Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ
ರಾಜ್ಯ

ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ

D KumaraswamyBy D KumaraswamySeptember 17, 2023Updated:September 17, 2023No Comments3 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ

ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ ಹೆಚ್ಚು ಮಾಡಲಾಗುವುದು ಎಂದು ಭರವಸೆ ನೀಡಿದರು.

*ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು*

ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ಎಲ್ಲ ರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ, ಧರ್ಮಗಳ ನಡುವೆ ಸಂಘರ್ಷ, ಜಾತಿ ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರುಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

*ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟ*

ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಹಿಂದುಳಿದ ಜಾತಿಗಳ ಜಯಂತಿ ಹಾಗೂ ನಿಗಮಗಳನ್ನೂ ರಚನೆ ಮಾಡಲು ತೀರ್ಮಾನ ಮಾಡಿ ಹಣವನ್ನೂ ಒದಗಿಸಿದ್ದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟವಾಗುತ್ತದೆ.

*ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ*

 

 

ಆಯಾ ಜಾತಿಯವರೇ ತಮ್ಮ ಜಯಂತಿಗಳನ್ನು ಆಚರಣೆ ಮಾಡಿದರೆ ಜಾತಿ ಬಣ್ಣ ಬರುತ್ತದೆ. ಸರ್ಕಾರ ಮಾಡಿದರೆ ಜಾತಿ ಬಣ್ಣ ಬರುವುದಿಲ್ಲ. ನಾವು ಸರ್ವರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡುವುದರಲ್ಲಿ ನಂಬಿಕೆವುಳ್ಳವರು. ಕೆಲವೇ ಜಾತಿಗಳ ಸಮಾಜ ನಿರ್ಮಾಣವಾಗಬಾರದು. ನಮ್ಮಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಅನಾದಿ ಕಾಲದಿಂದಲೂ ನೈಪುಣ್ಯತೆ, ಕೌಶಲ್ಯವಿದ್ದರೂ ಆರ್ಥಿಕವಾಗಿ ಸಬಲರಲ್ಲ. ಸಬಲರಾಗಲು ಆರ್ಥಿಕ, ಸಾಮಾಜಿಕ ರಾಜಕೀಯ ಅವಕಾಶಗಳು ಸಿಗಬೇಕು. ಇಲ್ಲದಿದ್ದರೆ ಯಾವ ಜಾತಿಯೂ ಮೇಲೆ ಬರಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕವಾಗಲು, ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಆರ್ಥಿಕ ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುನರುಚ್ಚರಿಸಿದರು.

ಸ್ವಾತಂತ್ರ್ಯ ಗಳಿಸಿ 76 ವರ್ಷಗಳಾಗಿದ್ದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಸಂವಿಧಾನದಲ್ಲಿ ಎಲ್ಲರೂ ಸಮಾನರು.ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಬದ್ಧತೆ ಇರುವವರ ಬಳಿ ಅಧಿಕಾರ ಇದ್ದರೆ ಸಮಾನತೆ ತರಲು ಸಾಧ್ಯ.

*ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು*

ಸಂವಿಧಾನದ ವಿರುದ್ಧ ಇರುವವರ ಬಳಿ ಅಧಿಕಾರ ಇದ್ದರೆ ಸಾಧ್ಯವಿಲ್ಲ. ಬಹುತ್ವದ ಸಮಾಜ ಉಳ್ಳ ನಾವು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು. ವೈವಿಧ್ಯ ತೆಯಲ್ಲಿ ಏಕತೆ ಕಾಣಬೇಕು. ಒಂದು ಧರ್ಮ ಆಧಾರಿತ ದೇಶವಲ್ಲ ಇದು. ಒಂದು ಜಾತಿ, ಭಾಷೆ ಆಧಾರಿತ ದೇಶವಲ್ಲ. ಸಹಿಷ್ಣುತೆ, ಸಹಬಾಳ್ವೆ ಎಂದು ಸಂವಿಧಾನ ಹೇಳುತ್ತದೆ ಎಂದರು.

*ನಿಮ್ಮ ಧರ್ಮ ಪ್ರೀತಿಸಿ: ಇನ್ನೊಂದು ಧರ್ಮ ದ್ವೇಷಿಸದಿರಿ*

ಪ್ರತಿಯೊಬ್ಬರೂ ನಮ್ಮ ನಮ್ಮ ಧರ್ಮ ಪ್ರೀತಿಸಿ, ಗೌರವಿಸಿ. ಆದರೆ ಇನ್ನೊಂದು ಧರ್ಮವನ್ನು ದ್ವೇಷಿಸಬಾರದು. ಅವರನ್ನೂ ಪ್ರೀತಿ ಗೌರವದಿಂದ ಕಂಡಾಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ. ಕಾಂಗ್ರೆಸ್ ಅನೇಕ ಜನರಿಗೆ ರಾಜ್ಯಸಭಾ, ವಿಧಾನಪರಿಷತ್ ಸದಸ್ಯರಾಗುವ ಅವಕಾಶ ನೀಡಿದ್ದೇವೆ. ಬಿಂಬಾ ನಾಯ್ಕರ್, ರಘು ಆಚಾರ್ಯ ಅವರನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ್ದು. ಅವಕಾಶ ದೊರೆತಾಗ ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ರಾಜಕೀಯ ಅಧಿಕಾರವಿಲ್ಲದಿದ್ದರೆ, ನಿಮ್ಮ ಪರವಾಗಿ ಧ್ವನಿ ಎತ್ತುವವರು ಇರುವುದಿಲ್ಲ ಎಂದರು.

*ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ*

ಶಿಕ್ಷಣ ಪಡೆಯದಿದ್ದರೆ ಸಮಾಜ ಮುಂದುವರೆಯುವುದಿಲ್ಲ. ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಅದಕ್ಕೆ ಚಲನೆ ಇಲ್ಲ. ಸಾಮಾಜಿಕ ವ್ಯವಸ್ಥೆಗೆ ಆರ್ಥಿಕ, ಸಮಾಜಿಕ ಶಕ್ತಿ ಇಲ್ಲದಿದ್ದರೆ, ವ್ಯವಸ್ಥೆ ಬದಲಾಗುವುದಿಲ್ಲ. ಇದು ಬಂದಾಗ ಮಾತ್ರ ಚಲನೆ ಸಾಧ್ಯ. ಬದಲಾವಣೆಗೆ ವಿರುದ್ಧ ಇರುವವರು ಸಾಮಾಜಿಕ ವೈರಿಗಳು ಎಂದರು.

 

*ಹಿಂದೇಟು ಹಾಕುವುದಿಲ್ಲ*
ಸರ್ಕಾರ ಆಚರಿಸುವ ಜಯಂತಿ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲು ನಾನು ಹಿಂದೇಟು ಹಾಕುವುದಿಲ್ಲ. ಸರ್ಕಾರದ ವತಿಯಿಂದ ಜನಾಂಗದ ಕಾರ್ಯಕ್ರಮ ಆಚರಿಸಿದರೆ ಹೆಚ್ಚು ಮಹತ್ವ ಇರುತ್ತದೆ. ಹಾಗಾಗಿ ಸರ್ಕಾರವೇ ಅನೇಕ ಹಿಂದುಳಿದ ಜಯಂತ್ಯೋತ್ಸವವನ್ನು ಆಚರಣೆ ಮಾಡುತ್ತಿದೆ ಎಂದರು.

Share. Facebook Twitter Pinterest LinkedIn Tumblr WhatsApp Email
Previous Articleನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
Next Article ಕಾವೇರಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ
D Kumaraswamy
  • Tumblr

Related Posts

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.