Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಅಲೆಮಾರಿಗಳ ರಕ್ಷಣೆ ಸರ್ಕಾರದ ಹೊಣೆಪ್ರತ್ಯೇಕ ಮೀಸಲು ಸೌಲಭ್ಯ ಅಗತ್ಯ:ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆ
ರಾಜ್ಯ

ಅಲೆಮಾರಿಗಳ ರಕ್ಷಣೆ ಸರ್ಕಾರದ ಹೊಣೆಪ್ರತ್ಯೇಕ ಮೀಸಲು ಸೌಲಭ್ಯ ಅಗತ್ಯ:ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆ

D KumaraswamyBy D KumaraswamyJuly 17, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಅಲೆಮಾರಿಗಳ ರಕ್ಷಣೆ ಸರ್ಕಾರದ ಹೊಣೆಪ್ರತ್ಯೇಕ ಮೀಸಲು ಸೌಲಭ್ಯ ಅಗತ್ಯ:ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆ

*ಚಿತ್ರದುರ್ಗ, ಜು.17: ಅಲೆಮಾರಿ ಸಮುದಾಯದ ಅಪ್ರಾಪ್ತರ ಮೇಲೆ ಈಚೆಗೆ ನಡೆಯುತ್ತಿರುವ ಅತ್ಯಾಚಾರಗಳು ಆತಂಕಕ್ಕೆ ಕಾರಣವಾಗಿದ್ದು, ಇದಕ್ಕೆ ತಡೆ ಹಾಕಲು ಸರ್ಕಾರ ಕಠಿಣ ಕ್ರಮಕೈಗೊಳ್ಳ ಬೇಕೆಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.

ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ದಿ ವೇದಿಕೆ ಆಶ್ರಯದಲ್ಲಿ ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಲೆಮಾರಿಗಳ ಮೇಲೆ ನಡೆಯುತ್ತಿರುವ ನಿರಂತರ ಅತ್ಯಾಚಾರ, ದೌರ್ಜನ್ಯ ಕೊಲೆಯಂತಹ ಗಂಭೀರ ವಿಚಾರಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಸಿಎಂ ಸಿದ್ದರಾಮಯ್ಯ ಬಳಿ ನಿಯೋಗ ತೆರಳುವ ಅಗತ್ಯ ಇದೆ. ಈ ಮೂಲಕ ಅಲೆಮಾರಿಗಳ ಹಕ್ಕುಗಳ ಈಡೇರಿಕೆ ಜೊತೆಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕ ಗುಂಪು ರಚಿಸಲು ಒತ್ತಡ ತರಬೇಕಿದೆ ಎಂದರು.

ದಿಕ್ಕುದೆಸೆ ಇಲ್ಲದ ಅಸ್ಪೃಶ್ಯ ನೋವು ಅನುಭವಿಸುತ್ತಿರುವ 49 ಅಲೆಮಾರಿ ಜಾತಿಗಳನ್ನು ನಾಗರಿಕ ಸಮಾಜದ ಮುಖ್ಯವಾಹಿನಿಗೆ ತರಲು ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ. ಶೀಘ್ರದಲ್ಲೇ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯಮಟ್ಟದ ಅಲೆಮಾರಿಗಳ ಸಮಾವೇಶ ಏರ್ಪಡಿಸಿ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.

 

 

ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ತಾವರೆಕೆರೆಯಲ್ಲಿ 13 ವರ್ಷದ  ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಅಮಾನವೀಯ ಘಟನೆ ನಾಗರಿಕ ಸಮಾಜವೇ ತಲೆತಗ್ಗಿಸುವ ಹೇಯ ಕೃತ್ಯ. ಆ ನೊಂದ ಕುಟುಂಬಕ್ಕೆ ಪರಿಹಾರ, ಒಬ್ಬರಿಗೆ ಉದ್ಯೋಗ ನೀಡಲು ಸರ್ಕಾರದ ಮೇಲೆ ಒತ್ತಡ ತರಬೇಕಿದೆ ಎಂದು ತಿಳಿಸಿದರು.

