Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕಾರ್ಮಿಕ ದಿನಾಚರಣೆ ಆಚರಿಸಿದ ಪತ್ರಕರ್ತರ ಹಾಗೂ ಪತ್ರಿಕಾ ವಿತರಕರ ಸಂಘ
ರಾಜ್ಯ

ಕಾರ್ಮಿಕ ದಿನಾಚರಣೆ ಆಚರಿಸಿದ ಪತ್ರಕರ್ತರ ಹಾಗೂ ಪತ್ರಿಕಾ ವಿತರಕರ ಸಂಘ

D KumaraswamyBy D KumaraswamyMay 1, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಶ್ರಮಜೀವಿಗಳ ಕೆಲಸವನ್ನು ಗೌರವಿಸುವ ಹಾಗೂ ಅವರ ಕಷ್ಟಗಳನ್ನು ಸ್ಮರಿಸುವ ಸಲುವಾಗಿ ಮೇ 1ರಂದು ಜಾಗತಿಕವಾಗಿ ‘ಅಂತಾರಾಷ್ಟ್ರೀಯ ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ರಾಷ್ಟ್ರೀಯ ಯುವ ಸನ್ಮಾನ್ ಪ್ರಶಸ್ತಿ ಪುರಸ್ಕೃತರಾದ ವಕೀಲ ಎಸ್. ವೇದಮೂರ್ತಿ ತಿಳಿಸಿದರು.

ಹೊಳಲ್ಕೆರೆ ಪಟ್ಟಣದ ಪತ್ರಿಕಾ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತಾಲೂಕು ಪತ್ರಿಕಾ ವಿತರಕರ ಸಂಘ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಹಾಗೂ ಪತ್ರಿಕಾ ವಿತರಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 

 

