ಚಿತ್ರದುರ್ಗ ಆ. 20:
ನಗರದ ಹೊರವಲಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿ ಅಮಾನುಷವಾಗಿ ಸುಟ್ಟು ಕೊಲೆ ಮಾಡಿರುವ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆಗಡುಕರನ್ನು ಹಿಡಿದು ಕಾನೂನಿನ ಅನ್ವಯ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಎಬಿವಿಪಿ ದಲಿತ ಸಂಘಟನೆಗಳು ಮತ್ತು ಗ್ರಾಮಸ್ಥರು ಮತ್ತು ಪೋಷಕರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದವು.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ಜಮಾಯಿಸಿದ ವಿದ್ಯಾರ್ಥಿ ಪರಿಷತ್ನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯ ಕೊಲೆಯ ವಿರುದ್ದ ಘೋಷಣೆಗಳನ್ನು ಕೂಗಿ ಸರ್ಕಾರಕ್ಕೆ ಧಿಕ್ಕಾರವನ್ನು ಹೇಳಿ ಕೊಲೆಗಡುಕರನ್ನು ಶೀಘ್ರವಾಗಿ ಪತ್ತೇ ಮಾಡುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.ಇನ್ನೊಂದೆಡೆ ದಲಿತ ಪರ ಸಂಘಟನೆಗಳು ಮತ್ತು ಕರುನಾಡ ವಿಜಯಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನೆಡೆಸಿದವು. ಪ್ರತಿಭಟನಾಕಾರರು ಡಿಸಿ ವೃತ್ತ, ಅಂಬೇಡ್ಕರ್ ವೃತ್ತದಲ್ಲಿ ರಸ್ತೆಗಳನ್ನು ಬಂದ್ ಮಾಡಿ ಟೈರ್ ಗೆ ಬೆಂಕಿ ಹಚ್ವಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯು ಸುಮಾರು ಮೂರರಿಂದ ನಾಲ್ಕು ಗಂಟೆಗಳು ನಡೆಯಿತು. ಇದರ ಮಧ್ಯೆ ಯುವತಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪೋಷಕರು ತಮಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು. ದಲಿತ ಪರ ಸಂಘಟನೆಗಳು ಆರೋಪಿಯನ್ನು ತಮಗೊಪ್ಪಿಸುವಂತೆ ಪಟ್ಟು ಹಿಡಿದರೆ,ಇನ್ನೊಂದೆಡೆ ಮರಣೋತ್ತರ ಪರೀಕ್ಷೆ ನಂತರ ಯುವತಿಯ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಕೋವೇರಹಟ್ಟಿ ಗ್ರಾಮಸ್ಥರು ಮತ್ತು ಪೋಷಕರು ಪಟ್ಟು ಹಿಡಿದರು. ಇದೆಲ್ಲದರ ನಡುವೆ ನ್ಯಾಯಕ್ಕಾಗಿ ಚಿತ್ರದುರ್ಗದ ಹೈವೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬರೋವರೆಗೂ ಮೇಲೆಳುವುದಿಲ್ಲ ಎಂದು ಬಂದ್ ಮಾಡಿದ್ದ ಸ್ಥಳಕ್ಕೆ ಸಚಿವ ಸುಧಾಕರ್ ಆಗಮಿಸಿ, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ,ಸಾಂತ್ವಾನ ಹೇಳಿದರು. ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಭರವಸೆ ನೀಡಿದರು. ನಂತರ ಮಾಧ್ಯಮಗಳ ಜೊತೆ ಮಾಡಿ, ಆರೋಪಿಯನ್ನು ಪೋಲಿಸರು ಅರೆಸ್ಟ್ ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದರು. ನಂತರ ಕಾನೂನಿನನ್ವಯ ಕ್ರಮ ನಡೆಯುತ್ತದೆ. ಸರ್ಕಾರದಿಂದ ಪರಿಹಾರವನ್ನು ಕೊಡಿಸಲಾಗುತ್ತದೆ. ಎಂದ ಅವರು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ, ವೈಯುಕ್ತಿಕವಾಗಿ 2.5 ಹಾಗೂ ಸರ್ಕಾರದಿಂದ 2.5 ಲಕ್ಷಗಳು ಒಟ್ಟು 5 ಲಕ್ಷ ತಾತ್ಕಾಲಿಕ ಪರಿಹಾರ ನೀಡಿದರು. ನಂತರ ಸಿಎಂ ಜೊತೆಗೆ ಮಾತಾಡಿ, ಸಿಎಂ ನಿಧಿಯಿಂದ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದರು. ನಂತರ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತಾಡಿ, ನಗರದ ಹೊರವಲಯದಲ್ಲಿ ಮೃತ ದೇಹವಿದೆ ಎಂದು ಹೊಟೇಲ್ ನ ಲ್ಲಿ ಕೆಲಸ ಮಾಡುವ ವ್ಯಕ್ತಿ ಮಾಹಿತಿ ನೀಡಿದ್ದು, ಹೋಗಿ ನೋಡಿದಾಗ ಯುವತಿ ಮೃತ ದೇಹ ಅರೆಬರೆ ಸುಟ್ಟ ಸ್ಥಿತಿಯಲ್ಲಿತ್ತು. ತನಿಖೆ ನಡೆಸಿದಾಗ ಯುವತಿ ಹಿರಿಯೂರಿನ ಕೋವೇರಹಟ್ಟಿ ವರ್ಷಿತ ಎಂದು ತಿಳಿದು ಬಂತು. ಯುವತಿ 14 ರಂದು ಹಾಸ್ಟೆಲ್ ನಲ್ಲಿ ರಜೆ ಚೀಟಿ ಕೊಟ್ಟು ನಾಪತ್ತೆಯಾಗಿದ್ದಳು. ಶಂಕಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ತನಿಖೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು. ಈ ಸಮಯದಲ್ಲಿ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್ , ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿ ಮತ್ತು ಉಪವಿಭಾಗಾಧಿಕಾರಿ ಮೊಹಮದ್ ಜಿಲಾನಿ ಇನ್ನಿತರೆ ಅಧಿಕಾರಿಗಳು ಇದ್ದರು.