Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಈ ಬಾರಿ ಜಕಾತಿ ವಸೂಲಿ ಇಲ್ಲ, ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ
ರಾಜ್ಯ

ಈ ಬಾರಿ ಜಕಾತಿ ವಸೂಲಿ ಇಲ್ಲ, ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ

D KumaraswamyBy D KumaraswamyFebruary 24, 2024No Comments3 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಈ ಬಾರಿ ಜಕಾತಿ ವಸೂಲಿ ಇಲ್ಲ, ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್

 

 

ಬರಗಾಲದ ಹಿನ್ನಲೆಯಲ್ಲಿ, ಭಕ್ತಾದಿಗಳ ಮನವಿಯಂತೆ ಈ ಬಾರಿ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಹಾಕಲಾಗುವ, ಅಂಗಡಿ ಹಾಗೂ ವಾಣಿಜ್ಯ ವ್ಯಾಪಾರ ಮಳಿಗೆಗಳ ಜಕಾತಿ ವಸೂಲಿ ಮಾಡುವುದಿಲ್ಲ. ಅಧಿಕಾರಿಗಳು ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ರಥೋತ್ಸವ-2024 ರ ಸಿದ್ಧತೆ ಕುರಿತು ನಾಯಕನಹಟ್ಟಿ ಒಳಮಠ ಸಮುದಾಯಭವನದ ಆವರಣದಲ್ಲಿ ಶನಿವಾರ ಏರ್ಪಡಿಸಲಾದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕ್ಷೇತ್ರದ ಜಾತ್ರೆಯು ಮಾರ್ಚ್ 19 ರಿಂದ ಏಪ್ರಿಲ್ 01 ರವರೆಗೆ ನಡೆಯಲಿದ್ದು, ಜಾತ್ರೆಯ ಅಂಗವಾಗಿ ಮಾರ್ಚ್ 26 ಮಂಗಳವಾರದಂದು ದೊಡ್ಡ ರಥೋತ್ಸವ ಜರುಗಲಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಕೆಎಸ್‍ಆರ್‍ಟಿಸಿ ಅಧಿಕಾರಿಗಳು ನಾಯಕನಹಟ್ಟಿ ಜಾತ್ರೆಗೆ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಕಲ್ಲಿಸಬೇಕು. ನಾಯಕನಹಟ್ಟಿಯಲ್ಲಿ ಪ್ರಸ್ತುತ ಇರುವ ಕೊಳವೆ ಬಾವಿಗಳ ಜೊತೆಗೆ ಅಗತ್ಯಕ್ಕೆ ಅನುಗುಣವಾಗಿ ಹೊಸದಾಗಿ ಕೊಳವೆ ಬಾವಿ ಕೊರೆದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಾಯಕಹಟ್ಟಿ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ರಸ್ತೆಗಳಲ್ಲಿ ಗುಂಡಿಗಳು ಕಂಡು ಬಂದರೆ ಸಂಬಂದಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಮುಕ್ತಿ ಬಾವುಟ ಹರಾಜಿಗೆ ಮಾರ್ಗಸೂಚಿ : ರಥೋತ್ಸವದ ತರುವಾಯ ಮುಕ್ತಿ ಬಾವುಟ ಹರಾಜಿನ ಮೊತ್ತ ಪಾವತಿ ಸಂಬಂಧ ಸೂಕ್ತ ಮಾರ್ಗಸೂಚಿ ರೂಪಿಸಲಾಗುವುದು. ಹರಾಜಿನಲ್ಲಿ ಭಾಗವಹಿಸುವವರು ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಕೂಗಿದ ಹರಾಜು ಮೊತ್ತವನ್ನು ನಿಗಧಿತ ಸಮಯದಲ್ಲಿ ದೇವಸ್ಥಾನ ಮಂಡಳಿಗೆ ಕಟ್ಟುವಂತೆ ವ್ಯವಸ್ಥೆ ರೂಪಿಸುವುದಾಗಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿ, ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಉತ್ತಮವಾಗಿರಬೇಕೆಂದರು. ಜಿಲ್ಲಾಧಿಕಾರಿಗಳು ದೇವಸ್ಥಾನಕ್ಕೆ ಸಂಬಂಧಿಸಿದ ಹಣದಲ್ಲಿ ಕನಿಷ್ಟ ರೂ. 10 ಲಕ್ಷ ಹಣವನ್ನು ಜಾತ್ರೆ ಅಥವಾ ಕ್ಷೇತ್ರದ ಅಭಿವೃದ್ಧಿಯ ಕೆಲಸ ಕಾರ್ಯಗಳ ನಿರ್ವಹಣೆ ಹಾಗೂ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಬಳಕೆ ಮಾಡುವಂತೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಬರಗಾಲ ಹಾಗೂ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಮೀಪ ಇರುವುದರಿಂದ ಬಹು ಬೇಗನೇ ಜಾತ್ರೆ ವ್ಯವಸ್ಥೆಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಬೇಕು. ಕುಡಿಯುವ ನೀರಿಗೆ ಪಟ್ಟಣ ಪಂಚಾಯತಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ಬೇರೆ ಸ್ಥಳೀಯ ಸಂಸ್ಥೆಗಳು ಹಾಗೂ ಹಾಲಿನ ಟ್ಯಾಂಕರ್‍ಗಳನ್ನು ತರಿಸಿ ನೀರು ಸರಬರಾಜು ಮಾಡಲು ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಪಟ್ಟಣದ ಖಾಲಿ ಜಾಗದಲ್ಲಿನ ಜಾಲಿ ಗಿಡಗಳನ್ನು ಕಡಿದು ಸ್ವಚ್ಛಗೊಳಿಸಬೇಕು. ಸ್ವಚ್ಛತಾ ಕಾರ್ಯಕ್ಕಾಗಿ ಬೇರೆ ನಗರ ಸ್ಥಳಿಯ ಸಂಸ್ಥೆಗಳಿಂದ ಅಗತ್ಯವಿರುವಷ್ಟು ಪೌರ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ಸಂಚಾರಿ ಶೌಚಾಲಯಗಳ ಬದಲಿಗೆ ಖಾಲಿ ಸ್ಥಳಗಳಲ್ಲಿ ಕನಿಷ್ಠ 50 ರಂತೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಬೇಕು. ರಸ್ತೆ ಸಾರಿಗೆ ಅಧಿಕಾರಿಗಳು ಹೊರ ಜಿಲ್ಲೆಗಳ ಡಿಪೋಗಳಿಂದ ಪತ್ರಿ ಬಾರಿ ನಿಯೋಜಿಸುತ್ತಿದ್ದ ಬಸ್ ಸಂಖ್ಯೆಗಳಿಗಿಂತ ಶೇ.20 ಹೆಚ್ಚಿನ ಬಸ್‍ಗಳನ್ನು ನಿಯೋಜನೆ ಮಾಡಬೇಕು ಎಂದರು.

