ಸರ್ವೋದಯ ಸಿದ್ದಾಂತಕ್ಕೆ ತಿಲಾಂಜಲಿ ಇಟ್ಟ ಬಜೆಟ್: ಸಂಸದ ಗೋವಿಂದ ಕಾರಜೋಳ
ಚಿತ್ರದುರ್ಗ,ಮಾ07- ವಿಧಾನ ಸಭೆಯಲ್ಲಿ 2025-26ನೇ ಸಾಲಿನ ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯನವರು ಸರ್ವೋದಯದ ಸಿದ್ದಾಂತಕ್ಕೆ ತಿಲಾಂಜಲಿ ಇಡುವ ಮೂಲಕ ಸಮಾಜದಲ್ಲಿ ಅಸಮಾನತೆ ಮತ್ತು ದ್ವೇಷದ ರಾಜಕಾರಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರನ್ನು ಕೇಳಲು ಬಯಸಿದ್ದು,ಮಧ್ಯಕರ್ನಾಟಕದಲ್ಲಿ ಪ್ರಮುಖ ನೀರಾವರಿ ಯೋಜನೆಗಳಾದ ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಒಂದೂ ರೂಪಾಯಿ ಕೂಡ ಮೀಸಲಿರಿಸಿಲ್ಲ. ನವಲಿ ಮತ್ತು ತುಂಗಾ ಭದ್ರಾ ನದಿಗೆ ಸಮಾನಾಂತರ ಜಲಾಶಯ ನಿರ್ಮಿಸಲು ಹಣ ಇಟ್ಟಿಲ್ಲ. ಕೇವಲ ಹಿಂದಿನ ಸರ್ಕಾರದಲ್ಲಿ ಮಂಜೂರಾಗಿ ನಡೆಯುತ್ತಿರುವ ಕಾಮಗಾರಿಗಳ ಪಟ್ಟಿಯನ್ನು ಆವವ್ಯಯ ಪುಸ್ತಕದಲ್ಲಿ ಮುದ್ರಿಸಿ, ಜನರ ಕಲ್ಯಾಣ ಬಯಸದೆ ಜನರಿಗೆ ಮೋಸ ಮಾಡುವ ನಿರಾಶಾದಾಯಕ ಬಜೆಟ್ ಆಗಿದೆ. ಗ್ಯಾರಂಟೀ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯವನ್ನು ಅಭಿವೃದ್ಧಿಯ ದೃಷ್ಟಿಯಲ್ಲಿ 10 ವರ್ಷದಷ್ಟು ಹಿಂದಕ್ಕೆ ತಳ್ಳಿದೆ. ಮುಂಬರುವ ದಿನಗಳಲ್ಲಿ ಅಲ್ಪ ಸಂಖ್ಯಾತರ ಓಲೈಕೆಗಾಗಿ ಸಿದ್ದರಾಮಯ್ಯನವರು ಅಲ್ಪ ಸಂಖ್ಯಾತರಿಗಾಗಿಯೇ ಪ್ರತ್ಯೇಕ ಬಜೆಟ್ ಮಂಡಿಸಿದರೂ ಆಶ್ಚರ್ಯ ಪಡಬೇಕಿಲ್ಲ ಎಂದು ಹೇಳಿದ್ದಾರೆ.





