Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಆರ್ ಬಿ ಐ ಮಾರ್ಗಸೂಚಿ ಪಾಲನೆ ಕಡ್ಡಾಯ ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಲಿ: ಡಿಸಿ ಎಚ್ಚರಿಕೆ
ರಾಜ್ಯ

ಆರ್ ಬಿ ಐ ಮಾರ್ಗಸೂಚಿ ಪಾಲನೆ ಕಡ್ಡಾಯ ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಲಿ: ಡಿಸಿ ಎಚ್ಚರಿಕೆ

D KumaraswamyBy D KumaraswamyFebruary 4, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಆರ್ ಬಿ ಐ ಮಾರ್ಗಸೂಚಿ ಪಾಲನೆ ಕಡ್ಡಾಯ
ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಲಿ: ಡಿಸಿ ಎಚ್ಚರಿಕೆ

 

 

ಚಿತ್ರದುರ್ಗ: ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರಿವಿ ಹಣಕಾಸು ಸಂಸ್ಥೆಗಳು ಕಡ್ಡಾಯವಾಗಿ ಆರ್ ಬಿಐ ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿಯಮಬಾಹಿರ ಮಾರ್ಗ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಸಾಲ ವಸೂಲಾತಿ ಸಮಯದಲ್ಲಿ ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಹಾಗೂ ಅತಿಯಾದ ಬಡ್ಡಿ ವಿಧಿಸುತ್ತಿರುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರಿವಿ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತಾಡಿ,
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಒಬ್ಬರ ಹೆಸರಿನಲ್ಲಿ ಮೊತ್ತೊಬ್ಬರಿಗೆ ಸಾಲ ನೀಡುವುದಾಗಲಿ, ವಸೂಲಿ ಮಾಡುವುದಾಗಲಿ ಮಾಡಬಾರದು. ಸಾಲ ಮಂಜೂರಾತಿ ಸಂದರ್ಭದಲ್ಲಿ ನೇರವಾಗಿ ಸಾಲ ಪಡೆಯುವರೊಂದಿಗೆ ವ್ಯವಹರಿಸಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು. ಸಾಲ ಮಂಜೂರಾತಿ ನಿಯಮಗಳು, ಸಾಲದ ಮೊತ್ತ, ಅವಧಿ, ಬಡ್ಡಿ ದರ, ಹಿಂಪಾವತಿ ಅವಧಿ ಸೇರಿದಂತೆ ಅಗತ್ಯ ಮಾಹಿತಿಗಳನ್ನೊಳಗೊಂಡ ಸತ್ಯಾಂಶ ಮಾಹಿತಿಯನ್ನು (ಫ್ಯಾಕ್ಟ್ ಶೀಟ್) ಸಾಲ ಪಡೆಯುವವರಿಗೆ ಕಡ್ಡಾಯವಾಗಿ ನೀಡಬೇಕೆಂದು ಸೂಚಿಸಿದರು.
ಸಾಲ ಮಂಜೂರಾತಿ ಸಂದರ್ಭದಲ್ಲಿಯೇ ಸಂಸ್ಥೆಯ ಎಲ್ಲಾ ಷರತ್ತು ಹಾಗೂ ನಿಬಂಧನೆಗಳನ್ನು ಸಾಲ ಪಡೆಯುವವರಿಗೆ ಮನವರಿಕೆ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳನ್ನು ಮೀರಿ ಸಾಲ ವಸೂಲಾತಿ ಮಾಡಬಾರದು. ನಿಯಮಬದ್ಧವಾಗಿಯೇ ಸಾಲ ವಸೂಲಾತಿ ಮಾಡಬೇಕು. ಯಾವುದೇ ಒತ್ತಡವನ್ನು ಸಾಲಗಾರರ ಮೇಲೆ ಹೇರಬಾರದು. ಅಪರಾಧ ಹಿನ್ನಲೆ ಹೊಂದಿರುವರನ್ನು ಸಾಲ ವಸೂಲಾತಿಗೆ ನೇಮಿಸಿಕೊಳ್ಳಬಾರದು ಎಂದು ಹೇಳಿದರು.
ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ಕಿರುಕುಳ ತಡೆಯುವ ನಿಟ್ಟಿನಲ್ಲಿ ಮಾರ್ಗಸೂಚಿಗಳ ರೂಪಿಸಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಹೊಸ ಕಾಯ್ದೆ ಜಾರಿ ಮಾಡಲಿದೆ. ಇದರ ಅನುಸಾರ ಉಪವಿಭಾಗಾಧಿಕಾರಿಗಳು ಅಧ್ಯಕ್ಷತೆಯಲ್ಲಿ ಪ್ರಾಧಿಕಾರ ರಚಿಸಲಾಗುವುದು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಘಟಕ ತೆರೆಯಲಾಗುವುದು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತಾಡಿ, ಹಣಕಾಸು ಸಂಸ್ಥೆಗಳು ಸಾಲ ನೀಡುವಾಗ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಸಾಲ ನೀಡುವಾಗ ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮನಿ ಲೆಂಡರ್ ಆಕ್ಟ್, ಪಾನ್ ಬ್ರೋಕರ್ ಆಕ್ಟ್ ಹಾಗೂ ಆರ್ ಬಿಐ ಮಾರ್ಗಸೂಚಿಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಾಲ ವಸೂಲಾತಿಗೆ ಕಾನೂನುಬಾಹಿರ ಕ್ರಮಗಳನ್ನು ಕೈಗೊಳ್ಳಬಾರದು. ಮನೆಗೆ ತೆರಳಿ ಗಲಾಟೆ, ಸಂಬಂಧಿಕರಿಗೆ ಕಿರುಕುಳ, ರಾತ್ರಿ ಸಮಯದಲ್ಲಿ ಸಾಲ ವಸೂಲಾತಿ ಮಾರ್ಗಗಳನ್ನು ಅನುಸರಿಸಬಾರದು. ರಾಜ್ಯ ಸರ್ಕಾರ ಇಂತಹ ಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿದೆ. ಕಾಯ್ದೆಗಳನ್ನು ಮೀರಿ ಸಾಲ ವಸೂಲಾತಿ ಮಾಡುತ್ತಿರುವ ಬಗ್ಗೆ ದೂರು ಕೇಳಿಬಂದರೆ, ತಕ್ಷಣವೇ ಸಾಲ ವಸೂಲಿಗೆ ಬಂದವರ ಮೇಲೆ ಅಪರಾಧಿ ಅತಿಕ್ರಮಣ, ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧಗಳ ಅಡಿ ಬಂಧಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಕುಮಾರ್ ಬಾಬು, ಡಿವೈಎಸ್‍ಪಿಗಳಾದ ದಿನಕರ್, ರಾಜಣ್ಣ, ಶಿವಕುಮಾರ್ ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

 

Share. Facebook Twitter Pinterest LinkedIn Tumblr WhatsApp Email
Previous Articleತರಳಬಾಳು ಹುಣ್ಣಿಮೆ ನಾಳೆಯಿಂದ  ಆರಂಭ: ಹುಣ್ಣಿಮೆಯಲ್ಲಿ ಪ್ರತಿಭೆಗಳ ಅನಾವರಣ ಕ್ರೀಡೆಗೆ ಪ್ರೋತ್ಸಾಹ
Next Article ಲಾರಿ ಡಿಕ್ಕಿ ಪ್ಯಾಸೆಂಜರ್ ಆಟೋ‌ಪಲ್ಟಿ: ಕಾರ್ಮಿಕರಿಗೆ ಗಾಯ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.