ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಭೇಟಿ, ಪರಿಶೀಲನೆ
ಚಿತ್ರದುರ್ಗ ನಗರದ ಸರ್ಕಾರಿ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯರಾದ ಎಸ್.ಕೆ.ವೆಂಟಿಗೋಡಿ ಅವರು ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ನಗರದ ಬಾಲಕಿಯರ ಸರ್ಕಾರಿ ವೃತ್ತಿಪರ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿನ ಶೌಚಾಲಯ, ಸ್ನಾನಗೃಹ, ಅಡುಗೆ ಕೋಣೆ, ಗ್ರಂಥಾಲಯಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೃಷ್ಣಮೂರ್ತಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.