Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ
ದೇಶ

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

D KumaraswamyBy D KumaraswamyFebruary 10, 2025No Comments3 Mins Read
Facebook Twitter Pinterest LinkedIn Tumblr WhatsApp VKontakte Email
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 39;
Share
Facebook Twitter LinkedIn Pinterest Email

 

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

ಚಿತ್ರದುರ್ಗ: ಫೆ.10 :ಎಸ್ಸಿ ಪಟ್ಟಿಯಿಂದ ಎಕೆ, ಎಡಿ ಹೆಸರು ತೆಗೆದು ಮೂಲ ಜಾತಿ ಹೆಸರಲ್ಲಿ ಪ್ರಮಾಣ ಪತ್ರ ನೀಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕೂಡಲೇ ಶಿಫಾರಸ್ಸು ಮಾಡುವಂತೆ ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿ, ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಇವುಗಳಲ್ಲಿ ಆದಿಕರ್ನಾಟಕ, ಆದಿದ್ರಾವಿಡ, ಆದಿಆಂಧ್ರ ಎಂಬ ಒಂದೇ ಹೆಸರಿನಲ್ಲಿ ಜಾತಿ ಸೂಚಕ ಪ್ರಮಾಣ ಪತ್ರವನ್ನು ಮಾದಿಗರು, ಛಲವಾದಿಗರು ಪಡೆಯುತ್ತಿದ್ದಾರೆ. ಇದು ಬಹಳಷ್ಟು ಗೊಂದಲ ಉಂಟು ಮಾಡುತ್ತಿದೆ. ಇದಕ್ಕೆ ಶಾಶ್ವತ ಪರಿಹಾರವೆಂದರೇ ಪರಿಶಿಷ್ಟ ಜಾತಿ ಪಟ್ಟಿಯಿಂದ ಆದಿಕರ್ನಾಟಕ, ಆದಿದ್ರಾವಿಡ, ಆದಿಆಂಧ್ರ ಹೆಸರುಗಳನ್ನು ತೆಗೆದುಹಾಕುವುದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ಒಳಮೀಸಲಾತಿ ನೀಡುವಂತೆ 30 ವರ್ಷಗಳಿಂದ ಮಾದಿಗ ಸಮುದಾಯ ಹಾಗೂ ವಿವಿಧ ಸಂಘಟನೆಗಳು ಹೋರಾಟ ನಡೆಸಿವೆ. ಇದರ ಫಲವಾಗಿ ಎಂಪರಿಕಲ್ ಡೇಟಾ ಸಂಗ್ರಹಿಸಿ ಗುಂಪುಗಳನ್ನು ವರ್ಗೀಕರಿಸಿ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದು ಮಾದಿಗರಿಗೆ ಹಾಗೂ ಸಂಬಂಧಿತ ಜಾತಿಯವರಿಗೆ ವರವಾಗಿದೆ ಎಂದರು.

ಒಳಮೀಸಲಾತಿ ಜಾರಿಗೆ ತಕ್ಷಣ ಸ್ಪಂದಿಸಿರುವ ಸಾಮಾಜಿಕ ನ್ಯಾಯದ ಹರಿಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮೀಸಲು ಹಂಚಿಕೆಗೆ ಯಾವ ರೀತಿ ಕ್ರಮಕೈಗೊಳ್ಳಬೇಕೆಂಬ ಕುರಿತು ವರದಿ ನೀಡುವಂತೆ ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿ ನಿಗದಿತ ಸಮಯದಲ್ಲಿ ವರದಿ ಸಲ್ಲಿಸುವಂತೆ ಗಡುವು ನೀಡಿದೆ. ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿದ್ದು, ಇದರಲ್ಲಿ 1 ಸಾವಿರದಿಂದ 1 ಲಕ್ಷದ ಜನಸಂಖ್ಯೆಯೊಳಗೆ ಇರುವ ಸಣ್ಣ ಪ್ರಮಾಣದ 80 ಜಾತಿಗಳು ಇವೆ. ಉಳಿದಂತೆ ಬಹುಸಂಖ್ಯಾತ ಮಾದಿಗ, ಛಲವಾದಿ, ಲಂಬಾಣಿ, ಭೋವಿ, ಬಳಿಕ ಸ್ಥಾನದಲ್ಲಿ ಕೊರಚ, ಕೊರಮರು ಇದ್ದಾರೆ ಎಂದರು.

