Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕಬ್ಬಿಣದ ಅದಿರು ಸಾಗಿಸುವ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುತ್ತದೆ: ಎಚ್ಚರಿಕೆ ನೀಡಿದ ಡಿಸಿ ಟಿ.ವೆಂಕಟೇಶ್
ಜಿಲ್ಲಾ ಸುದ್ದಿ

ಕಬ್ಬಿಣದ ಅದಿರು ಸಾಗಿಸುವ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುತ್ತದೆ: ಎಚ್ಚರಿಕೆ ನೀಡಿದ ಡಿಸಿ ಟಿ.ವೆಂಕಟೇಶ್

D KumaraswamyBy D KumaraswamyMarch 12, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 ಕಬ್ಬಿಣದ ಅದಿರು ತುಂಬಿದ ಲಾರಿಗಳು ಚಿತ್ರದುರ್ಗ ತಾಲ್ಲೂಕಿನ ಕಡ್ಲೆಗುದ್ದು ಹಾಗೂ ಸಾಸಲು ಗ್ರಾಮಗಳ ಮುಖಾಂತರ ಸಂಚರಿಸುವಾಗ ಆಗುತ್ತಿರುವ ತೊಂದರೆ ಹಾಗೂ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳನ್ನು ಪದೇ ಪದೇ ತಡೆದು ಪ್ರತಿಭಟನೆ ನಡೆಸುತ್ತಿರುವ ಕುರಿತು ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ಕಡ್ಡಾಯವಾಗಿ ಯಾರು ಕೂಡ ಸಾರ್ವಜನಿಕ ರಸ್ತೆ ತಡೆಯುವುದಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಬ್ಬಿಣದ ಅದಿರು ಸಾಗಾಣಿಕೆ ಮಾಡುವ ವಾಹನಗಳ ರಹದಾರಿಯ ಕುರಿತು ಗಣಿ ಮಾಲೀಕರು, ಅದಿರು ಸಾಗಾಣಿಕೆದಾರರು ಮತ್ತು ಸ್ಥಳೀಯ ಗ್ರಾಮಸ್ಥರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ  ಮಾತಾಡಿದರು.
ಗಣಿಬಾಧಿತ ಪ್ರದೇಶಗಳ ಸ್ಥಳೀಯ ಗ್ರಾಮಸ್ಥರಿಗೂ ತೊಂದರೆಯಾಗುತ್ತಿರುವುದು ಸಹ ಗಮನಕ್ಕೆ ಬಂದಿದೆ.  ಸ್ಥಳೀಯ ಗ್ರಾಮಸ್ಥರಿಗೆ ದೂಳಿನ ಸಮಸ್ಯೆ, ಕೃಷಿ ಚಟುವಟಿಕೆಗಳಿಗೆ ಆಗುತ್ತಿರುವ ತೊಂದರೆ, ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರ ದಟ್ಟಣೆ ಇತ್ಯಾದಿ ವಿಚಾರಗಳಿಗೆ ಸಂಬಂಧಪಟ್ಟಂತೆ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ಲೋಕೋಪಯೋಗಿ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಉಪವಿಭಾಗಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚನೆ ಮಾಡಲಾಗುವುದು.ಹೆಚ್ಚಿನ ವಾಹನ ಸಂಚಾರ ದಟ್ಟಣೆಯ ಗಣಿಬಾಧಿತ ಪ್ರದೇಶಗಳ ಗ್ರಾಮಗಳ ರಸ್ತೆಯನ್ನು ಅಪ್‍ಗ್ರೇಡ್ ಮಾಡುವುದು, ರಸ್ತೆ ದುರಸ್ತಿ ಹಾಗೂ ಸ್ಕೈವಾಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇದರ ಜೊತೆಗೆ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನವನ್ನು ಸಂಬಂಧಪಟ್ಟ ಗಣಿ ಕಂಪನಿಗಳು ಕಡ್ಡಾಯವಾಗಿ ಮಾಡಬೇಕು. ಉಪ ಸಮಿತಿಯು ಶಿಫಾರಸ್ಸು ಮಾಡುವ ಎಲ್ಲ ಸಲಹೆ-ಸೂಚನೆಗಳಿಗೆ ಗಣಿ ಕಂಪನಿಗಳು ಕಡ್ಡಾಯವಾಗಿ ಬದ್ಧರಿರಬೇಕು. ಉಪ ಸಮಿತಿಯು ಶಿಫಾರಸ್ಸು ಮಾಡುವ ಸಲಹೆ-ಸೂಚನೆಗಳಿಗೆ ಗಣಿ ಕಂಪನಿಗಳು ಅಗತ್ಯ ಸಹಕಾರ ನೀಡದಿದ್ದರೆ ಕಬ್ಬಿಣದ ಅದಿರು ಸಾಗಾಣಿಕೆ ಮಾಡುವ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಸ್ಥಳೀಯ ಗ್ರಾಮಸ್ಥರಿಗೆ ಟ್ಯಾಂಕರ್ ಪೂರೈಕೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಸೇರಿದಂತೆ ಸಿಎಸ್‍ಆರ್ ನಿಧಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಗಣಿ ಪ್ರದೇಶಗಳ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆಗೆ ಕ್ರಮ, ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡಲು ಪ್ರತ್ಯೇಕ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾತನಾಡಿ, ಕಳೆದ ಕೆಲವು ತಿಂಗಳ ಹಿಂದೆ ಕಬ್ಬಿಣದ ಅದಿರು ತುಂಬಿದ ಲಾರಿಗಳ ಸಂಚಾರಕ್ಕೆ ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಸ್ಥಳೀಯ ಗ್ರಾಮಸ್ಥರು ವಾಹನಗಳ ಸಂಚಾರ ತಡೆಗೆ ಸಂಬಂಧಪಟ್ಟಂತೆ ದೂರುಗಳು ಬಂದಿದ್ದು, ಸಾರ್ವಜನಿಕರ ರಸ್ತೆಯ ವಾಹನ ಸಂಚಾರವನ್ನು ತಡೆಯುವ ಅಧಿಕಾರ ಯಾರಿಗೂ ಇಲ್ಲ. ಸಾರ್ವಜನಿಕ ರಸ್ತೆಯಲ್ಲಿ ವಾಹನಗಳನ್ನು ತಡೆದರೆ ಕಾನೂನು ಚೌಕಟ್ಟಿನಲ್ಲಿ ಎಫ್‍ಐಆರ್ ಪ್ರಕರಣವನ್ನೂ ದಾಖಲಿಸಬಹುದು. ಮುಂದಿನ ದಿನಗಳಲ್ಲಿ ಇದು ಹೀಗೆ ಮುಂದುವರೆದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಗಣಿ ಪ್ರಾರಂಭದ ಸಂದರ್ಭದಲ್ಲಿ 10 ರಿಂದ 15 ವಾಹನಗಳ ಸಂಚಾರ ಇತ್ತು. ಪ್ರಸ್ತುತ ದಿನಗಳಲ್ಲಿ ನಿತ್ಯವೂ 150ಕ್ಕೂ ಹೆಚ್ಚು ವಾಹನಗಳ ಸಂಚಾರ ನಡೆಯುತ್ತಿದೆ. ದೂಳಿನ ಸಮಸ್ಯೆಯಿಂದಾಗಿ ಆರೋಗ್ಯದ ಮೇಲೆ ದುಷ್ಪಾರಿಣಾಮಗಳು ಬೀರುತ್ತಿವೆ. ಕಿರಿದಾದ ರಸ್ತೆ ಇರುವುದರಿಂದ ಬಹಳ ತೊಂದರೆಯಾಗುತ್ತಿದೆ ಎಂದು ಕಡ್ಲೇಗುದ್ದು, ಮೇಗಳಹಳ್ಳಿ, ಕಾಗಳಗೇರಿ, ಗ್ರಾಮಸ್ಥರು ಅಳಲು ತೋಡಿಕೊಂಡರು.
ಜಾನ್ ಮೈನ್ಸ್ ನ ಧನಂಜಯ  ಮಾತನಾಡಿ, ಕಳೆದ ಐದು ತಿಂಗಳಿಂದ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿಲ್ಲ. ಹೊಸಪೇಟೆಯಿಂದ ಅದಿರು ತಂದು ಘಟಕ ನಡೆಸಲಾಗುತ್ತಿದ್ದು, ತೊಂದರೆ ಉಂಟಾಗಿದೆ. ಹೀಗಾಗಿ ಸ್ಥಳೀಯವಾಗಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಸಭೆಯಲ್ಲಿ  ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಮಹೇಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಪರಿಸರ ಅಧಿಕಾರಿ ಪ್ರಕಾಶ್  ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಮುರುಘಾ ಶರಣರು ರಚಿಸಿದ್ದ ಕಮಿಟಿಯಿಂದ ನನ್ನನ್ನೆ ಹೊರಗೆ ಹಾಕಿದ್ದರು: ಬಸವ ನಾಗಿದೇವ ಶ್ರೀ
Next Article ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಉಗ್ರಂ ಖ್ಯಾತಿಯ ಶ್ರೀ ಮುರುಳಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.