ಕವಿ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ಅಶಕ್ತ, ಅಸ್ಪೃಶ್ಯ ಸಮುದಾಯದ ರಕ್ಷಣೆ ಸರ್ವರ ಹೊಣೆಯಾಗಿದೆ.ಬಲಾಢ್ಯರು, ಬಹುಸಂಖ್ಯಾತರ ಜೊತೆ ಇವರನ್ನು ಸೇರಿಸಿ ಮೀಸಲಾತಿ ನೀಡುವ ಪದ್ಧತಿ ರದ್ದಾಗಬೇಕು. 49 ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ನೀಡಬೇಕೆಂದು ಹೇಳಿದರು.

ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಈ ಸಮುದಾಯಗಳ ಮೇಲಿನ ಅತ್ಯಾಚಾರ, ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಹಾಗೂ ಈ ವರ್ಗವನ್ನು ಮುಖ್ಯವಾಹಿನಿಗೆ ತರಲು ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಇವರ ಮೇಲೆ ದೌರ್ಜನ್ಯವನ್ನು ಎಸ್ಸಿ, ಎಸ್.ಟಿ. ಸಮುದಾಯದವರೇ ನಡೆಸಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲು ಕಾಯ್ದೆಗೆ ತಿದ್ದುಪಡಿ ಮಾಡಿ ಇವರಿಗೆ ರಕ್ಷಣೆ ಒದಗಿಸುವ ಮಹತ್ವದ ನಿರ್ಧಾರ ಸರ್ಕಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕೆಪಿಸಿಸಿ ಎಸ್‌ಸಿ ವಿಭಾಗದ ಅಧ್ಯಕ್ಷ ಧರ್ಮಸೇನ,  ಪತ್ರಕರ್ತರಾದ  ಜಾಣಗೆರೆ ವೆಂಕಟರಮಣಯ್ಯ, ಸಾಹಿತಿಗಳಾದ  ವಡ್ಡಗೆರೆ ನಾಗರಾಜಯ್ಯ, ಡಾ.ಬಾಲಗುರುಮೂರ್ತಿ, ಆದಿಜಾಂಭವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರಾದ  ಅಂಬಣ್ಣ ಆರೋಲಿಕರ,  ಭೀಮಾಶಂಕರ್, ಅಲೆಮಾರಿ ಮುಖಂಡರಾದ ಶೇಷಪ್ಪ ಅಂದೋಳ್ ಮಾತನಾಡಿದರು.

ಈ ಸಂದರ್ಭದಲ್ಲಿ ಅಲೆಮಾರಿ ಸಮುದಾಯದ ಪ್ರಮುಖರಾದ ಚಾವಡೆ ಲೋಕೇಶ್, ಲೋಹಿತ್,  ಕೆ.ವೀರೇಶ್, ಸುಭಾಷ್ ಚವಾಣ್, ಶಾಂತರಾಜ್, ಶಿವಕುಮಾರ್ ಬಳ್ಳಾರಿ, ಹನುಮಂತು,  ಬಸವರಾಜ್ ನಾರಾಯಣಕೆರೆ, ಸಾವಿತ್ರಮ್ಮ ರತ್ನಾಕರ್,  ಮಹಾಂತೇಶ್ ಸಂಕಲ್ ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleರಾಜೀನಾಮೆ ಕೊಡಲು ಬಂದ ಉಪಾಧ್ಯಕ್ಷರಿಂದ ನಗರಸಭೆ ಮಾಜಿ ಸದಸ್ಯನಿಂದ ಸರ್ಕಾರಿ ಆಸ್ತಿ ಕಬಳಿಕೆ ವಿರುದ್ಧ. ದಿಢೀರ್ ಪ್ರತಿಭಟನೆ
Next Article ರಾಯಚೂರು ವಿವಿ ಕುಲಪತಿಗಳಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.