ಮಾದಿಗ ಸಂಬಂಧಿತ 16 ಜಾತಿಗಳಿವೆ. ಚಮ್ಮಾರ್, ಸಮಗಾರ, ಮೋಚಿ, ಡೋರ್, ದಕ್ಕಲಿಗ ಮತ್ತಿತರ ಜಾತಿಗಳು ಎಡಗುಂಪಿಗೆ ಸೇರಿವೆ. ಈ ಜಾತಿಗಳು ಜಾತಿ ಸೂಚಕ ಪ್ರಮಾಣಪತ್ರ ಪಡೆಯುವಾಗ ಮೂಲ ಜಾತಿ ಹೆಸರಲ್ಲಿ ಪಡೆಯದೆ ಆದಿಕರ್ನಾಟಕ ಎಂದು ಗುರುತಿಸಿಕೊಂಡಿವೆ. ರಾಜ್ಯದ ಅರ್ಧಭಾಗದಷ್ಟು ಜಿಲ್ಲೆಗಳಲ್ಲಿ ಮಾದಿಗ ಮತ್ತು ಛಲವಾದಿ ಈ ಎರಡು ಸಮುದಾಯದವರು ಬಹುತೇಕ ಆದಿಕರ್ನಾಟಕ (ಎಕೆ), ಕೆಲವೆಡೆ ಆದಿದ್ರಾವಿಡ (ಎಡಿ) ಎಂದು ಗುರುತಿಸಿಕೊಂಡಿದ್ದಾರೆ ಎಂದರು.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಜಿಲ್ಲೆಗಳಲ್ಲಿ ಮಾದಿಗರು ಮತ್ತು ಛಲವಾದಿಗರು ಆದಿಕರ್ನಾಟಕ ಎಂಬ ಒಂದೇ ಹೆಸರಿನಲ್ಲಿ ಜಾತಿ ಸೂಚಕ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮಾದಿಗರು ಆದಿಕರ್ನಾಟಕವೆಂದು ಮತ್ತು ಛಲವಾದಿಗಳು ಆದಿದ್ರಾವಿಡ ಎಂದು ಜಾತಿ ಸೂಚಕ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಇದು ಎರಡು ಜಾತಿಗಳಲ್ಲಿ ಯಾವ್ಯಾವ ಜಾತಿಗಳು ಎಷ್ಟು ಸಂಖ್ಯೆಯಲ್ಲಿ ಇವೆ ಎಂದು ನಿಖರವಾಗಿ ಹೇಳಲು ಕಷ್ಟ. ಉಳಿದಂತೆ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗಗಳಲ್ಲಿ ಮಾದಿಗರು ಮಾದಿಗರೆಂದು, ಹೊಲೆಯರು ಹೊಲೆಯರೆಂದು ಮತ್ತು ಛಲವಾದಿಗರೆಂದು ಜಾತಿ ಸೂಚಕ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ ಇಲ್ಲಿ ಯಾವ ಗೊಂದಲವು ಇಲ್ಲ ಎಂದರು.

 

 

ಇದಕ್ಕೆಲ್ಲ ಪರಿಹಾರವೆಂಬಂತೆ ನ್ಯಾ.ಸದಾಶಿವ ಆಯೋಗ ಮನೆ ಮನೆ ಸಮೀಕ್ಷೆ ನಡೆಸಿ, ಯಾವ ಜಾತಿಯವರು ಎಷ್ಟು ಸಂಖ್ಯೆಯಲ್ಲಿದ್ದಾರೆ ಮತ್ತು ಹಿಂದುಳಿವಿಕೆಯನ್ನು ದಾಖಲಿಸಿ, ಒಳಮೀಸಲಾತಿ ವರ್ಗೀಕರಣಕ್ಕೆ ವರದಿ ಸಿದ್ಧಪಡಿಸಿದೆ. ಈ ವರದಿಯನ್ನೇ ಆಧಾರವಾಗಿಟ್ಟುಕೊಂಡು ಎಂಪರಿಕಲ್ ಡೇಟಾ ಪಡೆದು ಒಳಮೀಸಲಾತಿ ವರ್ಗೀಕರಣಕ್ಕೆ ನ್ಯಾ.ನಾಗಮೋಹನ್ ದಾಸ್ ಮುಂದಾಗಬೇಕೆಂಬುದು ನಮ್ಮ ಆಗ್ರಹ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವರದಿ ಪರಿಶೀಲನೆಗೆ ಆಯೋಗಕ್ಕೆ ಅವಕಾಶ ಕಲ್ಪಿಸಬೇಕು ಎಂದರು.

