Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಪರಿಶಿಷ್ಟರ ಹಣ ಅನ್ಯ ಉದ್ದೇಶಕ್ಕೆ ಬಳಕೆ ಬೇಡ: ಮಾಜಿ ಸಚಿವ ಹೆಚ್. ಆಂಜನೇಯ
ರಾಜ್ಯ

ಪರಿಶಿಷ್ಟರ ಹಣ ಅನ್ಯ ಉದ್ದೇಶಕ್ಕೆ ಬಳಕೆ ಬೇಡ: ಮಾಜಿ ಸಚಿವ ಹೆಚ್. ಆಂಜನೇಯ

D KumaraswamyBy D KumaraswamyMarch 14, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಪರಿಶಿಷ್ಟರ ಹಣ ಅನ್ಯ ಉದ್ದೇಶಕ್ಕೆ ಬಳಕೆ ಬೇಡ

ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ತುರ್ತು ಆದೇಶ ಅಗತ್ಯ

ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮಗ್ರ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಜಾರಿಗೆ ತಂದ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಕಠಿಣ ಆದೇಶ ಹೊರಡಿಸುವ ತುರ್ತು ಅಗತ್ಯವಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಂಘ ಬೆಂಗಳೂರಿನಲ್ಲಿ  ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಮಾತಾಡಿದರು.
ಈ ಕಾಯ್ದೆಯ ಮೂಲ ಆಶಯ ಎಸ್ಸಿ-ಎಸ್ಟಿ ಜನರ ಸಮಗ್ರ ಅಭಿವೃದ್ಧಿ ಆಗಿದೆ. ಎಸ್ಸಿ, ಎಸ್ಟಿ ಜನರು ವಾಸಿಸುವ ಪ್ರದೇಶವನ್ನು ಅಭಿವೃದ್ಧಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಉದ್ದೇಶ ಹೊಂದಲಾಗಿದೆ. ಆದರೆ, ಕಳೆದ ಸರ್ಕಾರದ ಅವಧಿಯಲ್ಲಿ ಈ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಅನ್ಯ ಜಾತಿ ಜನರು ವಾಸಿಸುವ, ವಾಣಿಜ್ಯ ಪ್ರದೇಶದ ಅಭಿವೃದ್ಧಿಗೆ ಬಳಸಲಾಗಿದೆ. ಜತೆಗೆ ಅನ್ಯ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ ಎಂದು ಬೇಸರಿಸಿದರು.

 

 

ಶ್ರೀಮಂತರ ಬಡಾವಣೆ, ವ್ಯಾಪಾರಸ್ಥರ ಅನುಕೂಲಕ್ಕಾಗಿ ಎಸ್‌ಎಸಿಎಸ್‌ಪಿ-ಟಿಎಸ್‌ಪಿಯ ಕೋಟ್ಯಾಂತರ ರೂಪಾಯಿ ಹಣವನ್ನು ಬಳಕೆ ಮಾಡಿ, ಪರಿಶಿಷ್ಟರಿಗೆ ಅನ್ಯಾಯ ಮಾಡಲಾಗಿದೆ. ಜೊತೆಗೆ ಪ್ಯಾಕೇಜ್ ಹೆಸರಲ್ಲಿ ಟೆಂಡರ್ ಪದ್ಧತಿ ಜಾರಿಗೆ ತಂದು ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿ ಮಾಡಲಾಗಿದೆ ಎಂದು ದೂರಿದರು.

ಇದಕ್ಕೆ ಕಡಿವಾಣ ಹಾಕಲು ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 50 ಲಕ್ಷದವರೆಗೆ ಎಸ್ಸಿ-ಎಸ್ಟಿ ಜನರಿಗೆ ಗುತ್ತಿಗೆ ನೀಡುವ ಪದ್ಧತಿ ಜಾರಿಗೆ ತಂದರು. ಪ್ರಸ್ತುತ ಅದನ್ನು 1 ಕೋಟಿ ರೂಪಾಯಿಗೆ ಹೆಚ್ಚಿಸಿ ನಾನೊಬ್ಬ ದಲಿತ ಪರ, ನೊಂದ ಜನರ ಧ್ವನಿ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ತಿಳಿಸಿದ ಆಂಜನೇಯ, ಈ ಗುತ್ತಿಗೆ ಮೊತ್ತವನ್ನು 2 ಕೋಟಿ ರೂಪಾಯಿಗೆ ಹೆಚ್ಚಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಹೇಳಿದರು.

ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ಮೂಲ ಆಶಯಕ್ಕೆ ಸಣ್ಣ ದಕ್ಕೆ ಉಂಟಾಗದಂತೆ ಹಾಗೂ ಈ ಅನುದಾನವನ್ನು ದುರ್ಬಳಕೆ ಮಾಡುವ ಅಧಿಕಾರಿ ವರ್ಗದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಕುರಿತು ಆದೇಶ ಹೊರಡಿಸುವುದು ತುರ್ತು ಅಗತ್ಯವಿದೆ ಎಂದರು.

ಶೋಷಿತರು ತಮ್ಮ ಸಮುದಾಯದ ಕುರಿತು ಮಾನವೀಯ ಗುಣ ಬೆಳೆಸಿ ಕೊಳ್ಳಬೇಕು. ಆದರೆ ಈಚೆಗೆ ಶೋಷಣೆ ಮಾಡುತ್ತಿರುವುದು ನೋವಿನ ವಿಷಯ. ಇಂತಹ ನಡೆ ಕೈಬಿಟ್ಟು ಒಗ್ಗೂಡಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಸಂಘದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ ಮಹಾದೇವಸ್ವಾಮಿ ಮಾತಾಡಿದರು.ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ವಿಧಾನಪರಿಷತ್ ಸದಸ್ಯ ನಸೀರ್ ಅಹಮ್ಮದ್, ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ್, ಸಹ ಪ್ರಾಧ್ಯಾಪಕ ಪ್ರದೀಪ್ ರಮಾವತ್, ಸುಪ್ರೀಂ ಕೋರ್ಟ್ ನ್ಯಾಯವಾದಿ ಚೈನಾ ಕೊಠಾರಿ, ದಲಿತ ಸಂಘರ್ಷ ಸಮಿತಿ ಸಂಚಾಲಕ ಮಾವಳ್ಳಿ ಶಂಕರ್ ಇತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಸಂವಿಧಾನ ಬದಲಾಯಿಸುವ ಮಾತಾಡುವ ಅನಂತ್ ಕುಮಾರ್ ವಿರುದ್ಧ ಕ್ರಮ ಜರುಗಿಸಿ
Next Article ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಏನಂದ್ರು ಮಾಜಿ ಸಿಎಂ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.