್ಟರ ವಾಸದ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.

ಆಂಜನೇಯ ಅವರು ಪ್ರದೇಶಕ್ಕೆ ಪ್ರವೇಶಿಸುತ್ತಿದ್ದಂತೆ ಸ್ಥಳೀಯ ಮುಖಂಡರು, ಮಾದಿಗ ಸಮುದಾಯದವರು ಅದ್ದೂರಿಯಾಗಿ ಬರಮಾಡಿಕೊಂಡು ಮನೆ ಮನೆಗೆ ಭೇಟಿ ಮಾಡಿಸಿದರು.
ಈ ವೇಳೆ ಜಾತಿಗಣತಿ ಸರ್ವೇ ವೇಳೆ ನೊಂದಾಯಿಸಿದ್ದರ ಬಳಿ ನೀವು ಏನೆಂದು ಬರೆಯಿಸಿದ್ದೀರಾ ಎಂದು ಆಂಜನೇಯ ಪ್ರಶ್ನೀಸಿದರು. ಜಾತಿ ಆದಿಕರ್ನಾಟಕ, ಮೂಲ ಜಾತಿ ಮಾದಿಗ 061 ಎಂದು ಬರೆಯಿಸಿದ್ದೇವೆ ಎಂದು ಹೇಳಿದರು.
ಅದೇ ರೀತಿ ಅನೇಕ ಮನೆಗಳಿಗೆ ಭೇಟಿ ನೀಡಿ, ನೀವುಗಳು ತಕ್ಷಣ ಸರ್ವೇ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಜಾತಿ ಹೇಳಿಕೊಳ್ಳಲು ಹಿಂಜರಿಕೆ ಬೇಡ. ಇದು ಮೀಸಲಾತಿ ಪಡೆಯಲು ಇರುವ ಏಕೈಕ ಮಾರ್ಗ. ಕೀಳರಿಮೆ ತೊರೆಯದಿದ್ದರೆ ನಿಮಗೆ ಮೀಸಲಾತಿ ಸೌಲಭ್ಯ ದೊರೆಯುವುದಿಲ್ಲ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಮೂಲ ಜಾತಿ ಮಾದಿಗ 061 ಎಂದು ಬರೆಯಿಸುವ ಮೂಲಕ ಒಳಮೀಸಲಾತಿಯಲ್ಲಿ ಹೆಚ್ಚು ಪಾಲು ಪಡೆಯಲು ಮುಂದಾಗಬೇಕು ಎಂದು ತಿಳಿಸಿದರು.

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಮಾದಿಗರು ಸ್ವಾಭಿಮಾನದಿಂದ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ನಗರ ಪ್ರದೇಶ ಅದರಲ್ಲೂ ಬೆಂಗಳೂರಿನಲ್ಲಿ ಸಾಮಾಜಿಕ ಕಾರಣಕ್ಕೆ ಜಾತಿ ಹೇಳಿಕೊಳ್ಳಲು ಹಿಂಜರಿದಿದ್ದು, ಸಮೀಕ್ಷೆ ಕಾರ್ಯಕ್ಕೆ ತೀವ್ರ ಹಿನ್ನಡೆ ಆಗಿದೆ. ಈ ಸತ್ಯ ಅರಿತು ಸರ್ಕಾರ ಮತ್ತು ಆಯೋಗ ಮೂರು ಬಾರಿ ಸವೇ ಕಾರ್ಯ ದಿನಾಂಕವನ್ನು ವಿಸ್ತರಿಸಿದೆ. ಇದೇ ಅಂತಿಮ ಅವಕಾಶ, ಮತ್ತೊಮ್ಮೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ ಎಂದರು.
ಆದ್ದರಿಂದ ಸಮುದಾಯದ ಚಿಂತಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ನೌಕರರು ಸಮಾಜದ ಋಣ ತೀರಿಸಲು ಜೊತೆಗೆ ನಮ್ಮಗಳ ಭವಿಷ್ಯ ಉಜ್ವಲಕ್ಕಾಗಿ ಸಮೀಕ್ಷೆ ಕಾರ್ಯ ಕುರಿತು ಎಸ್ಸಿ ಕಾಲೋನಿ ಜೊತೆಗೆ ಸಮುದಾಯದವರಲ್ಲಿ ಜಾಗೃತಿ ಮೂಡಿಸಬೇಕು. ಜೊತೆಗೆ ಸಮೀಕ್ಷೆದಾರರ ಜೊತೆಗೆ ಮನೆ ಮನೆಗೆ ಹೋಗಿ ಮಾದಿಗ 061 ಎಂದು ಬರೆಯಿಸಲು ಬದ್ಧತೆ ಪ್ರದರ್ಶಿಸಬೇಕು. ಈ ಮೂಲಕ ಯಾರೊಬ್ಬರೂ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರವಹಿಸಬೇಕು ಎಂದರು.