ನ್ಯಾ.ನಾಗಮೋಹನ್ ದಾಸ್ ಅವರು ದಲಿತ ಸಮುದಾಯದ ಪ್ರಗತಿಗೆ ಬದ್ಧರಾಗಿದ್ದು, ಅವರಿಗೆ ನಿಗದಿತ ಅವಧಿಯೊಳಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಲು ಮುಂದಾಗಬೇಕು. ನ್ಯಾ.ನಾಗಮೋಹನ್ ದಾಸ್ ವಿಚಾರಣಾ ಆಯೋಗವು, ರಾಜ್ಯ ಸರ್ಕಾರದಲ್ಲಿ ಕೆಲಸ ಮಾಡುತ್ತಿರುವ ಜವಾನ ಹುದ್ದೆಯಿಂದ ಐಎಎಸ್, ಐಪಿಎಸ್, ಐಎಫ್‍ಎಸ್, ಕೆಎಎಸ್ ಸೇರಿ ಉನ್ನತ ಹುದ್ದೆಯ ನೌಕರರ ಮಾಹಿತಿ ಸಂಖ್ಯೆ ಎಷ್ಟು. ಈ ನೌಕರರಿಂದ ಮೂಲ ಜಾತಿಯನ್ನು ಸಂಗ್ರಹಿಸಿ ಒಟ್ಟಾರೆ ಎಲ್ಲ ಇಲಾಖೆಗಳಲ್ಲಿ ಸರ್ಕಾರಿ ನೌಕರಿಯಲ್ಲಿ ಯಾವ ಜಾತಿ ಯಾವ ಪ್ರಮಾಣದಲ್ಲಿದ್ದಾರೆಂಬ ಮಾಹಿತಿಯನ್ನು ನಿಖರವಾಗಿ ಸಂಗ್ರಹಿಸಬೇಕು. ಈ ಅಂಶದ ಆಧಾರದ ಮೇಲೆ ಮೀಸಲಾತಿ ಆಧಾರದಡಿ ಸರ್ಕಾರಿ ನೌಕರಿ ಪಡೆಯುವಲ್ಲಿ ಯಾವ ಜಾತಿಗಳಿಗೆ ಅನ್ಯಾಯವಾಗಿದೆ ಎಂಬುದನ್ನು ಒಳಮೀಸಲಾತಿ ನೀಡುವ ಸಂದರ್ಭ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಎಸ್‍ಸಿಎಸ್‍ಪಿ, ಟಿಎಸ್‍ಪಿ ಅನುದಾನದ ಹಂಚಿಕೆ ಹಾಗೂ ಎಲ್ಲ ಯೋಜನೆಗಳಲ್ಲೂ ಒಳಮೀಸಲಾತಿ ಕಲ್ಪಿಸಬೇಕು. ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಡಿಪ್ಲೋಮಾ, ನರ್ಸಿಂಗ್, ಐಟಿಐ, ಪ್ಯಾರಾ ಮೆಡಿಕಲ್, ಪ್ರಥಮ ದರ್ಜೆ, ಪಿಯು ಕಾಲೇಜು, ಪ್ರೌಢಶಾಲೆ ಹೀಗೆ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವವರು ಸರ್ಕಾರಿ ಅನುದಾನ ಮತ್ತು ನಿವೇಶನ ಪಡೆದಿದ್ದಾರೆ. ಪರಿಶಿಷ್ಟ ಗುಂಪಿನಲ್ಲಿರುವವರು ಯಾವ ಯಾವ ಜಾತಿಯವರು ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆಂಬ ಮಾಹಿತಿ ಸಂಗ್ರಹಿಸಬೇಕು. ಹೀಗೆ ಎಲ್ಲ ಕ್ಷೇತ್ರದಲ್ಲಿ ಮಾಹಿತಿ ಸಂಗ್ರಹಿಸಿದರೆ ಯಾವ ಜಾತಿ ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿ ಹೆಚ್ಚು ಹಿಂದುಳಿದಿದೆ ಎಂಬುದು ಸ್ಪಷ್ಟಗೊಳ್ಳಲಿದೆ. ಆಗ ಒಳಮೀಸಲಾತಿ ವರ್ಗೀಕರಣ ವೇಳೆ ಮೀಸಲು ಹಂಚಿಕೆಗೆ ಸಹಕಾರಿಯಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಜಿಪಂ ಮಾಜಿ ಸದಸ್ಯರಾದ ಆರ್.ಕೃಷ್ಣಮೂರ್ತಿ, ಆರ್.ನರಸಿಂಹರಾಜು, ವಕೀಲರಾದ ಶರಣಪ್ಪ, ರವೀಂಧ್ರ ಇದ್ದರು.

