ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ

ರಾಜ್ಯ

ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.25 ರಂದು ಬೆಳಗ್ಗೆ 10.30 ಕ್ಕೆ ರಾಘವೇಂದ್ರ ಮಂಗಲಭವನದಲ್ಲಿ ಪತ್ರಿಕಾ ದಿನಾಚರಣೆ, ಪದಾಧಿಕಾರಿಗಳ ಪದಗ್ರಹ ಹಾಗೂ ವಿಕಲಚೇತನರಿಗೆ ಸೌಲಭ್ಯಗಳ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲೂಕಾಧ್ಯಕ್ಷ ಶಂಕರ ಹೆಬ್ಬಾಳ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,ಕಾರ್ಯಕ್ರಮದ
ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ದೇವರು,ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸುವರು.ಗುರುತಿನ ಕಾರ್ಡ್ ಗಳನ್ನು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ವಿತರಣೆ ಮಾಡುವರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು‌. ಕಾನಿಪ ಧ್ವನಿ ಸಂಘದ ಉಪಾಧ್ಯಕ್ಷ ಅನಿಲ್ ಹಡಪದ(ತೇಲಂಗಿ) ಮಾತನಾಡಿ,ವಿಕಲಚೇತನರಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮ ವಿಶೇಷವಾಗಿದ್ದು ಪತ್ರಿಕಾ ಸಂಘಟನೆ ದಾನಿಗಳ ನೆರವಿನಿಂದ ದಿವ್ಯಾಂಗರಿಗೆ ಆಸರೆ ಒದಗಿಸುವ ಕಾರ್ಯ ಮಾಡುತ್ತಿದೆ ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಂತ ಪೂಜಾರಿ ಸೌಲಭ್ಯಗಳ ವಿತರಣೆ ಮಾಡುವರು.ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ತಾಲೂಕಾ ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ್ ನಡಹಳ್ಳಿ, ಬಾಲಾಜಿ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶಗೌಡ ಪಾಟೀಲ,ಬ.ಬಾಗೇವಾಡಿ ಕೃಷಿ ಅಧಿಕಾರಿ ಅರವಿಂದ ಹೂಗಾರ,
ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ,ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ,ಕಾನಿಪ ಧ್ವನಿ ಸಂಘಟನೆ ಜಿಲ್ಲಾಧ್ಯಕ್ಷ ಯೂಸೂಫ್ ನೇವಾರ,ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ,ವಿದ್ಯಾಸ್ಪೂರ್ತಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಬಸಮ್ಮ ಸಿದರೆಡ್ಡಿ,ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ತಾಳಿಕೋಟೆ ಹಿರಿಯ ಪತ್ರಕರ್ತ ಜಿ.ಟಿ.ಘೋರ್ಪಡೆ,ಮನಿಯಾರ ಸೇವಾ ಟ್ರಸ್ಟ್ ಅಧ್ಯಕ್ಷ ಅಯೂಬ್ ಮನಿಯಾರ,ಕಾನಿಪ ಧ್ವನಿ ಸಂಘಟನೆ ಜಿಲ್ಲಾ ಪದಾಧಿಕಾರಿಗಳಾದ ಮಾರುತಿ ಹಿಪ್ಪರಗಿ, ರವಿ ತೇಲಂಗಿ,ರವಿ ದಂಡಿನ ಆಗಮಿಸಲಿದ್ದಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗುಲಾಮೊಹ್ಮದ ದಫೇದಾರ,ಖಜಾಂಚಿ ಹಣಮಂತ ನಲವಡೆ ಇದ್ದರು.

 

 

 

Leave a Reply

Your email address will not be published. Required fields are marked *