ತುರುವನೂರು ಹೋಬಳಿ ಯ ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದಾಪುರ,ಮುದ್ದಾಪುರ ಹೊಸಹಟ್ಟಿ, ಮುದ್ದಾಪುರ ಮ್ಯಾಸರಹಟ್ಟಿ,ಸೂರೇನಹಳ್ಳಿ, ಗೊಲ್ಲರಹಟ್ಟಿ, ಸಿದ್ದವನದುರ್ಗ, ಚಿಕ್ಕಬಿ ಗೆರೆ, ಹಿರೇ ಕಬ್ಬಿಗೆರೆ, ಗೊಲ್ಲರಟ್ಟಿಗಳಯುವಕರು ಹಾಗೂ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಗಳನ್ನು ಆಧರಿಸಿ ಮತ್ತು ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕೃತ ವಾಗಿ ಸೇರ್ಪಡೆಗೊಂಡರು. ಇದೇ ಸಮಯದಲ್ಲಿ ಮಾತನಾಡಿದ ಶಾಸಕ ರಘು ಮೂರ್ತಿ ಅವರು ಮಾತನಾಡಿ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ದಿಯನ್ನು ಮೆಚ್ಚಿ ಯುವಕರು ಪಕ್ಷವನ್ನು ಸೇರುತ್ತಿದ್ದಾರೆ ಎಂದು ಹೇಳಿದರು.ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ರವರು ತುರುವನೂರು ಹೋಬಳಿಯ ಮುದ್ದಾಪುರ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಳಾದ ರಾಮಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾಬುರೆಡ್ಡಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಸದಸ್ಯರುಗಳು, ಮುಖಂಡರುಗಳಾದ ತಿಮ್ಮರಾಜು, ರಾಜಪ್ಪ, ಮುಖಂಡರು, ಕಾರ್ಯಕರ್ತರು ಮತ್ತು ಯುವಕರು ಉಪಸ್ಥಿತರಿದ್ದರು.





