Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವಿಜೃಂಭಣೆಯ ನಾಯಕನಹಟ್ಟಿ ರಥೋತ್ಸವ: ಪವಾಡ ಪುರುಷಗೆ ಭಕ್ತಿ‌ ಭಾವ ಸಮರ್ಪಣೆ
ರಾಜ್ಯ

ವಿಜೃಂಭಣೆಯ ನಾಯಕನಹಟ್ಟಿ ರಥೋತ್ಸವ: ಪವಾಡ ಪುರುಷಗೆ ಭಕ್ತಿ‌ ಭಾವ ಸಮರ್ಪಣೆ

D KumaraswamyBy D KumaraswamyMarch 26, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವಿಜೃಂಭಣೆಯ ನಾಯಕನಹಟ್ಟಿ ರಥೋತ್ಸವ: ಕಾಯಕಯೋಗಿಗೆ ಭಕ್ತಿ‌ ಭಾವ ಸಮರ್ಪಣೆ

ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿ, ಬರದ ನಾಡಿನಲ್ಲಿ ಜಲ ಸಂರಕ್ಷಣೆಯ ಮಹತ್ವ ತಿಳಿಸಿದ ನಾಯಕನಹಟ್ಟಿಯ ಕಾಯಕಯೋಗಿ ಶ್ರೀಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ರಣ ಬಿಸಿಲ ನಡುವೆಯೂ, ಕುಂಡದಲ್ಲಿ ಒಣ ಕೊಬ್ಬರಿ ಜ್ವಲಿಸಿ, ಲಕ್ಷಾಂತರ ಭಕ್ತರು ಭಕ್ತಿ ಭಾವ ಸಮರ್ಪಿಸಿದರು.ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಗುರು ತಿಪ್ಪೇರುದ್ರಸ್ವಾಮಿಯ ಹೊರಮಠ ಹಾಗೂ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕರ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು. ನಂತರ 2:45 ಸುಮಾರಿಗೆ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಇರಿಸಿ, ರಥೋತ್ಸವದ ಬಳಿ ತಂದು ಸಜ್ಜುಗೊಳಿಸಲಾಯಿತು. ಮಧ್ಯಾಹ್ನ 3.34ರ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ಅಸಂಖ್ಯಾತ ಭಕ್ತರು ತಿಪ್ಪೇರುದ್ರಸ್ವಾಮಿ ರಥವನ್ನು ರಥ ತೇರುಬೀದಿಯಿಂದ ಹೊರಮಠದವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು. ರಥವು ತೇರು ಬೀದಿಯಿಂದ ಪಾದಗಟ್ಟೆಯವರೆಗೆ ಚಲಿಸುವಾಗ ಭಕ್ತರು ರಥಕ್ಕೆ ಬಾಳೆಹಣ್ಣು, ಕಾಳುಮೆಣಸು, ಧವನ, ಹೂವು, ಚೂರು ಬೆಲ್ಲವನ್ನು ಸಮರ್ಪಿಸಿ ತಮ್ಮ ಇಷ್ಠಾರ್ಥವನ್ನು ಈಡೇರಿಸುವಂತೆ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತಾ  ಶ್ರೀತಿಪ್ಪೇರುದ್ರಸ್ವಾಮಿಗೆ ಜಯವಾಗಲಿ, ‘ಕಾಯಕ ಯೋಗಿಗೆ ಜಯವಾಗಲಿ’ ತಿಪ್ಪೇರುದ್ರಸ್ವಾಮಿ ಮಹಾರಾಜ್ ಕಿ ಜೈ ಎನ್ನುವ ಜಯಘೋಷ ಕೂಗುತ್ತಾ ರಥದ ದೊಡ್ಡ ಗಾತ್ರದ ಮಿಣೆ ಹಗ್ಗ ಎಳೆದು ಧನ್ಯರಾದರು.ನಾಡಿನ ಸುಭೀಕ್ಷೆ ಹಾಗೂ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿದರು.

ರೂ 61 ಲಕ್ಷಕ್ಕೆ ಮುಕ್ತಿಭಾವುಟ ಹರಾಜು:

 

 

 

ರಥೋತ್ಸವಕ್ಕೂ ಮುನ್ನ ಶ್ರೀ.ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟದ ಹರಾಜು ನಡೆಸಲಾಯಿತು. ಸರ್ಕಾರಿ ಸವಾಲು ರೂ.1 ಕೋಟಿಯಿಂದ ಹರಾಜು ಕೂಗು ಪ್ರಾರಂಭವಾಯಿತು. ಆರಂಭದಲ್ಲಿ ಹೀರೆಹಳ್ಳಿ ಮಲ್ಲೇಶ್ ರೂ.5 ಲಕ್ಷಕ್ಕೆ ಮುಕ್ತಿ ಭಾವುಟದ ಹರಾಜು ಕೂಗಿದರು. ನಂತರದಲ್ಲಿ ತಿಮ್ಮನಹಳ್ಳಿ ರಾಜಣ್ಣ, ಚಿತ್ರದುರ್ಗ ಮಹಾಂತೇಶ್, ದಾವಣಗೆರೆ ವಜ್ರ ಮಹೇಶ್, ಹೊನ್ನಾಳಿ ನಾಗೇಶ್ ಅವರು ತುರುಸಿನ ಹರಾಜು ಕೂಗಿದರು.

ಕೊನೆಯಲ್ಲಿ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರೂ.61 ಲಕ್ಷಕ್ಕೆ ಹರಾಜು ಕೂಗಿ ಮುಕ್ತಿ ಬಾವುಟ ಪಡೆದುಕೊಂಡರು. ಕಳೆದ ವರ್ಷವೂ ರೂ.55 ಲಕ್ಷಕ್ಕೆ ಡಿ.ಸುಧಾಕರ್ ಮುಕ್ತಿ ಬಾವುಟ ಪಡೆದುಕೊಂಡಿದ್ದನ್ನು ಸ್ಮರಿಸಬಹುದು.
ಹರಾಜಿನ ನಂತರ ದೊಡ್ಡ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೇರಿದಂತೆ ಮತ್ತಿತರರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಎಸ್ಸೆಸ್ಸೆಲ್ಸಿ, ಪಿಯುಸಿ ಮಕ್ಕಳಿಗೆ ಪರೀಕ್ಷಾ ಟಿಪ್ಸ್ ಇಲ್ಲಿದೆ
Next Article ದಾಖಲೆ ಇಲ್ಲದ ರೂ.20.35 ಲಕ್ಷ ವಶ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.