Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕೋಟೆ ನಾಡಿನಲ್ಲಿ‌ ನಡೀತು ವಿಶೇಷ ಮಂತ್ರ ಮಾಂಗಲ್ಯ ವಿವಾಹ
ರಾಜ್ಯ

ಕೋಟೆ ನಾಡಿನಲ್ಲಿ‌ ನಡೀತು ವಿಶೇಷ ಮಂತ್ರ ಮಾಂಗಲ್ಯ ವಿವಾಹ

D KumaraswamyBy D KumaraswamyJuly 28, 2025No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕೋಟೆ ನಾಡಿನಲ್ಲಿ‌ ನಡೀತು ವಿಶೇಷ ಮಂತ್ರ ಮಾಂಗಲ್ಯ ವಿವಾಹ

 

 

ಚಿತ್ರದುರ್ಗ,27: ಒಂದು ಮದುವೆ ನಡೆಯಬೇಕಾದರೆ, ಅದಕ್ಕೊಂದು ಮುಹೂರ್ತ ಇಡಬೇಕು. ಆ ಮೂಹೂರ್ತದಲ್ಲಿಯೇ ಮಂತ್ರ ಹೇಳಿ, ಮಂಗಳವಾದ್ಯಗಳೊಂದಿಗೆ ವರ ವಧುವಿಗೆ ಮಾಂಗಲ್ಯಧಾರಣೆ ಮಾಡಬೇಕು,ಮದುವೆಗೆ ಬಂದವರು ಅಕ್ಷತೆ ಹಾಕುವ ಮೂಲಕ ಹರಸಬೇಕು. ಆಗ ಮದುವೆಯಾಯಿತು ಎಂಬುದು ನಮ್ಮ ಸಂಪ್ರದಾಯವಾಗಿದೆ. ಆದರೆ ಇಲ್ಲೊಂದು ಮದುವೆ ಪುರೋಹಿತರಿಲ್ಲ ಅಕ್ಷತೆಯಿಲ್ಲ ಮಂಗಳವಾದ್ಯಗಳಿಲ್ಲದೆ, ನಾಡು ಕಂಡ ದಾರ್ಶನಿಕ ಕವಿ ಕುವೆಂಪು ಅವರ ಆಶಯದಂತೆ ವಿವಾಹ ಸಂಹಿತೆಯನ್ನು ಬೋಧಿಸುವ ಮೂಲಕ ವಧು ಚೇತನ್ ಎನ್ ಮತ್ತು ಭವ್ಯಶ್ರೀಎಂ. ಇವರಿಬ್ಬರು ಭಾನುವಾರ ಚಿತ್ರದುರ್ಗದ ನಗರದ ಕೆಇಬಿ ಕಲ್ಯಾಣ ಮಂಟಪದಲ್ಲಿ ಅಂತರ್ಜಾತಿ ವಿವಾಹವಾಗುವ ಮೂಲಕ ಸತಿಪತಿಗಳಾದರು. ಇದಕ್ಕೆ ಸಾಹಿತಿ ಮತ್ತು ಸಂಶೋಧಕ ಡಾ. ವಡ್ಡಗೆರೆ ನಾಜರಾಜಯ್ಯ ಅವರು ಮಂತ್ರ ಮಾಂಗಲ್ಯ ವಿವಾಹ ಸಂಹಿತೆಯನ್ನು ಬೋಧಿಸಿದರು.ಹಿರಿಯ ಚಿಂತಕ ಫ್ರೋ, ಸಿಕೆ ಮಹೇಶ್ವರಪ್ಪ ಅವರು ಸಂವಿಧಾನ ಪ್ರಸ್ತಾವನೆಯನ್ನು ವಧು ವರ ಹಾಗೂ ವಿವಾಹಕ್ಕೆ ಬಂದಿದ್ದವರಿಗೆ ಬೋಧಿಸಿದರು.ಕವಿ ಶಿವಶಂಕರ್ ಸೀಗೇಹಟ್ಟಿ ಹಾಗು ಡಾ. ಪ್ರದೀಪ್ ಎಸ್ ವೇದಿಕೆ ಕಾರ್ಯಕ್ರಮ ನಿರ್ವಹಿಸಿದರು‌. ಇದೇ ಸಮಯದಲ್ಲಿ ಅರ್ಥವಿಲ್ಲದ ಆಚರಣೆಗಳನ್ನು ಬದಿಗೊತ್ತಿ ಮಾಡಿದ ಸಾಮಾಜಿಕ‌ ಕ್ರಾಂತಿಯೇ ಮಂತ್ರ ಮಾಂಗಲ್ಯ ಎಂದು ಮದುವೆಯಲ್ಲಿ ನೆರೆದಿದ್ದವರಿಗೆ ತಿಳಿಸಿಕೊಡಲಾಯ್ತು. ಇದೇ ಸಮಯದಲ್ಲಿ ಬುದ್ದ ಬಸವ ಅಂಬೇಡ್ಕರ್ ಹಾಗೂ ರಾಷ್ಟ್ರಕವಿ‌ಕುವೆಂಪು ಅವರ ಭಾವಚಿತ್ರಗಳಿಗೆ ಪೂಜಿಸಿಗೌರವಿಸಲಾಯಿತು.

Share. Facebook Twitter Pinterest LinkedIn Tumblr WhatsApp Email
Previous Articleರೈತರ ಹಿತ ಕಾಯದ ಸಿಎಂ ಸಿದ್ದರಾಮಯ್ಯ ಹಾಗು ಕೃಷಿ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತೇವೆ: ಎಂಎಲ್ ಸಿ ಕೆ ಎಸ್ ನವೀನ್
Next Article ಕಾಂಗ್ರೆಸ್ ಸರ್ಕಾರದ ವಿರುದ್ಧ ಆ. 1 ರಂದು ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.