ಈಗಾಗಲೇ ರಾಜ್ಯಾದ್ಯಂತ ಸುತ್ತಾಟ ನಡೆಸಿದ್ದೇನೆ, ಎಲ್ಲೆಡೆಯೂ ಜಾಗೃತಿ ಮೂಡಿಸಿದ್ದೇನೆ. ಜನರು ಹೆಚ್ಚು ಜಾಗೃತಗೊಂಡಿದ್ದಾರೆ. ಅದೇ ರೀತಿ ಬೆಂಗಳೂರು ಪ್ರದೇಶದಲ್ಲೂ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘಟನೆಗಳ ಮುಖಂಡರು, ಚಿಂತಕರು, ನೌಕರರ ಜವಾಬ್ದಾರಿ ಹೆಚ್ಚು ಇದೆ ಎಂದು ಹೇಳಿದರು.
ಜೂ.22ರ ಬಳಿಕ ಗಡುವ ವಿಸ್ತರಣೆ ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಆಯೋಗಕ್ಕೆ ಮನವಿ ಮಾಡುತ್ತೇವೆ. ಈಗಾಗಲೇ ಬಹಳಷ್ಟು ಅವಕಾಶ ನೀಡಲಾಗಿದೆ. ಈಗ ಏನಿದ್ದರೂ ಸಮೀಕ್ಷೆ ಅವಧಿ ಮುಗಿಯುತ್ತಿದ್ದಂತೆ ಏಳೆಂಟು ದಿನಗಳಲ್ಲಿ ಪರಿಶಿಷ್ಟರಲ್ಲಿ ಯಾವ್ಯಾವ ಸಮುದಾಯ ಭೂಮಿ, ಮನೆ, ಸರ್ಕಾರಿ ನೌಕರಿ, ಶಿಕ್ಷಣ, ಆರ್ಥಿಕ ಪರಿಸ್ಥಿತಿಯ ದತ್ತಾಂಶ ಒಳಗೊಂಡ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಜೊತೆಗೆ ಅತ್ಯಂತ ಹಿಂದುಳಿದ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಖು ಎಂದರು.

ಸದಾಶಿವ, ಮಾಧುಸ್ವಾಮಿ ಈ ಎರಡು ವರದಿಯಲ್ಲಿ ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ನೀಡಲಾಗಿತ್ತು. ನಾಗಮೋಹನ್ ದಾಸ್ ಆಯೋಗವೂ ದತ್ತಾಂಶದ ಆಧಾರಡಿ ಇನ್ನಷ್ಟು ಹೆಚ್ಚು ಮೀಸಲಾತಿ ನೀಡುವ ವಿಶ್ವಾಸ ಇದೆ ಎಂದು ಹೇಳಿದರು.

 

 

*ಬಾಕ್ಸ್* ಹೂಮಳೆಯ ಸನ್ಮಾನ
ಹೂಡಿ ಪ್ರದೇಶದಲ್ಲಿ ಭಾರತೀಯ ಸೇವಾ ಸಮಿತಿ ಆಯೋಜಿಸಿದ್ದ ಸಭೆಯಲ್ಲಿ ಆಂಜನೇಯ ಅವರನ್ನು ಸಮಿತಿ ಕಾರ್ಯಕರ್ತರು, ಸಮುದಾಯದ ಮುಖಂಡರು ಹೂಮಳೆಗೈದು ಸನ್ಮಾನಿಸಿ ಅಭಿಮಾನ ಪ್ರದರ್ಶಿಸಿದರು. ಮಾದಿಗ ಸಮುದಾಯ ಹಿಂದುಳಿದಿದ್ದು, ಜಾತಿಗಣತಿ ಸಮೀಕ್ಷೆ ಕಾರ್ಯ ಆರಂಭಕ್ಕೂ ಮುನ್ನವೇ ಮಾದಿಗರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುವ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ಆಂಜನೇಯ ಅವರು ನೀಡಿದ್ದಾರೆ. ಹಗಲು-ರಾತ್ರಿ ರಾಜ್ಯಾದ್ಯಂತ ಏಕಾಂಗಿಯಾಗಿ ಸುತ್ತಾಟ ನಡೆಸಿ ಮಾದಿಗರದಲ್ಲಿ ಸ್ವಾಭಿಮಾನ ಕಿಚ್ಚು ಹಚ್ಚುವ ಜೊತೆಗೆ ಸರ್ಕಾರದ ಮೇಲೆ ಒತ್ತಡ ತರುತ್ತಲೇ, ನಾಗಮೋಹನ್ ದಾಸ್ ಆಯೋಗದೊಂದಿಗೆ ಸಂಘಟನೆಗಳು ಹೆಜ್ಜೆ ಹಾಕಿ, ಶೀಘ್ರ ಒಳಮೀಸಲಾತಿ ಜಾರಿಗಾಗಿ ಶ್ರಮಿಸುತ್ತಿರುವುದು ಮಾದರಿ ಆಗಿದೆ ಎಂದರು.

