Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಯಾವುದೇ ಟೀಕೆಗಳಿಗೆ ಸಿದ್ದರಾಮಯ್ಯ ಎದೆಗುಂದಬೇಕಿಲ್ಲ: ಹೆಚ್ ಆಂಜನೇಯ
ರಾಜ್ಯ

ಯಾವುದೇ ಟೀಕೆಗಳಿಗೆ ಸಿದ್ದರಾಮಯ್ಯ ಎದೆಗುಂದಬೇಕಿಲ್ಲ: ಹೆಚ್ ಆಂಜನೇಯ

D KumaraswamyBy D KumaraswamyJuly 14, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ
ಟೀಕೆ, ಆರೋಗಳಿಗೆ ಎದೆಗುಂದದಿರಿ
ಮಾಜಿ ಸಚಿವ ಎಚ್.ಆಂಜನೇಯ ಅಭಯ

ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ ಸಮುದಾಯ ನಿಮ್ಮೊಂದಿಗೆ ಇರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಮ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಆಡಳಿತ ನಡೆಸುತ್ತಿರುವುದನ್ನು ಕೆಲ ಜನರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದಲೇ ಅಗತ್ಯವಾಗಿ ಟೀಕೆ, ಆರೋಪ ಮಾಡಿ ಎದೆಗುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ನೊಂದವರು, ಬಡವರು, ಶೋಷಿತರು, ಅಹಿಂದ ವರ್ಗದ ಪ್ರಗತಿಗೆ ಯೋಜನೆಗಳನ್ನು ರೂಪಿಸಿರುವ ಕಾರಣಕ್ಕೆ ಹಾಗೂ ಎಲ್ಲ ವರ್ಗದ ಜನರು ಮೆಚ್ಚಿಕೊಳ್ಳುವ ರೀತಿ ಮಾದರಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರ ಕುರಿತು ಕೆಲವರಲ್ಲಿ ಸಹಜವಾಗಿ ಅಸೂಯೆ ಉಂಟಾಗಿದೆ. ಆದ್ದರಿಂದ ಸುಳ್ಳು ಆರೋಪಗಳಲ್ಲಿ ಕೆಲ ದುಷ್ಟ ಶಕ್ತಿಗಳು ತೊಡಗಿವೆ ಎಂದು ಆರೋಪಿಸಿದರು.

 

 

ಇಂತಹ ಯಾವುದೇ ಟೀಕೆಗಳಿಗೆ ಸಿದ್ದರಾಮಯ್ಯ ಎದೆಗುಂದಬೇಕಿಲ್ಲ. ನಮ್ಮ ಪರವಾಗಿ ಆಡಳಿತ ನಡೆಸುತ್ತಿರುವ ನಿಮ್ಮ ಬೆನ್ನಿಗೆ ದಲಿತ ಶಕ್ತಿ ಇದೆ. ತಾವು ನಿರ್ಭಯವಾಗಿ ಮುನ್ನುಗ್ಗಿ. 2013-18 ಅವಧಿಯಲ್ಲಿ ಸ್ವತಂತ್ರವಾಗಿ ಆಡಳಿತ ಮರುಕಳಿಸಲಿ. ಈ ನಿಮ್ಮ ಕಾರ್ಯಕ್ಕೆ ನಾವು ಸದಾ ಬೆಂಬಲವಾಗಿರುತ್ತೇವೆ ಎಂದು ಅಭಯ ನೀಡಿದರು.

ಐದು ವರ್ಷಗಳ ಕಾಲ ನನ್ನನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗದ ಖಾತೆ ಸಚಿವರಾಗಿ ಸ್ವತಂತ್ರವಾಗಿ ಕಾರ್ಯನಿರ್ಹಿಸಲು ಅವಕಾಶ ಕೊಟ್ಟಿದ್ದ ಸಿದ್ದರಾಮಯ್ಯ ಅವರ 2013-18 ಆಡಳಿತ ದಲಿತರ ಪಾಲಿಗೆ ಸುವರ್ಣ ಯುಗವಾಗಿತ್ತು ಎಂದರು.

