Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಜೀವನದ ಅನುಭವ ಕಂಡಾಗ ನಿಜವಾದ ವಿದ್ಯಾವಂತರಾಗುತ್ತೇವೆ
ಜಿಲ್ಲಾ ಸುದ್ದಿ

ಜೀವನದ ಅನುಭವ ಕಂಡಾಗ ನಿಜವಾದ ವಿದ್ಯಾವಂತರಾಗುತ್ತೇವೆ

D KumaraswamyBy D KumaraswamyJanuary 27, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

 

 

ನಗರದ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಇಂದು ಗ್ರಾಜ್ಯೂಯೇಷನ್ ಡೇ-2023 ಕಾರ್ಯಕ್ರಮವನ್ನು ಶ್ರೀಮರುಘಾಮಠದ ಅನುಭವಮಂಟಪದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಆಗಮಿಸಿದ್ದ ಇಸ್ರೋದ ಯು.ಆರ್ ರಾವ್ ಸ್ಯಾಟಲೈಟ್ ಸೆಂಟರ್‍ನ ಗ್ರೂಪ್ ಡೈರೆಕ್ಟರ್ ಶ್ರೀ ರಮೇಶ್ ವಿ ನಾಯ್ಡು ಮಾತನಾಡಿ, ನಾವುಗಳು ಜೀವನದ ಪ್ರತಿ ಹಂತದಲ್ಲೂ ಕಲಿಯುತ್ತಾ ಬರುತ್ತೇವೆ. ಜೀವನವಿರುವವರೆಗೂ ಕಲಿಕೆ ಇದ್ದೇ ಇರುತ್ತದೆ, ಕಲಿಕೆ ನಿರಂತರ. ನಮ್ಮ ಪ್ರತಿ ಚಿಕ್ಕ-ಪುಟ್ಟ ಅನುಭವಗಳು ನಮಗೆ ಪಾಠವನ್ನು ಹೇಳಿಕೊಡುತ್ತವೆ. ನಮ್ಮ ಸ್ವಂತ ಮತ್ತು ಬೇರೆಯವರ ಅನುಭವಗಳಿಂದ ಕಲಿಯಬೇಕು. ಓದಿದ ಮಾತ್ರಕ್ಕೆ ವಿದ್ಯಾವಂತರಾಗುವುದಿಲ್ಲ. ಜೀವನದ ಅನುಭವ ಕಂಡಾಗ ನಿಜವಾದ ವಿದ್ಯಾವಂತರಾಗುತ್ತೇವೆ. ಸಣ್ಣ ಸಣ್ಣ ವಿಚಾರಗಳು ನಮ್ಮನ್ನು ಪ್ರೋತ್ಸಾಹಿಸುತ್ತವೆ. ನಾವು ನಮ್ಮ ಗುರಿಯ ಕಡೆ ನಡೆಯುವಾಗ ಅದಕ್ಕೆ ಪ್ರೋತ್ಸಾಹಿಸುವುವವರು ಇರುವಂತೆ ಕಾಲೆಳೆಯುವವರು ಇರುತ್ತಾರೆ. ನಾವು ಪ್ರೋತ್ಸಾಹದ ಕಡೆ ಮಾತ್ರ ಗಮನ ಹರಿಸಿ ಯಶಸ್ಸನ್ನು ಸಾಧಿಸಬೇಕು. ನಾವು ಬದುಕಿನ ಪ್ರತಿ ಕ್ಷಣವನ್ನು ಸಂತೋಷದಿಂದ ಕಳೆಯಬೇಕು. ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದಬೇಕು. ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ಕುರಿತು ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಈ ಹಿಂದೆ ನಾವು ಏನು ಸಾಧಿಸಿದ್ದೇವೆ ಎನ್ನುವುದಕ್ಕಿಂತ ಇಂದು ನಾವು ಏನಾಗಿದ್ದೇವೆ ಎಂಬುದರ ಕಡೆಗೆ ಗಮನ ಹರಿಸಬೇಕು. ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಾಧಿಕಾರಿಗಳಾದ ಶ್ರೀ ವಿ ಎಸ್ ವಸ್ತ್ರದ್ ಮಾತನಾಡಿ, ವಿದ್ಯಾರ್ಥಿಗಳಿಗೆ ತರಬೇತಿ ತುಂಬ ಮುಖ್ಯ ನಾವು ಹಿಂದೆ ಅಲೆಕ್ಸಾಂಡರ್‍ನ ಚಿಕ್ಕ ಸೈನ್ಯದ ಮುಂದೆ ಮೊದಲು ಸೋಲಲು ಮುಖ್ಯ ಕಾರಣ ತರಬೇತಿ ಕೊರತೆ. ಹೆಚ್ಚು ತರಬೇತಿ ಪಡೆದವನು ಸಮಸ್ಯೆಗಳನ್ನು ನಿರ್ಭೀತವಾಗಿ ನಿಭಾಯಿಸಬಲ್ಲ. ಹೀಗಾಗಿ ವಿದ್ಯಾರ್ಥಿಗಳು ತರಬೇತಿಯ ಕಡೆ ಗಮನ ಹರಿಸಬೇಕು. ಸವಾಲುಗಳನ್ನು ಎದುರಿಸಬೇಕು. ವಿದ್ಯಾರ್ಥಿ-ಶಿಕ್ಷಕರದ್ದು ಅವಿನಾಭಾವ ಸಂಬಂಧ. ಅದು ನಿರಂತರವಾದ ಸಂಬಂಧ. ಗೋಲ್‍ಗುಂಬಜ್, ತಾಜ್‍ಮಹಲ್, ಹಂಪಿ ಇವೆಲ್ಲವೂ ಅಂದಿನ ಕಾಲದ ತಂತ್ರಜ್ಞರ ಮತ್ತು ವಾಸ್ತುಶಿಲ್ಪಿಗಳ ಮಹತ್ತರ ಸಾಧನೆಗಳಾಗಿವೆ. ಸಮಾಜಕ್ಕೆ ಇಂಜಿನಿಯರುಗಳ ಕೊಡುಗೆ ಅಪಾರ. ಅಬ್ಬುಲ್ ಕಲಾಂರಂತಹ ಮಹನೀಯರು ಸಮಾಜದ ಏಳಿಗೆಗೆ ಮನುಕುಲದ ಉದ್ಧಾರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ನೀವುಗಳು ನಿಮ್ಮ ಭವಿಷ್ಯ ರೂಪಿಸಿರುವುದರ ಜೊತೆಗೆ ಸಮಾಜಕ್ಕೆ ಒಳಿತಾಗುವ ಕೆಲಸಗಳನ್ನು ಮಾಡಬೇಕು. ಮುಂದಿನ ಎರಡು ತಿಂಗಳಿನಲ್ಲಿ ಚುನಾವಣೆ ಬರುವ ಹಿನ್ನಲೆಯಲ್ಲಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಕುರಿತು ಖಾತ್ರಿ ಪಡಿಸಿಕೊಳ್ಳಬೇಕು. ನಿಮ್ಮ ಮತವನ್ನು ತಪ್ಪದೇ ಚಲಾಯಿಸಬೇಕು ಎಂದು ನುಡಿದರು.
ಪ್ರಾಂಶುಪಾಲರಾದ ಡಾ.ಭರತ್ ಪಿ.ಬಿ. ಮಾತನಾಡಿ, ವಿದ್ಯಾರ್ಥಿಗಳು ಕಳೆದೆರಡು ವರ್ಷಗಳಲ್ಲಿ ಕೋವಿಡ್-19 ಸವಾಲುಗಳನ್ನು ಮೆಟ್ಟಿ ನಿಂತು ತಮ್ಮ ಪದವಿ ಶಿಕ್ಷಣ ಪೂರೈಸಿದ್ದಾರೆ. ಇದು ಸಂತಸದ ವಿಚಾರ. ಕೋವಿಡ್ ಸಮಯದ ಅನುಭವಗಳು ನಿಮ್ಮ ಮುಂದಿನ ಸಾಧನೆಗೆ ಸಹಕಾರಿಯಾಗಲಿ. ನಮ್ಮ ಆರ್ಥಿಕ ವ್ಯವಸ್ಥೆಯು ಸ್ವಾತಂತ್ಯ್ರ ನಂತರದಲ್ಲಿ ಸದೃಡವಾಗಿ ಬೆಳೆಯುತ್ತಾ ಬಂದಿದೆ. ನಮ್ಮ ಆರ್ಥಿಕ ವ್ಯವಸ್ಥೆಯಲ್ಲಿ ಕೃಷಿ ಕ್ಷೇತ್ರದ್ದೆ ಹೆಚ್ಚಿನ ಪಾಲು. ಇಂದಿನ ದಿನಗಳಲ್ಲಿ ತಾಂತ್ರಿಕ ಕ್ಷೇತ್ರ ಆರ್ಥಿಕ ವ್ಯವಸ್ಥೆಗೆ ಹೆಚ್ಚಿನ ಪಾಲು ನೀಡುತ್ತಾ ಬಂದಿದೆ. ಮುಂದಿನ ಹತ್ತು ವರ್ಷಗಳಲ್ಲಿ ನಮ್ಮ ಜಿಡಿಪಿ ಗಣನೀಯವಾಗಿ ಏರಿಕೆಯಾಗುವ ಆಶಾದಾಯಕವಿದೆ. ಆರ್ಥಿಕ ವ್ಯವಸ್ಥೆಯು ಡಿಜಿಲೀಕರಣವಾಗಲಿದೆ. ತಂತ್ರಜ್ಞಾನ ವ್ಯವಸ್ಥೆಯು ಅಭಿವೃದ್ಧಿಯಾಗಲಿದೆ. ಇಂತಹ ಸಂದರ್ಭದಲ್ಲಿ ನಾವುಗಳು ಅವಕಾಶಗಳನ್ನು ಬಳಸಿಕೊಂಡು ಮುಂದುವರೆಯಬೇಕು. ಸರ್ಕಾರದ ವಿವಿಧ ಯೋಜನೆಗಳಾದ ಮುದ್ರಾ. ಸ್ವಯಂ ಇನ್ನಿತರ ಯೋಜನೆಗಳ ಅನುಕೂಲ ಪಡೆದು ಸ್ವಉದ್ಯೋಗ ಪ್ರಾರಂಭಿಸಿ ಉದ್ಯಮಿಗಳಾಗಬೇಕು ಎಂದು ನುಡಿದರು.
ಸಮಾರಂಭದಲ್ಲಿ ಡಾ.ಬಿ.ಜಿ.ಕುಮಾರಸ್ವಾಮಿ, ಡಾ. ಎನ್ ಜಗನ್ನಾಥ್, ಪ್ರೊ.ಪೋರಾಳ್ ನಾಗರಾಜ್, ಡಾ.ಸಿದ್ಧೇಶ್ ಕೆ.ಬಿ., ಡಾ.ಶ್ರೀಶೈಲ ಜೆ.ಎಂ., ಡಾ.ಲೋಕೇಶ್ ಹೆಚ್. ಜೆ. ಡಾ.ನಿರಂಜನ್ ಈ, ಪ್ರೊ.ಶಶಿಧರ ಎ.ಪಿ., ಸಂಚಾಲಕ ಪ್ರೊ.ಲವಕುಮಾರ್ ಟಿ.ಬಿ. ಉಪಸ್ಥಿತರಿದ್ದರು.
ಪ್ರೊ.ಪೋರಾಳ್ ನಾಗರಾಜ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರೊ.ಅನುಷಾ ವಿ ನಿರೂಪಿಸಿ, ಪ್ರೊ.ಚೇತನ್ ಎಸ್ ಸ್ವಾಗತಿಸಿ, ಅನನ್ಯಾ ಮೋನಿಕಾ ವಿ ಕೆ ಪ್ರಾರ್ಥಿಸಿ, ಪ್ರೊ.ಅಪೂರ್ವ ಜಿ.ಓ. ವಂದಿಸಿದರು.
ಸಮಾರಂಭದಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪದಕ ನೀಡಿ ಗೌರವಿಸಲಾಯಿತು. ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪಡೆದ 260 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

Share. Facebook Twitter Pinterest LinkedIn Tumblr WhatsApp Email
Previous Articleಚಿನ್ನದ ಪದಕ ಮುಡಿಗೇರಿಸಿಕೊಂಡ ತನುಷ್
Next Article ನಮಗೆ ನಾವು ಬದುಕಿದರೆ ಆಸೆಗಳು ನಮಗೆ ಸೀಮಿತವಾಗುತ್ತದೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.