Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರ ಸಂಖ್ಯೆ ಹೆಚ್ಚಿಸಲು ನಮ್ಮ ಅಭ್ಯರ್ಥಿ ಗೆಲ್ಲಿಸಿ
ರಾಜ್ಯ

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರ ಸಂಖ್ಯೆ ಹೆಚ್ಚಿಸಲು ನಮ್ಮ ಅಭ್ಯರ್ಥಿ ಗೆಲ್ಲಿಸಿ

D KumaraswamyBy D KumaraswamyMay 17, 2024Updated:May 17, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್ ಪಕ್ಷದ ಬಲ ಇಲ್ಲ ದ್ದರಿಂದ ವಿಧಾನಸಭೆಯಿಂದ ಇಲ್ಲಿಗೆ ಕಳುಹಿಸಿದ, ಎಲ್ಲಾ ಮಸೂದೆಗಳು ವಾಪಾಸ್ಸಾಗುತ್ತಿವೆ ಈ ಹಿನ್ನಲೆಯಲ್ಲಿ ಪರಿಷತ್‍ನಲ್ಲಿ ನಮ್ಮ ಬಲ ಹೆಚ್ಚಾಗಬೇಕಾದರೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕಾಗಿದೆ, ಪಕ್ಷದ ಮುಖಂಡರು, ಕಾರ್ಯಕರ್ತರು ಚುನಾಯಿತ ಪ್ರತಿನಿಧಿಗಳು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಕರೆ ನೀಡಿದರು.
ಚಿತ್ರದುರ್ಗ ನಗರದ ಡಿಸಿಸಿ ಕಚೇರಿಯಲ್ಲಿಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಈ ಹಿಂದೆ ಕಾಂಗ್ರೆಸ್ ಪಕ್ಷ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಸಾರಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ,ಈಗ ನಡೆಯುವ ಆರು ಕ್ಷೇತ್ರಗಳಲ್ಲಿ ಶತಾಯ ಗತಾಯ ಗೆಲುವು ಸಾಧಿಸಲೇಬೇಕಾಗಿದೆ. ಇದಕ್ಕಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಯೊಬ್ಬ ಮತದಾರರನ್ನು ಭೇಟಿ ಯಾಗುವ ಮೂಲಕ, ಮತಯಾಚನೆ ಮಾಡಬೇಕಿದೆ ಎಂದರು. ವಿಧಾನಸಭೆ ಚುನಾವಣೆ ನಂತರ ಲೋಕಸಭಾ ಚುನಾವಣೆ ಮಾಡಲಾಗಿದೆ. ಈಗ ಪರಿಷತ್ ಚುನಾವಣೆ ಬಂದಿದೆ ವಿಧಾನಸಭೆಯಲ್ಲಿ ಯಾವ ರೀತಿ ಮತದಾರರು ನಮ್ಮ ಪಕ್ಷದ ಕೈ ಹಿಡಿದಿದ್ದಾರೂ, ಅದೇ ರೀತಿ ಈ ಚುನಾವಣೆಯಲ್ಲಿಯೂ ಮತದಾರರಿಂದ ನಮ್ಮ ಪಕ್ಷದ ಅಭ್ಯರ್ಥಿಗೆ ಮತವನ್ನು ಹಾಕಿಸಬೇಕಿಸದೆ. ಸಾಧ್ಯವಾದಷ್ಟು ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಬೇಕಿದೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸಿದರೆ, ಪರಿಷತ್‍ನಲ್ಲಿ ನಮ್ಮ ಬಲ ಹೆಚ್ಚಾಗುತ್ತದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ, ಡಿ.ಸುಧಾಕರ್ ಮಾತನಾಡಿ, ಪಕ್ಷದ ಮುಖಂಡರು ಅವರ ಗ್ರಾಮದಲ್ಲಿನ ಶಿಕ್ಷಕ ಮತದಾರರನ್ನು ಕಂಡು ಮನವಿ ಮಾಡುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ಹಾಕಿಸಬೇಕಿದೆ. ಇದರೊಂದಿಗೆ ಮೊದಲನೇ ಪ್ರಾಶಸ್ತ್ಯವನ್ನು ನೀಡುವಂತೆ ಕೇಳಬೇಕಿದೆ. ತಾಲ್ಲೂಕುವಾರು ಸಭೆಯನ್ನು ಕರೆಯುವುದರ ಮೂಲಕ ಮತದಾರರಿಗೆ ಮನವರಿಕೆಯನ್ನು ಮಾಡಬೇಕಿದೆ. ಈ ಚುನಾವಣೆಯ ಗೆಲುವಿನಿಂದ ಪರಿಷತ್‍ನಲ್ಲಿ ನಮ್ಮ ಪಕ್ಷದ ಬಲವನ್ನು ಹೆಚ್ಚಿಸಬೇಕಿದೆ. ಈ ಸ್ಪರ್ಧೆ ಮಾಡಿರುವ, ಆರು ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಬೇಕಿದೆ ಎಂದರು.
