24 ನೇ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ

ರಾಜ್ಯ

ನಾಡಿನ 24 ನೇ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಆಗಿ ಹಾಗೂ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ವಿಶಾಲವಾದ ಕಂಠೀರವ ಸ್ಟೇಡಿಯಂ ನಲ್ಲಿ ಜನಸಾಗರದ ನಡುವೆ ಮತ್ತು ದೇಶದ ವಿವಿಧ ರಾಜ್ಯಗಳ ಸಿಎಂಗಳು ನಾಯಕರು ಮತ್ತು ಚಿತ್ರ ನಟರ ಸಮ್ಮುಖದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಗೋಪ್ಯತಾ ಪ್ರಮಾಣವಚನ ಬೋಧಿಸಿದರು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ.

ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ನೂತನ ಸಚಿವರು ಸಹ ಇಂದು ಪ್ರಮಾಣವಚನ ಸ್ವೀಕರಿಸಿದ್ದರೆ.

 

 

 

ಕರ್ನಾಟಕದ ಉಪಮುಖ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

ನೂತನ ಸಚಿವರ ಪಟ್ಟಿ ಇಲ್ಲಿದೆ

ಡಾ.ಜಿ.ಪರಮೇಶ್ವರ್
ಕೆ.ಹೆಚ್. ಮುನಿಯಪ್ಪ
ಕೆ.ಜೆ. ಜಾರ್ಜ್
ಎಂ.ಬಿ.ಪಾಟೀಲ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ರಾಮಲಿಂಗ ರೆಡ್ಡಿ
ಜಮೀರ್ ಅಹ್ಮದ್ ಖಾನ್

Leave a Reply

Your email address will not be published. Required fields are marked *