ಆಂಜನೇಯ ಅವರಲ್ಲಿ ಸಮುದಾಯದ ಕುರಿತ ಕಕ್ಕುಲತೆ ಕಂಡು ಬೇರೆ ಸಮುದಾಯವರು ಕೂಡ ಜಾಗೃತರಾಗಿದ್ದಾರೆ. ಇಂತಹ ನಾಯಕ ಸಿಕ್ಕ ಮಾದಿಗ ಸಮುದಾಯದವರು ಪುಣ್ಯವಂತರು. ನಮ್ಮ ಜಾತಿಗೂ ಇಂತಹ ರಾಜಕಾರಣಿ ಇರಬೇಕಾಗಿತ್ತು ಎಂದು ಹೇಳುತ್ತಿದ್ದಾರೆ. ಅಷ್ಟರಮಟ್ಟಿಗೆ ಆಂಜನೇಯ ಅವರು ಮಾದಿಗ ಸಮುದಾಯಕ್ಕೆ ಒಳಮೀಸಲಾತಿಯಲ್ಲಿ ನ್ಯಾಯ ಒದಗಿಸಲು ಶ್ರಮಿಸುತ್ತಿದ್ದಾರೆ. ಅವರ ಸೇವೆ ಸ್ಮರಣೀಯ ಎಂದು ಅಭಿಮಾನ ವ್ಯಕ್ತಪಡಿಸಿದರು.

ರಾಮಚಂದ್ರ ಚಿನ್ನಿ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವಿ.ವಿಕ್ರಮ್, ಕೃಷ್ಣಮೂರ್ತಿ, ನಾಗರಾಜ್, ಮಂಜುನಾಥ್, ಬಸವರಾಜ್, ಸತೀಶ್, ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಮುಖಂಡ ಕೇಶವಮೂರ್ತಿ, ಮಾದಿಗ ದಂಡೋರ ಸಮಿತಿಯ ಮುಖಂಡ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

ಫೋಟೋ ಕ್ಯಾಪ್ಷನ್

ಹೂಡಿ ಪ್ರದೇಶದಲ್ಲಿ ಜಾತಿಗಣತಿ ಸಮೀಕ್ಷೆ ಕಾರ್ಯ ಅಭಿಯಾನದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ತಮಟೆ ಬಾರಿಸಿ ಜಾಗೃತಿ ಮೂಡಿಸುತ್ತಿರುವುದು.

ಹೂಡಿ ಪ್ರದೇಶದಲ್ಲಿ ಜಾತಿಗಣತಿ ಸಮೀಕ್ಷೆ ಕಾರ್ಯ ಕುರಿತು ಮಾಜಿ ಸಚಿವ ಎಚ್.ಆಂಜನೇಯ ಜಾಗೃತಿ ಜಾಥಾ ನಡೆಸಿದರು.

ಹೂಡಿ ಪ್ರದೇಶದಲ್ಲಿ ಜಾತಿಗಣತಿ ಸಮೀಕ್ಷೆ ಕಾರ್ಯ ಮೂಲ ಜಾತಿ ಏನೆಂದು ಬರೆಯಿಸಿದ್ದೀರಾ ಎಂದು ಮಾಜಿ ಸಚಿವ ಎಚ್.ಆಂಜನೇಯ ಮಾಹಿತಿ ಪಡೆಯುತ್ತಿರುವುದು.

ಹೂಡಿ ಪ್ರದೇಶದಲ್ಲಿ ಭಾರತೀಯ ಸೇವಾ ಸಮಿತಿ ಆಯೋಜಿಸಿದ್ದ ಜಾತಿಗಣತಿ ಸಮೀಕ್ಷೆ ಕಾರ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಎಚ್.ಆಂಜನೇಯ ಅವರನ್ನು ಹೂವಿನ ಮಳೆಗೈದು ಸನ್ಮಾನಿಸಲಾಯಿತು.

Share. Facebook Twitter Pinterest LinkedIn Tumblr WhatsApp Email
Previous Articleಎಸ್.ಎಲ್.ವಿ. ಪದವಿಪೂರ್ವ ಕಾಲೇಜಿಗೆ ನೀಟ್ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ
Next Article ಹೊಳಲ್ಕೆರೆ ಕ್ಷೇತ್ರದ ಜನರಿಗೆ ಗುಡ್ ನ್ಯೂಸ್ ಕೊಟ್ಟ ಶಾಸಕ ಎಂ. ಚಂದ್ರಪ್ಪ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.