ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದ ನೂತನ್ ಎಜುಕೇಷನ್ ಮತ್ತು ರೂರಲ್ ಡೆವಲೆಪ್ಮೆಂಟ್ ಸೊಸೈಟಿ ಯಿಂದ ಟ್ಯಾಲೆಂಟ್ ಹಂಟ್ ಎಂಬ ವಿನೂತನ ಕಾರ್ಯಕ್ರಮವನ್ನು ನೂತನ್ ಇಂಗ್ಲೀಷ್ ಮೀಡಿಯಂ ಹಾಗು ಪಿಯು ಕಾಲೇಜ್ ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 14 ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ 400 ಕ್ಕೆ ಹೆಚ್ಚು ಭಾಗವಹಿಸಿದ್ದು, ವಿದ್ಯಾರ್ಥಿಗಳಿಗಾಗಿ ವಾಲಿಬಾಲ್ ಥ್ರೋಬಾಲ್, ಚಿತ್ರಕಲೆ, ಟ್ಯಾಲೆಂಟ್ ಹಂಟ್, ಆಶುಭಾಷಣ ಸ್ಪರ್ಧೆ,ನೃತ್ಯ ಮತ್ತು ಸಂಗೀತದಂತಹ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನೂತನ್ ಎಜುಕೇಷನ್ ಮತ್ತು ರೂರಲ್ ಡೆವಲೆಪ್ಮೆಂಟ್ ಸೊಸೈಟಿಯ ಅಧ್ಯಕ್ಷರಾದ ರಾಘವೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.





