Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ
ರಾಜ್ಯ

ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ

D KumaraswamyBy D KumaraswamyJuly 28, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಗಣಿಗಾರಿಕೆಯ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸೂಚನೆ

ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಹಾಗೂ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

 

 

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮವು ಗಣಿಬಾಧಿತ ಜಿಲ್ಲೆಗಳಲ್ಲಿ ಸುಪ್ರೀಂ ಕೋರ್ಟ್‌ ಅನುಮೋದನೆಯಂತೆ ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆಯ (CEPMIZ) ಕ್ರಿಯಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಪರಿಣಾಮಕಾರಿಯಾಗಿಸಲು ನಿಗಮದ ಬೈಲಾ ತಿದ್ದುಪಡಿ ಮಾಡಿ ಮುಖ್ಯಮಂತ್ರಿಯವರನ್ನು ಆಡಳಿತ ಮಂಡಳಿ ಅಧ್ಯಕ್ಷರನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಅವರು ಇಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಕಾರ್ಯಚಟುವಟಿಕೆಗಳ ಪರಿಶೀಲನೆ ನಡೆಸಿದರು. ರಾಜ್ಯದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು- ಈ 4 ಜಿಲ್ಲೆಗಳ 466 ಗ್ರಾಮಗಳನ್ನು ಗಣಿ ಬಾಧಿತ ಎಂದು ಘೋಷಿಸಲಾಗಿದ್ದು, ಈ ಗ್ರಾಮಗಳ ಅಭಿವೃದ್ಧಿಗೆ ಸುಪ್ರೀಂ ಕೋರ್ಟು 24,996.71 ಕೋಟಿ ರೂ. ಅಂದಾಜು ವೆಚ್ಚದ ಕ್ರಿಯಾ ಯೋಜನೆಯನ್ನು ಅನುಮೋದಿಸಿದೆ. ಸುಪ್ರೀಂ ಕೋರ್ಟಿನ ಆದೇಶದಂತೆ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶ ಶ್ರೀ ಸುದರ್ಶನ ರೆಡ್ಡಿ ಅವರನ್ನು ಮೇಲುಸ್ತುವಾರಿ ಪ್ರಾಧಿಕಾರವಾಗಿ ನೇಮಕ ಮಾಡಲಾಗಿದ್ದು, ಯೋಜನೆಗಳ ಅನುಮೋದನೆ ಮತ್ತು ಅನುಷ್ಠಾನದ ಮೇಲುಸ್ತುವಾರಿಯನ್ನು ನೀಡಲಾಗಿದೆ. ಈ ಪ್ರಾಧಿಕಾರವು ಈ ವರೆಗೆ 4 ಜಿಲ್ಲೆಗಳಲ್ಲಿ ಒಟ್ಟು 7634.96 ಕೋಟಿ ರೂ. ಮೊತ್ತದ 317 ಪ್ರಸ್ತಾವನೆಗಳನ್ನು ಅನುಮೋದಿಸಿದೆ.
ಉಳಿದ ಪ್ರಸ್ತಾವನೆಗಳನ್ನು ತ್ವರಿತವಾಗಿ ಸಿದ್ಧಪಡಿಸಿ ಅನುಮೋದನೆ ಪಡೆಯಲು ಅನುವಾಗುವಂತೆ ಈ ನಾಲ್ಕು ಜಿಲ್ಲೆಗಳಲ್ಲಿ ಎಂಜಿನಿಯರಿಂಗ್‌ ಕೋಶವನ್ನು ಸ್ಥಾಪಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತ್ವರಿತವಾಗಿ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.

ಈ ಯೋಜನೆಯನ್ನು ಸದ್ಬಳಕೆ ಮಾಡುವ ಮೂಲಕ ಗಣಿಬಾಧಿತ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದ್ದು, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ತೋಟಗಾರಿಕೆ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್ . ಮಲ್ಲಿಕಾರ್ಜುನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಡಾ.ಕೆ. ಗೋವಿಂದರಾಜು, ನಸೀರ್ ಅಹ್ಮದ್ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ. ಈ. ವಿ. ರಮಣ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಪತ್ರಕರ್ತರ ಭವನಕ್ಕೆ ನಿವೇಶನ ನೀಡುವಂತೆ ಅರ್ಜಿ ಸಲ್ಲಿಸಿದ ಕಾನಿಪಸ
Next Article ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.