ಮಾಜಿ ಸಚಿವ ಹೆಚ್. ಅಂಜನೇಯ ಮಾತನಾಡಿ, 8ನೇ ತರಗತಿಯಿಂದ ಮೇಲ್ಪಟ್ಟ ಎಲ್ಲಾ ಶಿಕ್ಷಕರು ಸಹಾ ಇದಕ್ಕೆ ಮತದಾರರಾಗಿದ್ದಾರೆ. ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸುವುದರ ಮೂಲಕ 10 ಜನ ಮತದಾರರಿಗೆ ಒಬ್ಬರಂತೆ ನೇಮಕ ಮಾಡಿ, ಅವರನ್ನು ಭೇಟಿ ಮಾಡಿ ಮನವೊಲಿಸಿ ನಮ್ಮ ಪಕ್ಷಕ್ಕೆ ಮತ ಹಾಕುವಂತೆ ಮನವಿ ಮಾಡಬೇಕಿದೆ. ಈಗಾಗಲೇ ರಾಜ್ಯದಲ್ಲಿನ ನಮ್ಮ ಸರ್ಕಾರ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಿದೆ. ಮುಂದಿನ ದಿನದಲ್ಲಿ ಇನ್ನೂ ಹಲವಾರು ಸೌಲಭ್ಯಗಳನ್ನು ನೀಡಲಿದೆ. ಇದರ ಬಗ್ಗೆ ಅವರಿಗೆ ಅರಿವು ಮೂಡಿಸಬೇಕಿದೆ, ಪರಿಷತ್‍ನಲ್ಲಿ ನಮ್ಮ ಬಲ ಕಡಿಮೆ ಇದೆ ಇದರಲ್ಲಿ ಗೆಲ್ಲುವ ಮೂಲಕ ಬಲ ಹೆಚ್ಚಿಸಬೇಕಿದೆ ಎಂದರು.ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತಾಡಿ, ನಮಗೆ ನಮ್ಮ ಪಕ್ಷ ಮತ್ತು ಕಾರ್ಯಕರ್ತರು ಉತ್ತಮವಾದ ಪಡೆಯಾಗಿದ್ದಾರೆ. ನನ್ನ ಚುನಾವಣೆಯನ್ನು ಯಾವ ರೀತಿ ಉತ್ತಮವಾಗಿ ಮಾಡಲಾಗಿದೆಯೋ ಅದೇ ರೀತಿ ಈ ಚುನಾವಣೆಯನ್ನು ಎಲ್ಲರು ಸಹಕಾರದಿಂದ ಮಾಡಬೇಕಿದೆ ಎಂದರು.
ಆಗ್ನೇಯ ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ನಮ್ಮ ಪಕ್ಷ ಶಿಕ್ಷಕರ ಪರವಾಗಿದೆ. ಅವರಿಗಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಶಿಕ್ಷಕರ ಹಲವಾರು ಸಮಸ್ಯೆಗಳಿವೆ ಅದನ್ನು ಮುಂದಿನ ದಿನಮಾನದಲ್ಲಿ ಪರಿಹಾರ ಮಾಡಲಾಗುವುದು. ಈಗ ಸರ್ಕಾರ ಸರ್ಕಾರಿ ನೌಕರರಿಗೆ 7ನೇ ವೇತನವನ್ನು ನೀಡಲು ಮುಂದಾಗಿದೆ ಆದರೆ ನೀತಿ ಸಂಹಿತೆ ಇರುವುದರಿಂದ ತಡವಾಗಿದೆ ಇದು ಮುಗಿದ ನಂತರ ಸರ್ಕಾರ ಪ್ರಕಟ ಮಾಡಲಿದೆ. ಇದರೊಂದಿಗೆ ಶಿಕ್ಷಕರ ನೇಮಕಾತಿ ನಡೆಯಲಿದೆ. ಕಾಂಗ್ರೆಸ್ ಸರ್ಕಾರ ಶಿಕ್ಷಕರಿಗಾಗಿ ಇದೇ ಧೈರ್ಯದಿಂದ ಮತವನ್ನು ಕೇಳುವಂತೆ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ರಘುಮೂರ್ತಿ, ಡಿಸಿಸಿ ಅಧ್ಯಕ್ಷ ತಾಜ್‍ಪೀರ್, ಮುರಳಿಧರ ಹಾಲಪ್ಪ, ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ನೇರ್ಲಗುಂಟೆ ರಾಮಪ್ಪ, ಯೋಗೀಶ್, ಮಾತನಾಡಿದರು.
ಈ ಪೂರ್ವಬಾವಿ ಸಭೆಯಲ್ಲಿ ಕಾರ್ಯಾದ್ಯಕ್ಷರಾದ ಹಾಲಸ್ವಾಮಿ, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಜಿ.ಎಸ್.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ  ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನರಸಿಂಹರಾಜು, ಎನ್.ಡಿ,ಕುಮಾರ್, ಬಿ.ಟಿ.ಜಗದೀಶ್, ಸಂಪತ್ ಕುಮಾರ್, ಮೈಲಾರಪ್ಪ, ಕುಮಾರಗೌಡ, ಲಕ್ಷ್ಮೀಕಾಂತ ಗೀತಾ ನಂದಿನಿ ಗೌಡ, ಉಲ್ಲಾಸ್, ಚೋಟು ಮುದಾಸಿರ್ ಪ್ರಕಾಶ್ ರಾಮನಾಯ್ಕ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಐದು ಅಸ್ತಿಪಂಜಿರಗಳ FSLವರದಿ ಬಹಿರಂಗ:ವರದಿಯಲ್ಲಿ ಏನಿದೆ
Next Article ಗ್ಯಾರಂಟಿ ಯೋಜನೆಯಿಂದ ಬಡವರ ಮನೆಗಳಲ್ಲಿ ಜ್ಯೋತಿ ಬೆಳಗುತ್ತಿದೆ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.