Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ನಮ್ಮ ಸಂಸ್ಥೆಯಲ್ಲಿ ಶಿಕ್ಷಣ ಪಡೆದವರು ಉನ್ನತ ಹುದ್ದೆ ಅಲಂಕರಿಸಿದ್ದಾರೆ
ರಾಜ್ಯ

ನಮ್ಮ ಸಂಸ್ಥೆಯಲ್ಲಿ ಶಿಕ್ಷಣ ಪಡೆದವರು ಉನ್ನತ ಹುದ್ದೆ ಅಲಂಕರಿಸಿದ್ದಾರೆ

D KumaraswamyBy D KumaraswamyOctober 20, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ : ಶಿಕ್ಷಣ ಸಂಸ್ಥೆಗಳು ಯಾವ ಮಟ್ಟದಲ್ಲಿ ಹಾಳಾಗುತ್ತಿದೆ. ಹೇಗೆ ಬೆಳೆಯುತ್ತಿದೆ ಎನ್ನವುದರ ಕಡೆ ನಿಗಾ ಇಡಲು ನ್ಯಾಕ್ ಕಮಿಟಿಯ ಪಾತ್ರ ದೊಡ್ಡದು ಎಂದು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.
ನ್ಯಾಕ್-ಬೈನರಿ ಅಕ್ರಿಡೇಷನ್ ಫ್ರೇಂ ವರ್ಕ್ ಅಂಡ್ ರಿಫಾರಮ್ಸ್-2024 ಕುರಿತು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮ್ಮೇಳನ ಉದ್ಗಾಟಿಸಿ ಮಾತನಾಡಿದರು.
1983-84 ರಲ್ಲಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಆರಂಭಗೊಂಡಿತು. 42 ವರ್ಷಗಳಿಂದ ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದರ ಹಿಂದೆ ಸಂಸ್ಥೆಯ ಸಂಸ್ಥಾಪಕರಾದ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರ ಪರಿಶ್ರಮ ಅಪಾರ. ಐದು ಸಾವಿರ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿದ್ದಾರೆ. ಬಿ.ಎ. ಬಿ.ಕಾಂ
ಬಿಸಿಎ. ಬಿಬಿಎ. ಫಾರ್ಮಸಿ, ಎಂ.ಫಾರ್ಮ, ನರ್ಸಿಂಗ್ ಆಯುರ್ವೇದಿಕ್ ಕಾಲೇಜು ನಮ್ಮ ಸಂಸ್ಥೆಯಡಿಯಲ್ಲಿ ನಡೆಸುತ್ತಿರುವುದು ಸುಲಭವಲ್ಲ ಎಂದರು.
ಕಾನೂನು ಸುಲಭವಾಗಿರಬೇಕು. ಕಠಿಣ, ದುರ್ಬಲವಾಗಿರಬಾರದು. 3600 ಶಿಕ್ಷಕರುಗಳನ್ನು ಸಮಾಜಕ್ಕೆ ಕೊಡುಗೆಯಾಗಿ ಕೊಟ್ಟಿರುವ ಕೀರ್ತಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗಿದೆ. ಇದಕ್ಕೆ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಪರಿಶ್ರಮ ಕಾರಣವೆಂದು ಸ್ಮರಿಸಿಕೊಂಡ ಎಂ.ಸಿ.ರಘುಚಂದನ್ ಇಲ್ಲಿ ಓದಿದವರಲ್ಲಿ ಕೆಲವರು ಜಿಲ್ಲಾಧಿಕಾರಿ, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳಾಗಿದ್ದಾರೆಂದು ಸಂತಸ ಹಂಚಿಕೊಂಡರು.
ಶಿಕ್ಷಣದ ಜೊತೆ ಮಾನವೀಯತೆ, ಸಂಸ್ಕಾರ, ಸಂಸ್ಕøತಿಯನ್ನು ಮಕ್ಕಳಿಗೆ ಕಲಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು ತಿಳಿಸಿದರು.
ನೋಡಲ್ ಅಧಿಕಾರಿ ಡಾ.ವಿಕ್ರಂ ಮಾತನಾಡಿ ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ, ಶಿಕ್ಷಕರ ನೇಮಕ, ಮಕ್ಕಳ ದಾಖಲಾತಿಯಾಗುತ್ತಿರುವುದರ ನಡುವೆ ಅನೇಕ ಸವಾಲುಗಳಿವೆ. ಶಿಕ್ಷಣ ರಂಗದಲ್ಲಿ ಸ್ಪರ್ಧೆ ಆರಂಭಗೊಂಡಿದೆ. ಪರೀಕ್ಷೆ, ಫಲಿತಾಂಶಕ್ಕಿಂತ ಮಿಗಿಲಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಪ್ರತಿ ರಂಗದಲ್ಲಿಯೂ ಡಾಕ್ಯುಮೆಂಟ್ ತುಂಬಾ ಮುಖ್ಯ. ನ್ಯಾಕ್ ಎನ್ನುವುದು ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲವನ್ನು ಹೇಳುತ್ತದೆ. ಹೊಸ ಮಾದರಿಯ ನ್ಯಾಕ್‍ಗೆ ಒಳಪಡುತ್ತಿದ್ದೇವೆ. ಇಂದಿಗೂ ನ್ಯಾಕ್‍ಗೆ ಒಳಪಡಬೇಕೋ ಬೇಡವೋ ಎನ್ನುವ ಗೊಂದಲ ಬಹಳಷ್ಟು ಶಿಕ್ಷಣ ಸಂಸ್ಥೆಗಳಲ್ಲಿದೆ ಎಂದು ಹೇಳಿದರು.
