Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ
ರಾಜ್ಯ

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ

D KumaraswamyBy D KumaraswamyDecember 3, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚುನಾವಣಾ ಫಲಿತಾಂಶ: ಸಿಎಂ  ಸಿದ್ದರಾಮಯ್ಯ ರಿಯಾಕ್ಷನ್

ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ.

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ.

ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮ ದ ದೊಡ್ಡ ಪಾತ್ರ ಇದೆ.

 

 

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ . ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು.

ಬಿಜೆಪಿ ಬಿಆರ್ ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ.

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ

ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು‌ ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ.

ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಹಿರಿಯ ನಟಿ ಲೀಲಾವತಿ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ
Next Article ಡಿ. 6 ರಂದು ಭೀಮ ಜ್ಯೋತಿ ನಮನ ಕಾರ್ಯಕ್ರಮ ಬನ್ನಿ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.