ಸಮನ್ವಯ ಸಭೆ:

13ರಂದು ಮಾದಿಗ ಮತ್ತು ಸಂಬಂಧಿತ ಜಾತಿಗಳ ಸಮನ್ವಯ ಸಭೆ

ಮಾದಿಗ ಮತ್ತು ಸಂಬಂಧಿತ ಜಾತಿಗಳ ಸಮನ್ವಯ ಸಭೆಯನ್ನು ಫೆ.13 ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಭೆ ಕರೆಯಲಾಗಿದೆ.
ಸಮಗಾರ, ಚಮ್ಮಾರ್, ಮೋಚಿ, ಡೋರ್, ದಕ್ಕಲಿಗ ಮತ್ತಿತರ ಜಾತಿಗಳು ಮಾದಿಗ ಸಂಬಂಧಿತ ಎಡಗುಂಪಿನ ಜಾತಿಗಳಾಗಿವೆ. ಈ ಜಾತಿಗಳಲ್ಲಿ ಸಾಮರಸ್ಯ ಮೂಡಿಸಿ ಒಗ್ಗಟ್ಟಾಗಿ ನಮ್ಮ ಸಮಸ್ಯೆಗಳ ಪರಿಹಾರ ಹಾಗೂ ಒಳಮೀಸಲಾತಿ ಪಡೆಯುವ ಹಕ್ಕೋತ್ತಾಯವನ್ನು ಮಂಡಿಸಲು ಸಭೆ ಕರೆಯಲಾಗಿದೆ.

ಅಂದಿನ ಸಭೆಗೆ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಅವರು ಖುದ್ದಾಗಿ ಆಗಮಿಸಿ ಎಲ್ಲರ ಸಮಸ್ಯೆಗಳನ್ನು ಆಲಿಸಿ, ಮನವಿ ಸ್ವೀಕರಿಸಲಿದ್ದಾರೆ. ಈ ಸಭೆಗೆ ಮಾದಿಗ ಮತ್ತು ಸಂಬಂಧಿತ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಇದೇ 13 ರ ಮಾದಿಗ ಸಂಬಂಧಿತ ಜಾತಿಗಳ ಸಮನ್ವಯ ಸಭೆಗೆ ಬನ್ನಿ
Next Article ಭದ್ರಾ ಮೇಲ್ದಂಡೆ ಯೋಜನೆ ಜವಾಬ್ದಾರಿ ಅರಿತು ರಾಜ್ಯ ಸರ್ಕಾರ ತನ್ನ ಕೆಲಸ ಮಾಡಲಿ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025

ಜೋಜು ಜಾರ್ಜ್ ಅಭಿನಯದ ಮಲಯಾಳಂ ಚಿತ್ರ ಪಣಿ ಚಿತ್ರದ ಟ್ರೇಲರ್ ಗೆ ಎಲ್ಲೆಡೆ ಬಾರಿ  ಮೆಚ್ಚುಗೆ

November 28, 2024
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.