ಬೇರೆ ಕಾಲೇಜುಗಳಿಗೆ ಹೋಲಿಸಿದರೆ ಬಿ.ಇ.ಡಿ. ಕಾಲೇಜುಗಳಿಗೆ ನ್ಯಾಕ್ ತುಂಬಾ ಸುಲಭ. ಬೈನರಿ ಪದ್ದತಿಯಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು ಬೆಳೆಯಲು ನ್ಯಾಕ್ ಬೇಕು.
ಮಕ್ಕಳಿಗೆ ಪಾಠ ಮಾಡುವಾಗ ಗುರಿ ತಲುಪುತ್ತಿದ್ದೇವೆಯೆ ಎನ್ನುವ ಕಡೆ ಶಿಕ್ಷಕರು ಯೋಚಿಸಬೇಕು. ಇಂದಿನ ಯುಗದಲ್ಲಿ ಮಕ್ಕಳಿಗೆ ಕೌಶಲ್ಯಯುತ ಶಿಕ್ಷಣ ಮುಖ್ಯ. ಬಿ.ಇ.ಡಿ. ಶಿಕ್ಷಣ ಮುಗಿಸಿ ಮಕ್ಕಳ ಎದುರು ನಿಲ್ಲದಿದ್ದರೆ ಅಂತಹ ಶಿಕ್ಷಣ ಪ್ರಯೋಜನವಿಲ್ಲ. ಶಿಕ್ಷಣಕ್ಕೂ ಕೌಶಲ್ಯಕ್ಕೂ ವ್ಯತ್ಯಾಸವಿದೆ. ಫೀಡ್ ಬ್ಯಾಕ್ ಪದ್ದತಿ ಜಾರಿಯಲ್ಲಿರುವುದರಿಂದ ಕೆಲವು ಸಂಸ್ಥೆಗಳು ನ್ಯಾಕ್ ಪದ್ದತಿಯನ್ನು ಗಂಭೀರವಾಗಿ ತೆಗೆದುಕೊಂಡಿವೆ ಎಂದು ನ್ಯಾಕ್‍ನ ಮಹತ್ವ ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯದ ರಿಜಿಸ್ಟರ್ ಡಾ.ರಮೇಶ್ ಸಿ.ಕೆ. ಸಮ್ಮೇಳನದ ಸಂಯೋಜಕ ಪ್ರೊ.ಆರ್.ಎಸ್.ರಾಜು, ಐ.ಕ್ಯೂ.ಎ.ಸಿ.ಸಂಯೋಜಕರಾದ ಡಾ.ಹೆಚ್.ಎಸ್.ಬದ್ರಿ, ನ್ಯಾಕ್‍ನ್ ಫಾರ್ಮರ್ ಡೆಪ್ಯೂಟಿ ಸೆಕ್ರೆಟರಿ ಡಾ.ಎಸ್.ಶ್ರೀನಿವಾಸ್ ಇವರುಗಳು ಮಾತನಾಡಿದರು.
ಸಮ್ಮೇಳನದ ಸಂಯೋಜಕರುಗಳಾದ ಡಾ.ಜಿ.ಇ.ಭೈರಸಿದ್ದಪ್ಪ ವೇದಿಕೆಯಲ್ಲಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ.ಬಿ.ಸಿ.ಅನಂತರಾಮು ಅಧ್ಯಕ್ಷತೆ ವಹಿಸಿದ್ದರು.
ವಿವಿಧ ಕಾಲೇಜುಗಳು ಪ್ರಾಂಶುಪಾಲರು, ಐ.ಕ್ಯೂ.ಎ.ಸಿ. ಕೋ-ಆರ್ಡಿನೇಟರ್‍ಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಸಿದ್ದರಾಮಯ್ಯ ವಾಲ್ಮೀಕಿ ಜಯಂತಿಯಂದೆ ರಾಜೀನಾಮೆ ನೀಡಲಿ : ಎಸ್ ನವೀನ್ ಆಗ್ರಹ
Next Article ಹಿರಿಯೂರಿನಲ್ಲಿ 10 ಲಕ್ಷ ದೋಚಿ ಪರಾರಿಯಾದ ಕಳ್ಳರು
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.