Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮತದಾನ ಜಾಗೃತಿ : ವಿಕಲಚೇತನರ ಬೈಕ್ ರ‍್ಯಾಲಿಗೆ ಜಿ ಪಂ ಸಿಇಒ ಎಸ್.ಜೆ.ಸೋಮಶೇಖರ್ ಚಾಲನೆ
ರಾಜ್ಯ

ಮತದಾನ ಜಾಗೃತಿ : ವಿಕಲಚೇತನರ ಬೈಕ್ ರ‍್ಯಾಲಿಗೆ ಜಿ ಪಂ ಸಿಇಒ ಎಸ್.ಜೆ.ಸೋಮಶೇಖರ್ ಚಾಲನೆ

D KumaraswamyBy D KumaraswamyApril 6, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮತದಾನ ಜಾಗೃತಿ : ವಿಕಲಚೇತನರ ಬೈಕ್ ರ‍್ಯಾಲಿಗೆ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಚಾಲನೆ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನದ ಬಗ್ಗೆ ಅರಿವು ಮೂಡಿಸಲು ಗ್ರಾಮೀಣ, ನಗರ ಹಾಗೂ ತಾಲ್ಲೂಕು ವಿವಿದ್ಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನರಿಂದ ಏರ್ಪಡಿಸಿದ್ದ ವಿಕಲಚೇತನರ ಬೈಕ್ ರ‍್ಯಾಲಿ ಗಮನ ಸೆಳೆಯಿತು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಓನಕೆ ಓಬವ್ವ ವೃತ್ತದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಅಂಗವಾಗಿ ಮತದಾನ ಜಾಗೃತಿ ಸಂಬಂಧ ಹಮ್ಮಿಕೊಂಡಿದ್ದ ವಿಕಲಚೇತನರ ಬೈಕ್ ರ‍್ಯಾಲಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

 

 

ವಿಕಲಚೇತನರ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಹಾಗೂ ಅರ್ಹ ಮತದಾರರು ಯಾರೂ ಕೂಡ ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು ಎಂಬ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಅಂಗವಿಕಲ ಮತದಾರರು, ಯುವ ಮತದಾರರು, ಮಹಿಳಾ ಮತದಾರರು ಸೇರಿದಂತೆ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದ್ದು, ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಲಾಗುತ್ತಿದೆ ಎಂದರು.
ಇದೇ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚನಾವಣೆಯಲ್ಲಿ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಿ ಪ್ರಜಾಪ್ರಭುತ್ವ ಸದೃಢಗೊಳಿಸಬೇಕು ಎಂದರು.

ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಿಂದ ಆರಂಭವಾದ ವಿಕಲಚೇತನರ ಬೈಕ್ ರ್ಯಾಲಿಯು, ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಮಹಾವೀರ ವೃತ್ತ, ಎಸ್‍ಬಿಎಂ ವೃತ್ತ, ಗಾಂಧಿ ವೃತ್ತದ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತ, ಕನಕ ವೃತ್ತದವರೆಗೂ ಬೈಕ್ ರ್ಯಾಲಿ ಜಾಥಾ ಸಂಚರಿಸಿ, ನಂತರ ಪುನಃ ಒನಕೆ ವೃತ್ತ ತಲುಪಿತು. ನಂತರ ಜಿಲ್ಲಾಧಿಕಾರಿ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ಬಲಗೊಳಿಸಿ, ಕಾಡು ರಕ್ಷಣೆಗೆ ಬದ್ಧರಾಗೋಣ ಮತ ಹಾಕಲು ಸಿದ್ದರಾಗೋಣ, ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ. ಮತದಾನ ದೇಶವನ್ನು ರೂಪಿಸುತ್ತದೆ. ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿರಲಿ, ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ, ನನ್ನ ದೇಶ ನನ್ನ ಹಕ್ಕು, ನನ್ನ ಮತ ನನ್ನ ಹಕ್ಕು, ಮತದಾನಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೇ, ಜಾಗೃತ ಮತದಾರ ಪ್ರಜಾಪ್ರಭುತ್ವದ ನೇತಾರ, ನಮ್ಮ ಮತ ಅಮೂಲ್ಯವಾದದ್ದು ಬನ್ನಿ ಮತದಾನ ಕೇಂದ್ರಕ್ಕೆ, ಪ್ರಜಾಪ್ರಭುತ್ವದಲ್ಲಿ ಮತದಾನವೇ ಹಬ್ಬ, ಯೋಚಿಸಿ ಮತ ಹಾಕೋಣ ಅದರಲ್ಲೇ ದೇಶದ ಹಿತ ಕಾಯೋಣ, ಇದೇ ಏಪ್ರಿಲ್ 26ರಂದು ಶುಕ್ರವಾರ ತಪ್ಪದೇ ಎಲ್ಲರೂ ಮತದಾನ ಮಾಡಬೇಕು ಎಂದು ಸಂದೇಶ ಸಾರುವುದರ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ, ತಾಲ್ಲೂಕು ಪಂಚಾಯಿತಿ ಇಒ ಅನಂತ ರಾಜು, ಸಹಾಯಕ ನಿರ್ದೇಶಕ ಯರ್ರಿಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ, ಜಿಲ್ಲಾ ಸ್ವೀಪ್ ಸಮಿತಿ ಸಂಯೋಜಕಿ ಸುಷ್ಮಾರಾಣಿ, ಎಂ.ಆರ್.ಡಬ್ಯೂ ಎನ್.ಮೈಲಾರಪ್ಪ ಸೇರಿದಂತೆ ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಹಾಗೂ ವಿಕಲಚೇತನರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಮದುವೆ ಮನೆ ಬಾಡೂಟ ಸೇವಿಸಿ 70 ಜನ ಅಸ್ವಸ್ಥ
Next Article ಮಹಿಳಾ ಸಬಲೀಕರಣಕ್ಕಾಗಿ ಮತ ಚಲಾಯಿಸಿ: ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಕರೆ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.