ಮಹಿಳೆಯರ ರಾಜಕೀಯ ಅಧಿಕಾರದ ಉಪಯೋಗವಾಗಲಿ

ಆರೋಗ್ಯ

ಮಹಿಳೆಯರ ರಾಜಕೀಯ ಅಧಿಕಾರದ ಉಪಯೋಗವಾಗಲಿ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ. ಇದರ ಪರಿಣಾಮವಾಗಿ ಅನೇಕ ಮಹಿಳೆಯರು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಆಗಿದ್ದಾರೆ. ಆದರೆ ಇಲ್ಲಿ ಮಹಿಳೆಯರು ಅಧಿಕಾರ ಚಲಾಯಿಸುವ ಬದಲಿಗೆ ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಾರೆ ಇದು ಬದಲಾಗಬೇಕು. ಮಹಿಳೆಯರು ಸ್ವತಃ ರಾಜಕೀಯ ಅಧಿಕಾರ ಚಲಾಯಿಸಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಎನ್.ಆರ್.ಎಲ್.ಎಂ-ಸಂಜೀವಿನಿ ಸಹಯೋಗದಲ್ಲಿ ಬುಧವಾರ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಲೋಕಸಭಾ ಹಾಗೂ ವಿಧಾನಸಭೆ ಚುನಾವಣೆಯಲ್ಲೂ ಕೂಡ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಗೆ ನೀಡಬೇಕು ಎಂಬ ಬೇಡಿಕೆ ಬಹುದಿನಗಳಿಂದ ಪ್ರಚಲಿತದಲ್ಲಿದೆ. ಈ ಬೇಡಿಕೆ ಇದುವರೆವಿಗೂ ಈಡೇರಿಲ್ಲ. ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಿತಿಗತಿಗಳು ಬದಲಾಗಬಹುದು. ಮಹಿಳೆಯರು ತಮಗೆ ನೀಡಿರುವ ರಾಜಕೀಯ ಅಧಿಕಾರವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಸಾಮಥ್ರ್ಯಗಳಿಸಿ ಸಮಾಜದಲ್ಲಿ ಸಮಾನತೆ ಸಾಧಿಸಬೇಕು ಎಂದರು.
ಪ್ರಜಾಪ್ರಭುತ್ವಕ್ಕೆ ಮಾದರಿ ಎನಿಸಿದ ಅಮೇರಿಕಾದ ದೇಶದ ಚುನಾವಣೆಯಲ್ಲಿ ಇದುವರೆವಿಗೂ ಒಬ್ಬ ಮಹಿಳೆ ಅಧ್ಯಕ್ಷೆಯಾಗಿ ಆಯ್ಕೆಯಾಗಿಲ್ಲ. ಆದರೆ ಶ್ರೀಲಂಕಾ, ಭಾರತ, ಪಾಕಿಸ್ತಾನ, ಬಾಂಗ್ಲಾ ಸೇರಿದಂತೆ ಏμÁ್ಯ ದೇಶಗಳಲ್ಲಿ ಮಹಿಳೆಯರು ಪ್ರಧಾನ ಮಂತ್ರಿಯಾಗಿ ಅಧಿಕಾರ ಅಲಂಕರಿಸಿದ್ದಾರೆ. ಭಾರತದಲ್ಲಿ ವಿಶೇಷವಾಗಿ ಮಹಿಳೆಯರು ಎಲ್ಲಾ ರಂಗದಲ್ಲಿ ಭಾಗವಹಿಸುತ್ತಿದ್ದಾರೆ. ಸರ್ಕಾರ ಮಹಿಳೆಯರು ಹಾಗೂ ಮಹಿಳಾ ಸಂಘಟನೆಯ ಪೆÇ್ರೀತ್ಸಾಹ ನೀಡುತ್ತಿದೆ. ಬಹು ದಿನಗಳ ಹಿಂದೆ ಹೆಣ್ಣುಮಗು ಜನಿಸಿದರೆ ಬೇಸರ ಪಡುವ ಸಂಗತಿ ಇತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ‘ಬೇಟಿ ಬಚಾವೋ ಬೇಟಿ ಪಡವೋ’ ಎಂಬ ಯೋಜನೆ ಜಾರಿಗೆ ತಂದರು. ಜನನಕ್ಕೂ ಮುನ್ನವೇ ಹೆಣ್ಣು ಮಗುವಿನ ರಕ್ಷಣೆಗೆ ಕಾನೂನು ರೂಪಿಸಲಾಗಿದೆ. ಇದರ ಫಲವಾಗಿ ದೇಶದ ಲಿಂಗಾನುಪಾತದಲ್ಲಿ ಸ್ತ್ರೀಯರ ಪ್ರಮಾಣ ಹೆಚ್ಚಾಗಿದೆ. ಸರ್ಕಾರದ ಯೋಜನೆಗಳನ್ನು ಮಹಿಳಾ ಹೆಸರಿನಲ್ಲಿ ನೀಡಲಾಗುತ್ತದೆ. ಇದಕ್ಕೆ ಮುಖ್ಯ ಕಾರಣ ಮಹಿಳೆಯರು ಇದನ್ನು ಸರಿಯದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳುತ್ತಾರೆ ಎಂಬುದಾಗಿದೆ ಎಂದರು.
ಹೆಣ್ಣು ಮಕ್ಕಳ ರಕ್ಷಣೆಗಾಗಿ ಈ ಹಿಂದೆ ಭಾಗ್ಯ ಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ. ಸದ್ಯ ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲಾಗಿದೆ. ಮಹಿಳೆಯುರು ಜಿಲ್ಲೆಯಲ್ಲಿ ಮಹಿಳಾ ಸಂಘಟನೆಗಳು ಹಾಗೂ ಸಹಕಾರಿ ಸಂಘಗಳು ಮುತುವರ್ಜಿಯಿಂದ ನಡೆಸಿಕೊಂಡು ಹೋಗುತ್ತಾರೆ. ಇದರಿಂದ ಮಹಿಳಾ ಸಂಘಗಳಿಗೆ ಬ್ಯಾಂಕುಗಳು ಸಾಲ ಸೌಲಭ್ಯ ನೀಡುತ್ತವೆ. ಗ್ರಾಮೀಣ ಬ್ಯಾಂಕ್‍ಗಳಲ್ಲಿ ಮಹಿಳಾ ಸಂಘಗಳಿಂದ ಠೇವಣಿ ಇಡುತ್ತಿದ್ದಾರೆ. ಇದರಿಂದ ಬ್ಯಾಂಕ್‍ಗಳಲ್ಲಿ ಹಣ ಹೆಚ್ಚಾಗಿ ಸುಲಲಿತವಾಗಿ ಕಾರ್ಯನಿರ್ವಹಿಸಲು ಸಹಾಯವಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು

 

 

 

Leave a Reply

Your email address will not be published. Required fields are marked *