ಪೊಲೀಸರ ಸೋಗಿನಲ್ಲಿ ಬಂದು ಚಿನ್ನದ ಸರ ಕದ್ದ ಕಳ್ಳರು

ರಾಜ್ಯ

ಪೊಲೀಸರ‌ ಸೋಗಿನಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ಚಳ್ಳಕೆರೆ ರಸ್ತೆಯ ದಿಶಾ ಡಾಬಾದಲ್ಲಿ ನಡೆದಿದೆ. ಬೆಂಗಳೂರಿನಿಂದ ಬಸ್ಸಿನಲ್ಲಿ ಚಿತ್ರದುರ್ಗಕ್ಕೆ ಬಂದು ಇಳಿದ ಸುಮಂಗಲ ಎನ್ನುವವರ ಬಳಿ ಬಂದ ಕಳ್ಳರು ಮುಂದೆ ಕಳ್ಳರಿದ್ದಾರೆ. ತೆಗೆದು ಬ್ಯಾಗಿನಲ್ಲಿಟ್ಟುಕೊಳ್ಳಿ ಎಂದು ಹೇಳುವ ಮೂಲಕ ಅವರ ಕೊರಳಲ್ಲಿದ್ದ ಚಿನ್ನದ ಸರ ಕಳವು ಮಾಡಿದ್ದಾರೆ. ಅಂದಾಜು 1ಲಕ್ಷದ 80 ಸಾವಿರ ಮೌಲ್ಯದ್ದು ಎಂದು ಅಂದಾಜಿಸಲಾಗಿದ್ದು, ಕಳವು ಮಾಡಿದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

 

 

Leave a Reply

Your email address will not be published. Required fields are marked *