ಸಮಿತಿಗಳ ರಚನೆ: ಸ್ವಚ್ಛತೆ, ಕುಡಿಯುವ ನೀರು, ಸಾರಿಗೆ, ರಕ್ಷಣೆ, ಆರೋಗ್ಯ ಸೇರಿದಂತೆ ಇತರೆ ವಿಷಯಗಳಿಗೆ ಪ್ರತ್ಯೇಕ ಸಮಿತಿಗಳನ್ನು ರಚಿಸಬೇಕು. ಈ ಸಮಿತಿಗಳು ಪರಸ್ಪರ ಸಮನ್ವಯತಯಿಂದ ಕಾರ್ಯನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಬೇಕು. ಪ್ರಾಣಿಬಲಿ ನಿಷೇಧವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಾಯಕನಹಟ್ಟಿ ಪಟ್ಟಣದಲ್ಲಿ ಅಗ್ನಿಶಾಮಕ ಕಚೇರಿ ಪ್ರಾರಂಭ, ಬರಗಾಲದ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳಿಗೆ ಯಾವುದೇ ಜಕಾತಿ ವಸೂಲಿ ಮಾಡಬಾರದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಜಾತ್ರೆಯ ದೊಡ್ಡ ರಥೋತ್ಸದಂದು ಹಾಗೂ ದೊಡ್ಡ ರಥೋತ್ಸವದ ನಂತರ ಸತತವಾಗಿ ಎರಡು ದಿನಗಳ ಕಾಲ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದು, ಜಾತ್ರೆಯ ಅಂಗವಾಗಿ 24*7 ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಪೂರ್ವಭಾವಿ ಸಭೆಯಲ್ಲಿ ಗ್ರಾಮಸ್ಥರು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಮುಖಂಡರಾದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಎಂ.ವೈ.ಟಿ.ಸ್ವಾಮಿ, ಬಾಲರಾಜು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಶಿವಸ್ವಾಮಿ ನಿರೂಪಿಸಿದರು.

Share. Facebook Twitter Pinterest LinkedIn Tumblr WhatsApp Email
Previous Articleಕಾಲೆಳೆಯುವುದನ್ನು ಬಿಡಿ ಒಂದಾಗಿ ಬಿಜೆಪಿ ಗೆಲ್ಲಿಸಿ
Next Article ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.