ಸಮಾಜಕ್ಕಾಗಿ ಕಾರ್ಮಿಕರ ಕೊಡುಗೆ ಹಾಗೂ ತ್ಯಾಗವನ್ನು ಕಾರ್ಮಿಕ ದಿನಾಚರಣೆ ಹಮ್ಮಿಕೊಂಡು ಸ್ಮರಿಸಬೇಕು. ಇಂದು ಗ್ರಾಮೀಣ ಮಟ್ಟದಲ್ಲಿ ಕಾರ್ಮಿಕ ವೃತ್ತಿಯಲ್ಲಿರುವ ಸಾಕಷ್ಟು ಕುಟುಂಬಗಳು ಸಂಕಷ್ಟದ ಬದುಕು ಕಟ್ಟಿಕೊಳ್ಳುತ್ತವೆ. ಕೌಶಲ್ಯ ಆಧಾರಿತವಾಗಿ ವೃತ್ತಿ ನಿರ್ವಹಿಸುವ ಕಾರ್ಮಿಕರಿಗೆ ಕಾಲಕಾಲಕ್ಕೆ ಉದ್ಯೋಗ ಸಿಗುತ್ತಿಲ್ಲ .
ಜೀವನಕ್ಕೆ ಬೇಕಾದಷ್ಟು ಹಣ ಸಂಪಾದನೆ ಆಗುತ್ತಿಲ್ಲ. ವಾರದಲ್ಲಿ ಒಂದೆರಡು ದಿನ ವೃತ್ತಿ ನಿರ್ವಹಿಸಿ ಬಾಕಿ ದಿನ ದುಡಿಮೆ ಇಲ್ಲದೆ ಖಾಲಿ ಕೂರುವ ಸ್ಥಿತಿ ಇದೆ. ಬರಗಾಲ ಎಲ್ಲಾ ವಿಧದ ಕಾರ್ಮಿಕರಿಗೆ ಕೆಲಸವಿಲ್ಲದಂತೆ ಮಾಡಿದೆ. ಸರ್ಕಾರಗಳು ಕಾರ್ಮಿಕ ಕಲ್ಯಾಣ ನಿಧಿಯನ್ನು ಸಾಲದ ರೂಪದಲ್ಲಿ ವಿತರಿಸಿ ದುಡಿಯುವ ವರ್ಗಕ್ಕೆ ಕೆಲಸ ನೀಡಬೇಕು. ಇವರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣಕಾಸು ಸೌಲಭ್ಯ ಕಲ್ಪಿಸಬೇಕು. ವಿವಾಹ, ಅಪಘಾತ, ಸಾವುಗಳಂತಹ ಸಮಸ್ಯೆಯಾದಾಗ ತ್ವರಿತಗತಿಯಲ್ಲಿ ಪರಿಹಾರ ನೀಡಲು ಕಾರ್ಮಿಕ ಇಲಾಖೆ ನಿರ್ಲಕ್ಷ ಮಾಡಬಾರದು. ಕಾರ್ಮಿಕರು ಸಂಘಟಿತರಾಗಿ ಸರ್ಕಾರಿ ಸೌಲಭ್ಯಗಳನ್ನು ಸಕಾಲಕ್ಕೆ ಪಡೆದುಕೊಂಡು ಅಭಿವೃದ್ಧಿ ಸಾಧಿಸಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಪತ್ರಕರ್ತರ ಸಂಘದ ಉಪಾಧ್ಯಕ್ಷ ಎ. ಚಿತ್ತಪ್ಪ ಮಾತನಾಡಿ, ಕಾರ್ಮಿಕರು ಸಮಸ್ಯೆಗಳನ್ನು ಹೊತ್ತುಕೊಂಡು ಬದುಕುತ್ತಿದ್ದಾರೆ. ಅವರಿಗೆ ಸರ್ಕಾರ ಸೌಲಭ್ಯಗಳನ್ನು ಬರಪೂರವಾಗಿ ನೀಡಬೇಕು. ಕಾರ್ಮಿಕರಿಗೆ ಆರೋಗ್ಯ ವಿಮೆ, ಅಪಘಾತ ವಿಮೆ, ಮತ್ತಿತರ ಸೌಲಭ್ಯವನ್ನು ಕಲ್ಪಿಸಿಕೊಡಬೇಕು. ಪತ್ರಿಕಾ ವಿತರಕರನ್ನ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಒಳಪಡಿಸಿ ಸೂಕ್ತ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ತಿಪ್ಪೇರುದ್ರಪ್ಪ ವಹಿಸಿದ್ದರು. ಗೌರವಾಧ್ಯಕ್ಷ ಮಲ್ಲೇಶಪ್ಪ, ಗೌಡಿಹಳ್ಳಿ ವಿರೂಪಾಕ್ಷಪ್ಪ, ನಿಕಟ ಪೂರ್ವ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ರವಿಕುಮಾರ್ ಸದಸ್ಯರಾದ ಶಿವಕುಮಾರ್, ಯೋಗರಾಜ್, ನಾಗರಾಜ್, ಶಿವಣ್ಣ , ಸುರೇಶ್ ಹಾವಿನಟ್ಟಿ, ಸೇರಿದಂತೆ ಹಲವಾರು ಕಾರ್ಮಿಕರು ಇದ್ದರು.
ಪತ್ರಿಕಾ ವಿತರಕರ ಸಂಘದಿಂದ ತಾಲೂಕಿನ ಪತ್ರಿಕಾ ವಿತರಕರಿಗೆ ಗುರುತಿನ ಪತ್ರ ವಿತರಣೆ ಮಾಡಲಾಯಿತು.

 

Share. Facebook Twitter Pinterest LinkedIn Tumblr WhatsApp Email
Previous Articleನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀಗಳು
Next Article ಅಬಕಾರಿ ಉಪ ಆಯುಕ್ತ ನಾಗಶಯನ ಮೇಲಿನ ಭ್ರಷ್ಠಾಚಾರ ಪ್ರಕರಣ ವಜಾ ಗೊಳಿಸಿದ ಸುಪ್ರೀಂ ಕೋರ್ಟ್
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.