Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು: ಸ್ಥಳ ಸಮೀಕ್ಷೆ ನಡೆಸಲು ಸಿಎಂ ಸೂಚನೆ
ರಾಜ್ಯ

ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು: ಸ್ಥಳ ಸಮೀಕ್ಷೆ ನಡೆಸಲು ಸಿಎಂ ಸೂಚನೆ

D KumaraswamyBy D KumaraswamyAugust 24, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು: ಸ್ಥಳ ಸಮೀಕ್ಷೆ ನಡೆಸಲು ಸಿಎಂ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2023- 24 ನೇ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಇಂದು ಸಭೆ ಜರುಗಿತು.

ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶಗಳು, 50 ಸಾವಿರ ಎರಕೆ ಹುಲ್ಲುಗಾವಲು ಪ್ರದೇಶಗಳು, 2 ಲಕ್ಷ ಬರ ಪರಿಹಾರ ಕಾಮಗಾರಿ ಗಳು, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿ ಗಳು ಹಾಗೂ 4268 ಭೂ ಕುಸಿತ ತಡೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

27903 ಗ್ರಾಮಗಳಲ್ಲಿ ಸ್ಮಾಶಾನ ಭೂಮಿಯನ್ನು ಶಾಂತಿಧಾಮಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುವುದು.
5000 ಶಾಲಾ ಆರಣಗಳನ್ನು ವಿದ್ಯಾಧಾಮಗಳನ್ನಾಗಿ ಉನ್ನತೀಕರಿಸುವುದು, 750 ಗ್ರಾಮ ಸಂತೆಗಳನ್ನು ಹಾಗೂ 27 ಸಾವಿರ ಕೊಳವೆಬಾವಿ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ಸಚಿವ ಪ್ರಿಯಾಂಕಾ ಖರ್ಗೆ ವಿವರಿಸಿದರು.

*ನೀರು ಪೂರೈಕೆ ಕುರಿತು ವರದಿ ಸಲ್ಲಿಸಲು ಸೂಚನೆ*
ವರುಣಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ, ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ ಎಂದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

*ವಾರಾಂತ್ಯದಲ್ಲಿ ಗ್ರಂಥಾಲಯ ತೆರೆಯಿರಿ*
ಗ್ರಾಮ ಪಂಚಾಯಿತಿ ಗ್ರಂಥಾಲಯ ಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ ಸಂವಿಧಾನ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯ ಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲಿದೆ ಎಂದರು.

ವಿದ್ಯಾರ್ಥಿಗಳಿಗೆ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಮೂರು ವರ್ಷಗಳಲ್ಲಿ ಇದನ್ನು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

 

*ಕೂಸಿನ ಮನೆ*

ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ , ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಗಳು ಸೂಚಿಸಿದರು.

ಮುಖ್ಯಮಂತ್ರಿಗಳ ಫೆಲೋಶಿಪ್ ಗಾಗಿ ಪ್ರತಿ ತಾಲ್ಲೂಕಿನ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ಆಯ್ಕೆ ಮಾಡುವುದು 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷ ಗಳ ವೆಚ್ಚದಲ್ಲಿ ನಿರ್ಮಾಣ ಕಾರ್ಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಗ್ರಾಮೀಣ ಪ್ರದೇಶಗಳಲ್ಲಿ ಒಣ ತ್ಯಾಜ್ಯ ವಿಲೇವಾರಿಯಲ್ಲಿ ನಿರಂತರತೆ ಕಾಪಾಡಲು ಹಾಗೂ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು 27 ಜಿಲ್ಲೆಗಳಲ್ಲಿ ತಲಾ ಒಂದು ರಿಕವರಿ ಫೆಸಿಲಿಟಿಯನ್ನು ತಲಾ 2 ಕೋಟಿ ವೆಚ್ಚದಲ್ಲಿ ನಿರ್ಮಾಣ. 22 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಆಯುಕ್ತ ಅಂಜುಮ್ ಪರ್ವೇಜ್, ಸಭೆಯಲ್ಲಿ, ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಇಸ್ರೋ ವಿಜ್ಞಾನಿಗಳನ್ನು ಸನ್ಮಾನಿಸಲಾಗುತ್ತದೆ : ಸಿಎಂ ಸಿದ್ದರಾಮಯ್ಯ
Next Article ಸಂವಿಧಾನದ ಮೌಲ್ಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.