Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಜಿಪಂ ಸಿಇಒ  ಎಸ್ ಜೆ ಸೋಮಶೇಖರ್  ಚಾಲನೆ
ರಾಜ್ಯ

ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಜಿಪಂ ಸಿಇಒ  ಎಸ್ ಜೆ ಸೋಮಶೇಖರ್  ಚಾಲನೆ

D KumaraswamyBy D KumaraswamyNovember 19, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಜಿಪಂ ಸಿಇಒ  ಎಸ್ ಜೆ ಸೋಮಶೇಖರ್  ಚಾಲನೆ

 

 

ಚಿತ್ರದುರ್ಗ: ನ.19 ರಿಂದ ಡಿ.20ರ ವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ ಹಾಗೂ ಬಹಿರ್ದೇಸೆ ಮುಕ್ತ ವಾತಾವರಣ ಸೃಷ್ಠಿಸಿ, ನಿರಂತರವಾಗಿ ಶೌಚಾಲಯಗಳನ್ನು ಬಳಸಲು ಪ್ರೇರೇಪಿಸಲು ಒತ್ತು ನೀಡುವುದಾಗಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.
ನಗರದ ಜಿ.ಪಂ.ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ, ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂದದ ಶೌಚಾಲಯ-ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಆಂದೋಲನ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಜಿಲ್ಲೆಯಲ್ಲಿ ಬಳಕೆಯಲ್ಲಿರದ ಸಮುದಾಯ ಶೌಚಾಲಯಗಳನ್ನು ಗುರುತಿಸಿ, ದುರಸ್ಥಿಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತ ಮಾಡಲಾಗುವುದು. ಶೌಚಾಲಯಗಳ ಕೊರತೆ ಇರುವ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಲಾಗುವುದು. ಸ್ವಚ್ಛತೆ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರಿಗೆ ಆರೋಗ್ಯ ಶಿಬಿರ ಆಯೋಜಿಸಿ, ಸುರಕ್ಷಾ ಪರಿಕರಗಳನ್ನು ವಿತರಿಸುವುದರ ಜೊತೆಗೆ ಗೌರವಿಸಲಾಗುವುದು ಎಂದು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ತಿಳಿಸಿದರು.
ಈಗಾಗಲೇ ಜಿಲ್ಲೆಯನ್ನು ಬಯಲು ಶೌಚಮುಕ್ತ ಪ್ರದೇಶ ಎಂದು ಘೋಷಿಸಲಾಗಿದೆ. ಪ್ರಸಕ್ತ ವರ್ಷ 16 ಸಾವಿರ ಶೌಚಾಲಯಗಳ ನಿರ್ಮಾಣದ ಗುರಿ ನಿಗಧಿಪಡಿಸಿಕೊಳ್ಳಲಾಗಿದೆ. ಹಳ್ಳಿಗಳಲ್ಲಿ ಶೌಚಾಲಯ ಹೊಂದಿರದವರು ಶೌಚಾಲಯ ಕಟ್ಟಿಸಿಕೊಳ್ಳಲು ಮುಂದೆ ಬಂದರೆ ಅವರಿಗೆ ಸರ್ಕಾರದಿಂದ ಸಹಾಯಧನ ನೀಡಲಾಗುವುದು. ಸಾರ್ವಜನಿಕರು ಸಿಟಿಜನ್ ಪೋರ್ಟ್ಲ್ ಅರ್ಜಿಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು, ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ನೇರವಾಗಿ ಭೇಟಿ ನೀಡಬಹುದು. ಆಯ್ಕೆಯಾದ ಎಸ್.ಸಿ ಹಾಗೂ ಎಸ್.ಟಿ ಫಲಾನುಭವಿಗಳಿಗೆ ರೂ.20,000 ಇತರೆ ಫಲಾನುಭವಿಗಳಿಗೆ ರೂ.12,000 ಸಹಾಯಧನ ನೀಡುವುದಾಗಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಮಾಹಿತಿ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಮಹಿಳೆಯರ ಶೌಚಾಲಯವನ್ನು ಉದ್ಘಾಟಿಸಲಾಯಿತು. ಡಿ.ಎಸ್.ಹಳ್ಳಿ ಗ್ರಾಮ ಪಂಚಾಯಿತಿಯ ಮೂವರು ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣದ ಕಾರ್ಯಾದೇಶ ನೀಡಲಾಯಿತು.
ಜಿ.ಪಂ.ಮುಖ್ಯ ಯೋಜನಾಧಿಕಾರಿ ಗ್ರಾಯಿತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಾಸದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಎಸ್ ಬಿಎಂ ಸಮಾಲೋಚಕಿ ಪ್ರಮೀಳ,  ಸೇರಿದಂತೆ ಮತ್ತಿತರು ಉಪಸ್ಥಿರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಕೋಟೆ ನಾಡಿನ ಮಹಿಳೆಯರಿಗೆ ಸುವರ್ಣಾವಕಾಶ ಮನಸೂರೆಗೊಳ್ಳುವ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಮಿಸ್ ಮಾಡಬೇಡಿ
Next Article ಹಸಿವು ಮುಕ್ತ ರಾಜ್ಯವಾಗಿಸಲು ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ: ಹೆಚ್. ಆಂಜನೇಯ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.