ಸಚಿವನಾಗಿ ಹಾಸ್ಟೆಲ್ ನಿರ್ಮಾಣ ಸೇರಿ ನೂರಾರು ಜನಪರ ಕೆಲಸ ಮಾಡಿದ್ದೇನೆ. ಮುಖ್ಯವಾಗಿ ಡಾ.ಬಾಬು ಜಗಜೀವನರಾಮ್ ಭವನ ಇಡೀ ದೇಶವೇ ಇತ್ತ ತಿರುಗಿ ನೋಡುವ ರೀತಿ ನಿರ್ಮಾಣ ಮಾಡಲು ಶ್ರಮಿಸಿದ್ದೇನೆ. ಇದಕ್ಕೆಲ್ಲ ಬೆಂಬಲವಾಗಿ ನಿಂತವರು ಸಿದ್ದರಾಮಯ್ಯ ಎಂದರು.

ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಜನೇಯ ಅವರನ್ನು ಸನ್ಮಾನಿಸಿದರು. ರಾಜ್ಯದ ವಿವಿಧ ದಲಿತ ಸಂಘಟನೆಗಳ ಮುಖಂಡರು ಬೆಳ್ಳಿಗಧೆ ನೀಡಿ ಗೌರವಿಸಿದರು.
ಲೋಕಸಭಾ ಮಾಜಿ ಸ್ಪೀಕರ್ ಮೀರಾಕುಮಾರಿ, ಸಚಿವರಾದ ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಉಪಸ್ಥಿತಿ ಇದ್ದರು.

ಎಚ್.ಆಂಜನೇಯ ಶಕ್ತಿಪ್ರದರ್ಶನ:

ಬಾಬು ಜಗಜೀವನರಾಮ್ ಭವನ ನಿರ್ಮಾಣಕ್ಕೆ ಮೂಲ ಕಾರಣಕರ್ತರಾದ ಹೆಚ್.ಆಂಜನೇಯ ಅವರನ್ನು ಸಿದ್ದರಾಮಯ್ಯ ಹಾಗೂ ದಲಿತ ಮುಖಂಡರು ಸನ್ಮಾನಿಸುವ ಸಂದರ್ಭ ಎಚ್.ಆಂಜನೇಯ ಪರವಾಗಿ ಘೋಷಣೆಗಳು ಮೊಳಗಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅನೇಕರು ತಮ್ಮ ಭಾಷಣದಲ್ಲಿ ಆಂಜನೇಯ ಹೆಸರು ಹೇಳಿದಾಗಲೂ ನೆರೆದಿದ್ದ ಜನರು ಚಪ್ಪಾಳೆ ತಟ್ಟೆ ಅಭಿಮಾನ ವ್ಯಕ್ತಪಡಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು, ಸಿದ್ದರಾಮಯ್ಯ, ಎಚ್.ಆಂಜನೇಯ ಅವರ ಭಾಷಣದ ವೇಳೆ ಚಪ್ಪಾಳೆ, ಘೋಷಣೆಗಳ ಮೂಲಕ ಅಭಿಮಾನ ವ್ಯಕ್ತಪಡಿಸಿದರು. ಇಡೀ ಕಾರ್ಯಕ್ರಮ ಆಂಜನೇಯ ಅವರು ಶಕ್ತಿಪ್ರದರ್ಶನ ಸಾಕ್ಷಿಯಾಯಿತು. ಸೂಕ್ಷ್ಮವಾಗಿ ಜನರ ಅಭಿಮಾನ ಗಮನಿಸುತ್ತಿದ್ದ ಸಿದ್ದರಾಮಯ್ಯ ಅವರು ಪದೇ ಪದೆ ಆಂಜನೇಯ ಅವರತ್ತ ನೋಡಿ ಮೆಚ್ಚುಗೆ ರೀತಿ ಸ್ಮೈಲ್ ಕೊಡುತ್ತಿದ್ದ ದೃಶ್ಯ ನೆರೆದಿದ್ದ ಜನರ ಉತ್ಸಾಹ ಇಮ್ಮಡಿಗೊಳಿಸಿತು.

Share. Facebook Twitter Pinterest LinkedIn Tumblr WhatsApp Email
Previous Articleಸೊಳ್ಳೆ ಉತ್ಪತ್ತಿ ತಾಣ ನಾಶ ಪಡಿಸಿ, ಡೆಂಗ್ಯೂ ನಿಯಂತ್ರಿಸಿ: ಸಚಿವ ಡಿ. ಸುಧಾಕರ್ ಸೂಚನೆ
Next Article ಜಿಲ್ಲಾ ಕ್ಷಯರೋಗ ವಿಭಾಗದ ಅಧಿಕಾರಿ‌ ಡಾ. ಮಂಜುನಾಥ್ ನಿಧನ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.