ಸರ್ಕಾರ ತನ್ನ ಬಳಿ ಹಣವಿಲ್ಲ ಎಂದರೆ ಇದ್ದ ಹಣ ಎಲ್ಲಿ ಹೋಯ್ತು?

ರಾಜಕೀಯ ರಾಜ್ಯ

ಬೆಂಗಳೂರು,(ನ.02) : ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎಂದ ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಸಹ ಕೊರೊನಾ ಸಮಯದಲ್ಲಿ ನಿಭಾಯಿಸಲು ಸರ್ಕಾರದ ಬಳಿ ಹಣವಿಲ್ಲ ಎಂಬುದಾಗಿ ಹೇಳಿದ್ದರು. ಜೊತೆಗೆ ಹಲವು ಸಚಿವರು ಕೂಡ ಈ ಮಾತನ್ನು ಬಹಿರಂಗವಾಗಿಯೇ ಹಲವು ಬಾರಿ ಹೇಳಿದ್ದಾರೆ. ಇದಕ್ಕೆ ಕೋಪಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವಿಟ್ಟರ್ ನಲ್ಲಿ ಉತ್ತರಕೊಡಿ ಬಿಎಸ್ವೈ ಎಂಬ ಅಭಿಯಾನ ಶುರು ಮಾಡಿದ್ದಾರೆ.

Where money has gone chitradurga

 

 

 

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ?” ಎಂದು ಪ್ರಶ್ನಿಸಿದ್ದಾರೆ.

Where money has gone chitradurga

ಮತ್ತೊಂದು ಟ್ವೀಟ್ ನಲ್ಲಿ ಆಗಸ್ಟ್ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ ಎಂದಿದ್ದಾರೆ.
ಉತ್ತರಕೊಡಿ_ಬಿಎಸ್ವೈ” ಎಂದು ಕೆಣಕಿರುವ ಸಿದ್ದರಾಮಯ್ಯ, ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ರೂ.35,000 ಕೋಟಿ, ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ?, “ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Leave a Reply

Your email address will not be published. Required fields are marked *