ಜನವರಿ 2024ರಲ್ಲಿ ಯುವನಿಧಿ  ಜಾರಿಗೆ : ಸಿಎಂ ಸಿದ್ದರಾಮಯ್ಯ

ದೇಶ

*ಜನವರಿ 2024ರಲ್ಲಿ ಯುವನಿಧಿ  ಜಾರಿಗೆ : ಸಿಎಂ ಸಿದ್ದರಾಮಯ್ಯ*

ಯುವನಿಧಿ ಯೋಜನೆಯಡಿ ರಾಜ್ಯದ ನಿರುದ್ಯೋಗಿ ಯುವಜನರನ್ನು ಸಶಕ್ತಗೊಳಿಸುವ ಉದ್ದೇಶದಿಂದ  ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ತೆಲಾಂಗಣದ ಚುನಾವಣಾ ಪ್ರಚಾರಕ್ಕೆ ತೆರಳಿ ಅಲ್ಲಿ‌ ಮಾತಾಡಿದರು. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ  2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುವುದು. ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ. ಈ ಯೋಜನೆಯನ್ನು ಜನವರಿ 2024 ರಿಂದ ಜಾರಿಗೆ ತರಲಾಗುವುದು. ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೇ ಜಾರಿಗೊಳಿಸಿದೆ. ಈ ವರ್ಷ ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಸುಮಾರು 38 ಸಾವಿರ ಕೋಟಿಗಳು ವೆಚ್ಚವಾಗುತ್ತಿದೆ ಎಂದರು.

*ಬಿಜೆಪಿ ತನ್ನ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿಲ್ಲ*

 

 

 

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದ್ದೇವೆ. ಈ ಹಿಂದೆಯೂ ಕಾಂಗ್ರೆಸ್ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಆದರೆ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಸಾಕಷ್ಟು ಭರವಸೆಗಳನ್ನು ನೀಡಿದ್ದರೂ , 2019-2023ರ ತಮ್ಮ ಅವಧಿಯಲ್ಲಿ ಕೇವಲ ಶೇ. 10 ರಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ. ಪ್ರಧಾನಿ ಮೋದಿಯವರು ಬಿಡುಗಡೆಗೊಳಿಸಿದ್ದ ಬಿಜೆಪಿ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸದೇ ಇರುವುದು ಸತ್ಯ. ಆದ್ದರಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮಾಡುತ್ತಿರುವ ಆರೋಪಗಳು ಚುನಾವಣಾ ಪ್ರೇರಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದರು.

*ರಾಜ್ಯದ ಆರ್ಥಿಕತೆ ಸದೃಢವಾಗಿದೆ:*

ಪ್ರಧಾನಿ ಮೋದಿಯವರು ರಾಜಸ್ಥಾನದ ತಮ್ಮ ಚುನಾವಣಾ ಭಾಷಣದಲ್ಲಿ ಕರ್ನಾಟಕ ಗ್ಯಾಟಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದಿಲ್ಲ. ಹಾಗೂ ರಾಜ್ಯದ ಆರ್ಥಿಕತೆ ಕುಂಠಿತವಾಗುತ್ತದೆ ಎಂದು ಟೀಕಿಸಿದ್ದರು. ಅವರ ಈ ಮಾತು ಸತ್ಯಕ್ಕೆ ದೂರವಾಗಿದ್ದು, ರಾಜ್ಯದ ಆರ್ಥಿಕತೆ ಸದೃಢವಾಗಿದ್ದು, ಅನುದಾನಕ್ಕೆ ಕೊರತೆ ಇಲ್ಲ. ಆದ್ದರಿಂದ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಖಂಡಿತ ಜಯ ಸಾಧಿಸಲಿದ್ದು, ಅಧಿಕಾರಕ್ಕೆ ಬರಲಿದೆ. ತೆಲಂಗಾಣದಲ್ಲಿ ಪಕ್ಷ ನೀಡಿರುವ ಆರು ಗ್ಯಾರಂಟಿಗಳನ್ನು ಕಾಂಗ್ರೆಸ್ ಈಡೇರಿಸಲಿದ್ದು, ಇದರ ಬಗ್ಗೆ ತೆಲಂಗಾಣ ಜನರಿಗೆ ಯಾವುದೇ ಸಂಶಯ ಬೇಡ ಎಂದರು.

Leave a Reply

Your email address will not be published. Required fields are marked *